ಕಸಾಪ ಸದಸ್ಯತ್ವಕ್ಕೆ ಅಭಿಯಾನ: ಜೋಶಿ

ಕನ್ನಡ ಸಾಹಿತ್ಯ ಪರಿಷತ್‌ ಕನ್ನಡಿಗರ ಸ್ವಾಭಿಮಾನದ ಸಂಸ್ಥೆಯಾಗಿಸುವೆ

Team Udayavani, Feb 18, 2021, 6:59 PM IST

18-22

ಸಾಗರ: ಕನ್ನಡ ಸಾಹಿತ್ಯ ಪರಿಷತ್‌ ಏಳು ಕೋಟಿ ಕನ್ನಡಿಗರ ಪ್ರಾತಿನಿಧಿ ಕ ಸಂಸ್ಥೆಯಾಗಿಸುವ ನಿಟ್ಟಿನಲ್ಲಿ ನನ್ನ ಆಯ್ಕೆಯಾದರೆ ಅಗತ್ಯ ಪ್ರಯತ್ನ
ನಡೆಸಲಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ನಾಡೋಜ ಡಾ| ಮಹೇಶ್‌ ಜೋಶಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆಯ್ಕೆಯಾಗುವುದು ಬಹುತೇಕ ಖಚಿತ. ಹೋದ ಕಡೆಯೆಲ್ಲಾ ಪರಿಷತ್‌ನ ಸದಸ್ಯರು ನನ್ನ ಮೇಲೆ ತೋರಿಸುತ್ತಿರುವ ಅಭಿಮಾನ ನನಗೆ ಗೆಲುವಿನ ವಿಶ್ವಾಸ ಮೂಡಿಸಿದೆ. ನನ್ನ ಅವಧಿಯಲ್ಲಿ ಪರಿಷತ್ತನ್ನು ಯಾವುದೋ ವ್ಯಕ್ತಿ, ಪಕ್ಷ, ಪ್ರದೇಶದ ಗುಂಪು ಆಗಲು ಬಿಡುವುದಿಲ್ಲ. ಇದು ಜನಸಾಮಾನ್ಯರ ಪರಿಷತ್‌ ಆಗಬೇಕು ಎನ್ನುವುದು ನನ್ನ ಉದ್ದೇಶವಾಗಿದೆ. ಪರಿಷತ್‌ ಸದಸ್ಯರ ಸಂಖ್ಯೆ 3.50 ಲಕ್ಷ ಮಾತ್ರ ಇದೆ. ಪರಿಷತ್‌ ಚೌಕಟ್ಟಿನೊಳಗೆ ಎಲ್ಲರೂ ಬರಬೇಕು ಎನ್ನುವ ಉದ್ದೇಶದಿಂದ ಗ್ರಾಮ-
ಗ್ರಾಮಗಳಲ್ಲಿ ಅಭಿಯಾನ ನಡೆಸಿ ಪರಿಷತ್‌ ಸದಸ್ಯರ ಸಂಖ್ಯೆಯನ್ನು ಹೆಚ್ಚು ಮಾಡಲಾಗುತ್ತದೆ. ನಾನು ಗಾಳಿಗೋಪುರ ಕಟ್ಟುವುದಿಲ್ಲ. ಬದಲಾಗಿ ಸಮಸ್ತ ಕನ್ನಡಿಗರ ಸ್ವಾಭಿಮಾನದ ಸಂಸ್ಥೆಯಾಗಿ ಸಾಹಿತ್ಯ ಪರಿಷತ್‌ ಕಟ್ಟುತ್ತೇನೆ ಎಂದು ತಿಳಿಸಿದರು.

