ಮೊದಲು ಅಭಿಷೇಕ್ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿ… : ಶಾ ಗೆ ಮಮತಾ ಚಾಲೆಂಜ್
ಮತ್ತೆ ಟಿ ಎಮ್ ಸಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಮಮತಾ ಬ್ಯಾನರ್ಜಿ ವಿಶ್ವಾಸ
Team Udayavani, Feb 18, 2021, 6:34 PM IST
ಪಶ್ಚಿಮ ಬಂಗಾಳ : ತೃಣ ಮೂಲ ಕಾಂಗ್ರೆಸ್ ನ ನಾಯಕಿ ಹಾಗೂ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಚುನಾವಣಾ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸವಾಲು ಹಾಕಿದ್ದಾರೆ.
ಪೈಲಾನ್ ನಲ್ಲಿ ಚುನಾವಣಾ ಮತ ಪ್ರಚಾರವನ್ನುದ್ದೇಶಿ ಮಾತಾಡಿದ ಬ್ಯಾನರ್ಜಿ, ಶಾ ವಿರುದ್ದ ತೀವ್ರ ವಾಗ್ದಾಳಿ ಮಾಡಿದ್ದಾರೆ. ಮೊದಲು ನನ್ನ ಅಳಿಯ ಅಭಿಷೇಕ್ ಬ್ಯಾನರ್ಜಿಯನ್ನು ಎದುರಿಸಿ, ಆಮೇಲೆ ನನ್ನನ್ನು ಎದುರಿಸುವ ಯೋಚನೆ ಮಾಡಿ ಎಂದು ಖಡಕ್ ಸವಾಲು ಹಾಕಿದ್ದಾರೆ.
ಓದಿ : ಬೆಳ್ಳಿ ಇಟ್ಟಿಗೆಗಳನ್ನು ಕಳುಹಿಸಬೇಡಿ : ಭಕ್ತರಿಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಮನವಿ
ಅಭಿಷೇಕ್ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಸಂಸದಾರಗಲು ಸುಲಭವಾದ ಹಾದಿಯನ್ನು ಹಿಡಿಯಬಹುದಿತ್ತು. ಆದರೇ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜನಾದೇಶವನ್ನು ಪಡೆದಿದ್ದಾರೆ ಎಂದು ಬ್ಯಾನರ್ಜಿ ಹೇಳಿದ್ದಾರೆ.
“ನಾನು ಈ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸವಾಲು ಹಾಕುತ್ತೇನೆ. ಮೊದಲು ಅಭಿಷೇಕ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ, ಆಮೇಲೆ ನನ್ನೊಂದಿಗೆ ಸ್ಪರ್ಧಿಸಲು ಯೋಚನೆ ಮಾಡಿ” ಎಂದು ನೆರೆದ ಪಕ್ಷದ ಬೆಂಬಲಿಗರ ಚೀರಾಟದ ಸದ್ದುಗಳ ನಡುವೆ ಮಮತಾ ನುಡಿದರು.
ಈ ಬಾರಿಯ ಚುನಾವಣೆಯಲ್ಲಿ ಟಿ ಎಮ್ ಸಿ ಬಹುಮತದಲ್ಲಿ ಗೆಲ್ಲುತ್ತದೆ ಎನ್ನುವುದಕ್ಕೆ ಸಂಶಯವಿಲ್ಲ. ಈ ಹಿಂದಿನ ಚುನಾವಣೆಯಲ್ಲಿನ ತನ್ನದೇ ದಾಖಲೆಗಳನ್ನು ಮುರಿದು ಮತ್ತೆ ಟಿ ಎಮ್ ಸಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತ ಪಡಿಸಿದರು.
ಈ ಹಿಂದೆ ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರು ಮಮತಾ ಬ್ಯಾನರ್ಜಿಯವರದ್ದು ವಂಶಪಾರಂಪರ್ಯ ಕಾರಕೀಯ ಎಂದು ಆರೋಪಿಸಿದ್ದರು. ಮಮತಾ ಅವರ ‘Bhaipo’ ಅಥವಾ ಸೋದರಳಿಯ ಇಲ್ಲಿ ಆಧ್ಯತೆಯನ್ನು ಪಡೆದಿದ್ದಾರೆ. ನಿಮ್ಮ ಮತ ಟಿ ಎಮ್ ಸಿಗೆ ಚಲಾವಣೆಯಾದರೆ, ಅಂತಿಮವಾಗಿ ರಾಜ್ಯದ ಮುಖ್ಯಮಂತ್ರಿಯ ಸ್ಥಾನವನ್ನೂ ಮಮತಾ ತಮ್ಮ ಅಳಿಯನಿಗೆ ಕೊಡುತ್ತಾರೆ ಎಂದು ಆರೋಪಿಸಿದ್ದರು.
ಓದಿ : ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.