ಶೈಕ್ಷಣಿಕ ಸಾಲ ಮನ್ನಾ ಆಗಲಿ
ಶೈಕ್ಷಣಿಕ ಸಾಲ ಮನ್ನಾಕ್ಕೆ ಒತ್ತಾಯಿಸಿ ಸುದ್ದಿಗೋಷ್ಠಿ ನಡೆಯಿತು.
Team Udayavani, Feb 18, 2021, 5:13 PM IST
ಚಿತ್ರದುರ್ಗ: ರಾಷ್ಟ್ರೀಕೃತ ಬ್ಯಾಂಕುಗಳಿಂದ ಬಡ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಪಡೆದಿರುವ ಸಾಲವನ್ನು ರಾಜ್ಯ ಸರ್ಕಾರ ಇಲ್ಲವೇ ಆಯಾ ಸಮುದಾಯದ ಅಭಿವೃದ್ಧಿ ನಿಗಮದಿಂದ ಪಾವತಿಸಿ ವಿದ್ಯಾರ್ಥಿಗಳನ್ನು ಸಾಲದಿಂದ ಮುಕ್ತರಾಗಿಸಬೇಕು ಎಂದು ಕರ್ನಾಟಕ ಬಂಜಾರ ಜನಜಾಗೃತಿ ಅಭಿಯಾನ ಸಮಿತಿ ಮತ್ತು ಪ್ರಗತಿಪರ ಚಿಂತಕ ಸಮುದಾಯಗಳ ಒಕ್ಕೂಟ ಒತ್ತಾಯಿಸಿದೆ.
ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಬಂಜಾರ ಜನಜಾಗೃತಿ ಅಭಿಯಾನ ಸಮಿತಿ ಪ್ರಧಾನ
ಕಾರ್ಯದರ್ಶಿ ಆರ್. ನಿಂಗಾ ನಾಯ್ಕ, ಎಂಟತ್ತು ವರ್ಷಗಳ ಹಿಂದೆ ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣಕ್ಕಾಗಿ ಸಾಲ ಪಡೆದಿರುವ ವಿದ್ಯಾರ್ಥಿಗಳಿಗೆ ಸಾಲ ಮರುಪಾವತಿಸುವಂತೆ ಬ್ಯಾಂಕ್ ಗಳು ನೋಟಿಸ್ ನೀಡುತ್ತಿವೆ. ಆದರೆ, ಕೊರೊನಾ ಕಾರಣಕ್ಕೆ ಉದ್ಯೋಗ ಕಳೆದುಕೊಂಡಿರುವವರು ಹೇಗೆ ಸಾಲ ಪಾವತಿಸಲು ಸಾಧ್ಯ ಎಂದು ಪ್ರಶ್ನಿಸಿದರು.
ಇದು ಬಡ್ಡಿರಹಿತ ಸಾಲವಾಗಿದ್ದು, ರಾಜ್ಯ ಸರ್ಕಾರ ಅಥವಾ ಆಯಾ ಜಾತಿಯ ಅಭಿವೃದ್ದಿ ನಿಗಮದಿಂದಲೇ ಸಾಲದ ಹಣ ಪಾವತಿಯಾಗಬೇಕು. ಶಿಕ್ಷಣ ಮುಗಿಸಿರುವ ಕೆಲವರು ಬೆಂಗಳೂರಿನ ಖಾಸಗಿ ಕಂಪನಿಗಳಲ್ಲಿ ಕೆಲಸಕ್ಕೆ ಸೇರಿ ಜೀವನ ಸಾಗಿಸುತ್ತಿದ್ದರು. ಕೊರೊನಾ ವೈರಸ್
ಕಾಣಿಸಿಕೊಂಡಾಗಿನಿಂದಲೂ ತಮ್ಮ ತಮ್ಮ ಊರುಗಳಿಗೆ ಬಂದು ಉದ್ಯೋಗವಿಲ್ಲದೆ ಅತಂತ್ರರಾಗಿದ್ದಾರೆ. ಈ ನಿಟ್ಟಿನಲ್ಲಿ ಬ್ಯಾಂಕ್
ಗಳು ಸಾಲ ಮರುಪಾವತಿಸುವಂತೆ ಪೀಡಿಸಬಾರದೆಂದು ಆಗ್ರಹಿಸಿದರು.
ರಾಜ್ಯ ಸರ್ಕಾರದ ಮೂಲಕ ವಿವಿಧ ಸಮುದಾಯದ ಅಭಿವೃದ್ಧಿ ನಿಗಮಗಳಿಗೆ ಮಂಜೂರು ಮಾಡಲಾಗಿರುವ ಹಣ ಖರ್ಚಾಗದೆ ಕೊಳೆಯುತ್ತಿದೆ. ಅಂತಹ ಹಣವನ್ನೆಲ್ಲಾ ಕ್ರೋಢೀಕರಿಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಬ್ಯಾಂಕ್‌ಗಳಲ್ಲಿ ಪಡೆದುಕೊಂಡಿರುವ ಸಾಲಕ್ಕೆ ಜಮಾ ಮಾಡಬೇಕು. ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಡ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಹಣ ಮೀಸಲಿಡಬೇಕು.
ಈ ಸಂಬಂಧ ಎಲ್ಲಾ ತಾಂಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ, ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಈವರೆಗೆ ಉತ್ತರ ಬಂದಿಲ್ಲ ಎಂದರು.
ರೈತ ಮುಖಂಡ ಲಕ್ಷ್ಮೀಕಾಂತ್ ಮಾತನಾಡಿ, ಬಡ ವಿದ್ಯಾರ್ಥಿಗಳು ರಾಷ್ಟ್ರೀಕೃತ ಬ್ಯಾಂಕುಗಳಿಂದ ಪಡೆದಿರುವ ಸಾಲವನ್ನು ರಾಜ್ಯ ಸರ್ಕಾರ ಹಾಗೂ ವಿವಿಧ ಜಾತಿಗಳ ಅಭಿವೃದ್ಧಿ ನಿಗಮಗಳು ಪಾವತಿಸಿ ವಿದ್ಯಾರ್ಥಿಗಳನ್ನು ಸಾಲದಿಂದ ಮುಕ್ತಿಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ
ಪ್ರತಿಭಟನೆ ನಡೆಸಲಾಗುವುದು ಎಂದರು.
ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸಎಸ್.ಬಿ. ಲೋಕೇಶ್, ಅಬ್ದುಲ್ ರೆಹಮಾನ್, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಲ್. ರಮೇಶ್, ವಿ. ಮಹಾಂತೇಶ್, ಈ. ಮಾರುತಿ, ಷಣ್ಮುಖಪ್ಪ, ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ತಾಳಿಕೆರೆ, ತಿಪ್ಪೇಸ್ವಾಮಿ, ಶಶಿಕಿರಣ್, ಎನ್ .ಜಯರಾಮ್, ಬಂಜಾರ ಸಮಾಜದ ಯುವ ಮುಖಂಡ ತಿಪ್ಪೇಸ್ವಾಮಿ ಇದ್ದರು.
ಓದಿ : ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.