ಇ ಆಡಳಿತ ಕಾರ್ಯಾಗಾರ
ಜಿಲ್ಲಾ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಗ್ರೂಪ್ ಎ ಅಧಿ ಕಾರಿಗಳಿಗೆ ಏರ್ಪಡಿಸಿದ್ದ ಸೈಬರ್ ಸೆಕ್ಯೂರಿಟಿ ಮತ್ತು ಇ-ಆಡಳಿತ ತರಬೇತಿ ಕಾರ್ಯಾಗಾರದಲ್ಲಿ ಅಪರ ಡಿಸಿ ಮಂಜುನಾಥ್ ಮಾತನಾಡಿದರು.
Team Udayavani, Feb 18, 2021, 6:49 PM IST
ಬಳ್ಳಾರಿ: ಸರ್ಕಾರದ ಯೋಜನೆಗಳು, ನೀತಿ-ನಿಯಮಗಳು ಹಾಗೂ ಸರ್ಕಾರದ ಸಕಲ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಅತ್ಯಂತ ಕ್ಷಿಪ್ರಗತಿಯಲ್ಲಿ ತಲುಪಿಸುವಲ್ಲಿ ಸೈಬರ್ ವ್ಯವಸ್ಥೆ ಮತ್ತು ಇ-ಆಡಳಿತ ವ್ಯವಸ್ಥೆ ಅತ್ಯಂತ ಸಹಕಾರಿಯಾಗಿದೆ ಎಂದು ಅಪರ ಜಿಲ್ಲಾ ಧಿಕಾರಿ ಪಿ.ಎಸ್. ಮಂಜುನಾಥ ಹೇಳಿದರು.
ನಗರದ ಜಿಲ್ಲಾ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಗ್ರೂಪ್-ಎ ಅ ಧಿಕಾರಿಗಳಿಗಾಗಿ ಬುಧವಾರ ಏರ್ಪಡಿಸಿದ್ದ ಸೈಬರ್ ಸೆಕ್ಯೂರಿಟಿ ಮತ್ತು ಇ-ಆಡಳಿತ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರದಲ್ಲಿ ಇತ್ತೀಚಿನ ದಿನಗಳಲ್ಲಿ ಇ-ಆಡಳಿತ ವ್ಯವಸ್ಥೆ ಅತ್ಯಂತ ಪರಿಣಾಮಕಾರಿಯಾಗಿದೆ ಮತ್ತು ಜನರ ಸಮಸ್ಯೆ ಮತ್ತು ಸೇವೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗಿದೆ. ಸೈಬರ್ ವ್ಯವಸ್ಥೆಯಿಂದ
ಅನುಕೂಲ ಎಷ್ಟಿದೆಯೋ ಅನಾನುಕೂಲವೂ ಅಷ್ಟೇ ಇದೆ. ಈ ಕುರಿತು ನಾವೆಲ್ಲರೂ ತಿಳಿದುಕೊಳ್ಳಬೇಕಿದೆ ಎಂದ ಅವರು ಸರ್ಕಾರಿ
ಅಧಿ ಕಾರಿ ಮತ್ತು ಸಿಬ್ಬಂದಿಗೆ ವೃತ್ತಿಕೌಶಲ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ರೀತಿಯ ತರಬೇತಿಗಳು ಅತ್ಯಂತ ಉಪಯುಕ್ತವಾಗಿದ್ದು, ಸದ್ವಿನಿಯೋಗ
ಮಾಡಿಕೊಳ್ಳಬೇಕು ಎಂದರು.
ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯೆ ಎಂ. ಸುನೀತಾ ಮಾತನಾಡಿದರು. ಸೈಬರ್ ಸೆಕ್ಯೂರಿಟಿ ಮತ್ತು ಇ-ಆಡಳಿತದ ಕುರಿತು ಬಳ್ಳಾರಿ ಎನ್‌ಐಸಿ ಪ್ರಿನ್ಸಿಪಲ್ ಸಿಸ್ಟಮ್ ಅನಾಲಿಸ್ಟ್ ವೆಂಕಟರಮಣ ಹಾಗೂ ತಾಂತ್ರಿಕ ನಿರ್ದೇಶಕ ಶಿವಪ್ರಕಾಶ ವಸ್ತ್ರದ್ ತರಬೇತಿ ನೀಡಿದರು. ನಂತರ ತರಬೇತಿಯಲ್ಲಿ ಭಾಗವಹಿಸಿದ್ದ ಗ್ರೂಪ್-ಎ ಅ ಧಿಕಾರಿಗಳಿಗೆ ತರಬೇತಿ ಕೇಂದ್ರದ ವತಿಯಿಂದ
ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಈ ವೇಳೆ ಜಿಲ್ಲಾ ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲ ಶ್ರೀಹರಿ, ತರಬೇತಿ ಕೇಂದ್ರದ ಉಪಪ್ರಾಚಾರ್ಯ ಸುರೇಶಬಾಬು, ಬೋಧಕ
ಶಿವರಾಜ ಇದ್ದರು.
ಓದಿ : ಕೆಲವೇ ದಿನಗಳಲ್ಲಿ ವಿಸ್ಟ್ರಾನ್ ಕಂಪನಿಯ ಉತ್ಪಾದನೆ ಪುನರಾರಂಭ: ಜಗದೀಶ್ ಶೆಟ್ಟರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.