ಗೋಹತ್ಯೆ ಕಾಯ್ದೆ ತಿದ್ದುಪಡಿ ರದ್ದುಪಡಿಸಲು ಆಗ್ರಹ
ಭಾರತೀಯ ಪರಿವರ್ತನಾ ಸಂಘದಿಂದ ಪ್ರತಿಭಟನಾ ಮೆರವಣಿಗೆ
Team Udayavani, Feb 18, 2021, 4:19 PM IST
ಹಾಸನ: ಪಿಟಿಸಿಎಲ್ (ಪ್ರೋಹಿಬಿಷನ್ ಆಫ್ ಟ್ರಾನ್ಸ್‌ಫರ್ ಆಫ್ ಸಟೈìನ್ ಲ್ಯಾಂಡ್) ಕಾಯ್ದೆ ತಿದ್ದುಪಡಿ, ಕೃಷಿ ಹಾಗೂ ಗೋಹತ್ಯಾ ಕಾಯ್ದೆ ರದ್ದು ಮಾಡಬೇಕು. ತೈಲ ಮತ್ತು ಸಿಲಿಂಡರ್ ಬೆಲೆ ಇಳಿಸಬೇಕೆಂದು ಆಗ್ರಹಿಸಿ ಭಾರತೀಯ ಪರಿವರ್ತನಾ ಸಂಘ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು.
ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ಪ್ರತಿಭಟನಾಕಾರರು, ಕೆಲಕಾಲ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮೂಲ ಸೌಕರ್ಯ ವಂಚಿತರಾಗಿರುವ ಪರಿಶಿಷ್ಟ ಜಾತಿ, ಪಂಗಡದವರನ್ನು ಸ್ವಾವಲಂಬಿ ಗಳನ್ನಾಗಿ ಮಾಡಲು ಕರ್ನಾಟಕ ಸರ್ಕಾರ ಭೂಮಿ ಮಂಜೂರು ಮಾಡಿತ್ತು. ಈ ಭೂಮಿ ಯನ್ನು ಬೇರೆಯವರು ಖರೀದಿಸದಂತೆಯೂ ನಿಯಮ ರೂಪಿಸಿತ್ತು. ಪರಭಾರೆ ಮಾಡಿದ್ದರೆ ಅದನ್ನು ಮತ್ತೆ ನ್ಯಾಯಾಲಯದ ಮೂಲಕ ವಾಪಸ್ ಪಡೆದುಕೊಳ್ಳುವ ಭದ್ರತೆಯನ್ನು ಸರ್ಕಾರ ನೀಡಿತ್ತು. ಆದರೆ ಈಗ ಭಾರತದ ಸರ್ವೋತ್ಛ ನ್ಯಾಯಾಲಯ ಒಂದು ನಿರ್ದಿಷ್ಟ ಅವಧಿಯಲ್ಲಿ ಅರ್ಜಿ ಸಲ್ಲಿಸದಿದ್ದಲ್ಲಿ ಪರಭಾರೆ ಭೂಮಿಯನ್ನು ಪರಿಶಿಷ್ಟಜಾತಿ, ಪಂಗಡಗಳು ವಾಪಸ್ಸು ಪಡೆಯಲು ಆಗುವುದಿಲ್ಲ ಎಂದು ತೀರ್ಪು ನೀಡಿದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆಂದರು.
ಭೂ ಪರಭಾರೆ ಮಾಡಿದವರು ನಿರ್ದಿಷ್ಟ ಅವಧಿಯಲ್ಲಿ ಅರ್ಜಿ ಹಾಕಿಲ್ಲ ಎಂಬ ನೆಪಹೇಳಿ ಕರ್ನಾಟಕದ ವಿವಿಧ ನ್ಯಾಯಾಲಯಗಳು ಪರಿಶಿಷ್ಟ ಜಾತಿ, ಪಂಗಡಗಳ ಜನ ಸಲ್ಲಿಸಿದ ಅರ್ಜಿಗಳನ್ನೆಲ್ಲಾ ವಜಾಮಾಡಿ ಭೂಮಿ ಕಿತ್ತು ಕೊಳ್ಳುತ್ತಿದ್ದಾರೆ. ಈ ರೀತಿ ಪರಭಾರೆ ಭೂಮಿ ಯನ್ನು ಸರ್ಕಾರ ವಾಪಸ್ ಪಡೆದು ಪರಿಶಿಷ್ಟ ಜಾತಿಯ ಪದವೀಧರ ನಿರುದ್ಯೋಗಿಗಳಿಗೆ ತಲಾ 2 ಎಕರೆಯಂತೆ ಹಂಚಿಕೆ ಮಾಡಬೇಕು.ಈ ಭೂಮಿ ಯಾವುದೇ ಕಾರಣಕ್ಕೂ ಶ್ರೀಮಂತರ ಪಾಲಾಗಲು ಬಿಡಬಾರದೆಂದರು.
ಬೆಲೆ ಏರಿಕೆ ತಡೆಗಟ್ಟಿ: ರಾಜ್ಯ ಸರ್ಕಾರ ಇತ್ತೀಚೆಗೆ ಆತುರವಾಗಿ ಜಾರಿಗೆ ತಂದಿರುವ ಗೋಹತ್ಯಾ ನಿಷೇಧ ಕಾನೂನು ರೈತರನ್ನು ತೀರಾ ಸಂಕಷ್ಟಕ್ಕೀಡು ಮಾಡಿದೆ. ದನದ ಮಾಂಸ ತಿನ್ನುವವರಿಗೆ ಕುರಿ – ಕೋಳಿ ಹಾಗೂ ಮೇಕೆ ಮಾಂಸಕ್ಕೆ ಹೋಗಲು ಪರ್ಯಾಯ ಮಾರ್ಗವಿದೆ. ಆದರೆ, ರೈತರು ಪಶುಗಳನ್ನು ಸಾಕುವ – ಸಂರಕ್ಷಿಸುವ ಹಾಗು ಮಾರಾಟ ಮಾಡುವ ಹಕ್ಕನ್ನು ಕಳೆದುಕೊಳ್ಳ ಲಿದ್ದಾರೆ. ಸರ್ಕಾರಗಳು ಈ ಕರಾಳ ಕಾನೂನು ಗಳನ್ನು ವಾಪಸ್ ಪಡೆಯಬೇಕು. ಕೇಂದ್ರದ ಸರ್ಕಾರ ಪೆಟ್ರೋಲ್, ಡಿಸೇಲ್, ಗ್ಯಾಸ್ ಸಿಲಿಂಡರ್‌ಗಳ ಬೆಲೆ ಏರಿಕೆ ತಡೆಗಟ್ಟ ಬೇಕೆಂದರು.
ಹಿರಿಯ ದಲಿತ ಸಂಘಟನೆಗಳ ಮುಖಂಡರಾದ ಕೃಷ್ಣದಾಸ್, ಸ್ಟೀವನ್ ಪ್ರಕಾಶ್, ಕಾಡೂÉರು ಮೋಹನ್, ವಿನೋದ್ ರಾಜು, ಎನ್.ಯೋಗೀಶ್, ರಾಮು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.