“ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ” : ರಾಹುಲ್ ಗಾಂಧಿ
ಕೋವಿಡ್ ನಿಯಂತ್ರಿಸುವಲ್ಲಿ ನರೇಂದ್ರ ಮೋದಿ ಸರ್ಕಾರ ನಿರ್ಲಕ್ಷ್ಯ ಧೋರಣೆಯನ್ನು ತೋರಿಸುತ್ತಿದೆ ಎಂದು ರಾಹುಲ್ ಕಿಡಿ
Team Udayavani, Feb 17, 2021, 11:11 AM IST
ನವ ದೆಹಲಿ : ಬ್ರೆಜ್ಹಿಲ್ ಹಾಗೂ ದಕ್ಷಿಣ ಆಫ್ರಿಕಾದಿಂದ ರೂಪಾಂತರಿ ಕೋವಿಡ್ ವೈರಾಣು ಭಾರತಕ್ಕೆ ಬಂದಿರುವುದನ್ನು ಭಾರತೀಯ ಔಷಧ ಸಂಶೋಧನಾ ಘಟಕ ದೃಢಪಡಿಸಿದ ಬೆನ್ನಿಗೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಕೋವಿಡ್ ನಿಯಂತ್ರಿಸುವಲ್ಲಿ ನರೇಂದ್ರ ಮೋದಿ ಸರ್ಕಾರ ನಿರ್ಲಕ್ಷ್ಯ ಧೋರಣೆಯನ್ನು ತೋರಿಸುತ್ತಿದೆ ಎಂದು ರಾಹುಲ್ ಗುಡುಗಿದ್ದಾರೆ.
ಓದಿ : ಟೇಕ್ ಆಫ್ ಗೆ ಸಿದ್ಧವಾಗುತ್ತಿದೆ ಫ್ಲೈಯಿಂಗ್ ಕಾರ್…! ಇನ್ಮೇಲೆ ಪ್ರಯಾಣ ಮತ್ತಷ್ಟು ಸುಖಮಯ…
“GOI (ಗವರ್ನಮೆಂಟ್ ಆಫ್ ಇಂಡಿಯಾ) ಕೋವಿಡ್ 19 ಬಗ್ಗೆ ತುಂಬಾ ನಿರ್ಲಕ್ಷ್ಯ ವಹಿಸುತ್ತಿದೆ. ಓವರ್ ಕಾನ್ಫಿಡೆನ್ಸ್ ತೋರಿಸುತ್ತಿದೆ. ಆದರೇ, ಕೋವಿಡ್ ಸಮಸ್ಯೆ ಇನ್ನೂ ಮುಗಿದಿಲ್ಲ.” ಎಂದು ತಮ್ಮ ಟ್ವೀಟ್ ಖಾತೆಯಲ್ಲಿ ಕೇಂದ್ರ ಸರ್ಕಾರದ ಬಗ್ಗೆ ಹರಿಹಾಯ್ದಿದ್ದಾರೆ.
GOI is being grossly negligent and over confident about Covid-19.
It’s not over yet. pic.twitter.com/W3FcSkS2JD
— Rahul Gandhi (@RahulGandhi) February 17, 2021
“ಕಳೆದ ತಿಂಗಳಲ್ಲಿ, ದಕ್ಷಿಣ ಆಫ್ರಿಕಾದ ರೂಪಾಂತರಿ SARS-CoV-2 ಹೊಂದಿರುವ ನಾಲ್ವರನ್ನು ಪತ್ತೆ ಹಚ್ಚಲಾಗಿದೆ. ಬ್ರೆಜ್ಹಿಲ್ ನಿಂದ ಭಾರತಕ್ಕೆ ಮರಳಿದ ಓರ್ವರಿಗೆ ಸೋಂಕು ದೃಢಗೊಂಡಿದೆ” ಎಂದು ಮಂಗಲವಾರ(ಫೆ.16)ದಂದು ಮಾಧ್ಯಮಗಳಿಗೆ ಐ ಸಿ ಎಮ್ ಆರ್ ನ ನಿರ್ದೇಶಕ ಡಾ. ಬಲರಾಮ್ ಭಾರ್ಗವ್ ತಿಳಿಸಿದ್ದಾರೆ.
ಇನ್ನು, ಅವರ ಸಂಪರ್ಕಕ್ಕೆ ಬಂದಿರುವವರನ್ನು ಪತ್ತೆ ಹಚ್ಚುವ ಕಾರ್ಯ ಹಾಗೂ ಅವರನ್ನು ಪರೀಕ್ಷೆಗೆ ಒಳಪಡಿಸುವ ಕಾರ್ಯ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ “ಕೋವಿಡ್ ಸೋಂಕನ್ನು ನಿರ್ವಹಿಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರಗಳು ಮುಂದೆ ಹಾರ್ವರ್ಡ್ ವಿಶ್ವವಿದ್ಯಾಲಯದ ಸಂಶೋಧನಾ ವಿಷಯಗಳಾಗಲಿವೆ” ಎಂದು ರಾಹುಲ್ ಗಾಂಧಿ ಟ್ವೀಟ್ ನಲ್ಲಿ ಕೇಂದ್ರ ಸರ್ಕಾರಕ್ಕೆ ವ್ಯಂಗ್ಯ ಮಾಡಿದ್ದರು.
ಓದಿ : ಮನೆಕಟ್ಟುವ ಕನಸು ಭಗ್ನ!ಪೆಟ್ಟಿಗೆಯಲ್ಲಿನ ಲಕ್ಷಾಂತರ ರೂ. ಗೆದ್ದಲು ಹುಳಗಳಿಗೆ ಆಹಾರ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.