ಪರಿಷತ್‌ನ ಸದಸ್ಯರಾಗಬೇಕಾದರೆ ಒಂದೂವರೆ ಸಾವಿರ ರೂ. ಕೊಡಬೇಕಾಗಿದೆ. ಇದನ್ನು 250 ರೂ.ಗೆ ಇಳಿಸುವ ಉದ್ದೇಶ ಹೊಂದಿದ್ದೇನೆ. ಜೊತೆಗೆ ಭಾರತ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವ ಕನ್ನಡ ಭಾಷೆಯ ಸೈನಿಕರಿಗೆ, ಅರೆಸೇನೆ ಹಾಗೂ ದಿವ್ಯಾಂಗರಿಗೆ
ಉಚಿತವಾಗಿ ಗೌರವ ಸದಸ್ಯತ್ವ, ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಕೇವಲ 100 ರೂ.ಗೆ ಪರಿಷತ್‌ ಸದಸ್ಯತ್ವ ನೀಡಲು ಉದ್ದೇಶಿಸಲಾಗಿದೆ.
ಪರಿಷತ್ತನ್ನು ಸರ್ಕಾರಿ ಕಚೇರಿಯಾಗಿಸದೆ ವಾರದ ಏಳೂ ದಿನವೂ ಪರಿಷತ್‌ ತೆರೆದು ತನ್ನ ಕಾರ್ಯ ಚಟುವಟಿಕೆಯನ್ನು ನಡೆಸಿಕೊಂಡು ಹೋಗುವಂತೆ ನೋಡಿಕೊಳ್ಳಲಾಗುತ್ತದೆ. ಸದಸ್ಯತ್ವ ಪಡೆಯಲು ಅರ್ಜಿ ಸಲ್ಲಿಸುವ ಅಗತ್ಯ ಇಲ್ಲದಂತೆ ಹೊಸದೊಂದು
ಆ್ಯಪ್‌ ತಯಾರಿಸುವ ಉದ್ದೇಶವಿದ್ದು, ಆ್ಯಪ್‌ ಮೂಲಕ ಮನೆಯಲ್ಲಿಯೇ ಕುಳಿತು ಸಾಹಿತ್ಯ ಪರಿಷತ್‌ ಸದಸ್ಯರಾಗಲು ಅವಕಾಶ ಕಲ್ಪಿಸಲಾಗುತ್ತದೆ.
ಸದಸ್ಯರಿಗೆ 15 ದಿನದಲ್ಲಿ ಸ್ಮಾರ್ಟ್‌ ಕಾರ್ಡ್‌ ಮಾದರಿಯ ಗುರುತಿನ ಪತ್ರವನ್ನು ನೀಡಲಾಗುತ್ತದೆ ಎಂದು ಹೇಳಿದರು.

ಒಂದೂ ಕನ್ನಡ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ. ಕನ್ನಡ ಅನ್ನದ ಭಾಷೆ ಆಗಬೇಕು. ಈ ನಿಟ್ಟಿನಲ್ಲಿ ಕನ್ನಡ ನಾಡು- ನುಡಿಗೆ ಧಕ್ಕೆ ಉಂಟಾದಾಗ ಅದಕ್ಕೆ ಸರ್ಕಾರ ಸೂಕ್ತವಾಗಿ ಸ್ಪಂದಿಸದೆ ಹೋದಲ್ಲಿ ಸರ್ಕಾರದ ವಿರುದ್ಧ ಧ್ವನಿ ಎತ್ತುವ ಕೆಲಸವನ್ನು ಮಾಡಲಾಗುತ್ತದೆ. ಪರಿಷತ್‌ ಚಟುವಟಿಕೆ ಪಾರದರ್ಶಕವಾಗಿಸುವುದು, ಮಾತೃಭಾಷೆಯಾಗಿ ಕನ್ನಡವನ್ನು ಬೆಳೆಸುವುದು, ಪರಿಷತ್ತಿನ ನಿಬಂಧನೆಗಳ ಪರಿಷ್ಕರಣೆ, ಕಾರ್ಯಕಾರಿ ಸಮಿತಿಯ ಶಕ್ತೀಕರಣ, ಯುವ ಸಾಹಿತಿಗಳು ಹಾಗೂ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ, ಅಖೀಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ
ಮಹಿಳೆಯರನ್ನು ಅಧ್ಯಕ್ಷರನ್ನಾಗಿ ಮಾಡುವುದು, ಎಲ್ಲ ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ, ವಿಶ್ವ ಕನ್ನಡ ಸಮ್ಮೇಳನ ಸಂಯೋಜನೆ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಭಾಷೆಯ ಗೌರವ ಹೆಚ್ಚಿಸುವ ಕೆಲಸ ಮಾಡುವ ಉದ್ದೇಶ ನನ್ನದಾಗಿದೆ ಎಂದರು.

ಗೋಷ್ಠಿಯಲ್ಲಿ ಪರಿಷತ್‌ನ ಜಿಲ್ಲಾ ಕಾರ್ಯದರ್ಶಿ ಸುಂದರರಾಜ್‌, ಗಂಗಮ್ಮ ಆರ್‌. ಇದ್ದರು.

ಓದಿ : ಕೆಲವೇ ದಿನಗಳಲ್ಲಿ ವಿಸ್ಟ್ರಾನ್‌ ಕಂಪನಿಯ ಉತ್ಪಾದನೆ ಪುನರಾರಂಭ: ಜಗದೀಶ್‌ ಶೆಟ್ಟರ್‌

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.