ಬೈಪಾಸ್‌ ರಸ್ತೆ ನಿರ್ಮಾಣ ನಿಯಮ ಉಲ್ಲಂಘನೆ: ನೀರಲಕೇರಿ


Team Udayavani, Feb 19, 2021, 3:05 PM IST

Congress Leader Niralakeri

ಧಾರವಾಡ: ಅವಳಿನಗರ ವ್ಯಾಪ್ತಿಯಲ್ಲಿ ಬೈಪಾಸ್‌ ರಸ್ತೆ ನಿರ್ಮಾಣ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಪಿ.ಎಚ್‌. ನೀರಲಕೇರಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಪಾಸ್‌ ರಸ್ತೆಯೇ ನಿಯಮ ಬಾಹಿರವಾಗಿ ಉಲ್ಲಂಘನೆಯಾಗಿದೆ. ಈ ಬಗ್ಗೆ ನಂದಿ ಇನ್ರ್ಫಾಸ್ಟ್ರಕ್ಚರ್‌ ಕಂಪನಿಗೆ 5 ಬಾರಿ ನೋಟಿಸ್‌ ನೀಡಿದರೂ ಮಾಲೀಕ ಅಶೋಕ ಖೇಣಿ ಕ್ಯಾರೇ ಎನ್ನದಿರುವುದು ವಿಷಾದನೀಯ. ಈ ಹಿಂದೆ ಧಾರವಾಡ ಹೈ ಕೋರ್ಟ್‌ ನ್ಯಾಯಮೂರ್ತಿ ನಾರಾಯಣಸ್ವಾಮಿ ಅವರು ನಂದಿ ಹೈ ವೈ ಇನ್ರ್ಫಾಸ್ಟ್ರಕ್ಚರ್‌, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಸಮಸ್ಯೆ ಸರಿಪಡಿಸುವಂತೆ ಸೂಚಿಸಿದ್ದರು.

1998ರಲ್ಲಿ ಆರಂಭಗೊಂಡ ಹು-ಧಾ ಬೈಪಾಸ್‌ ರಸ್ತೆ ವ್ಯಾಪ್ತಿಯಲ್ಲಿ 15-20 ಹಳ್ಳಿಗಳು ಬರುತ್ತವೆ. ಇಲ್ಲಿ ಈವರೆಗೂ ಒಟ್ಟು 12000 ಜಾನುವಾರುಗಳು ಅಪಘಾತದಲ್ಲಿ ಸಾವನ್ನಪ್ಪಿವೆ. ಭಾರತ್‌ ಪೋರ್ಚ್‌ ಪುಣೆ ಕಂಪನಿ, ನಂದಿ ಇನ್ರ್ಫಾಸ್ಟ್ರಕ್ಚರ್‌, ರಾಷ್ಟೀಯ ಹೆದ್ದಾರಿ ಪ್ರಾ ಧಿಕಾರ ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರ ನಡುವೆ ನಡೆದ ಈ ಒಪ್ಪಂದದಲ್ಲಿ ಅಶೋಕ ಖೇಣಿ ಹಿತವನ್ನು ಕಾಪಾಡಲಾಗಿದೆ ಎಂದು ಆಪಾದಿಸಿದರು.

ಎನ್‌ಎಚ್‌-4ನ ಬೈಪಾಸ್‌ ಅಡಿ 403.8 ಕಿಮೀ ಇಂದ 432 ಕಿಮೀ ರಸ್ತೆ ಬರುತ್ತದೆ. ಅದರಲ್ಲಿ ನಾಲ್ಕು ಟ್ರಕ್‌ ಲೇಪ್‌ ಬೈ ಬರುತ್ತದೆ. 26 ವರ್ಷಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. 2018ರಲ್ಲಿ ಸಮಸ್ಯೆ ಬೆಳಕಿಗೆ ಬಂದಾಗ ಆಗಿನ ಧಾರವಾಡ ಹೈಕೋರ್ಟ್‌ ನ್ಯಾಯಮೂರ್ತಿ ನಾರಾಯಣಸ್ವಾಮಿ ಅವರೇ ಖುದ್ದು ಸಭೆ ಮಾಡಿ 13 ಸಮಸ್ಯೆ ಸರಿಮಾಡಲು ನೋಟಿಸ್‌ ನೀಡಲಾಗಿತ್ತು ಎಂದರು.

ಈ ಬಗ್ಗೆ ಇತ್ತೀಚೆಗೆ ದೆಹಲಿಯಲ್ಲಿ ಸಭೆ ನಡೆಸಿದ ಕೇಂದ್ರ ಸಚಿವರು ಆರು ಪಥದ ರಸ್ತೆ ಮಾಡುವ ಪ್ರಸ್ತಾಪ ಮುಂದಿಟ್ಟಿದ್ದಾರೆ. ಅದಕ್ಕಾಗಿ 1200 ಕೋಟಿ ಯೋಜನೆ ರೂಪಿಸಿದ ಬಗ್ಗೆ ಜನಪ್ರತಿನಿ ಧಿಗಳು ಹೇಳುತ್ತಾರೆ. ಆದರೆ ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾ ಧಿಕಾರ, ಯೋಜನಾ ಇಲಾಖೆ ಅಧಿ ಕಾರಿಗಳಿಗೆ ಮಾಹಿತಿಯೇ  ಇಲ್ಲ ಎಂದು ಹೇಳಿದರು. ಶ್ರೀಶೈಲಗೌಡ ಕಮತರ, ರವಿ ಗೌಳಿ, ವಿಲ್ಸನ್‌ ಫನಾಂìಡಿಸ್‌, ಐ.ಬಿ. ನಿಡಗುಂದಿ ಉಪಸ್ಥಿತರಿದ್ದರು.

ಇಂದಿನಿಂದ ಟೋಲ್‌ ಕೊಡಬ್ಯಾಡ್ರಿ ಅಭಿಯಾನ

ಬೈಪಾಸ್‌ ವ್ಯಾಪ್ತಿ ಒಟ್ಟು ಆರು ಟೋಲ್‌ ಬರುತ್ತವೆ. ಹು-ಧಾ ವಾಹನ ಸವಾರರು ಟೋಲ್‌ ಕೊಡಬಾರದು. ಫೆ. 19ರಿಂದ ಮಾ. 19ರವರೆಗೆ ಒಂದು ತಿಂಗಳ ಕಾಲ ಟೋಲ್‌ ಬಹಿಷ್ಕಾರ ಮಾಡಿ. ಯಾರೂ ದುಡ್ಡು ಕೊಡಬ್ಯಾಡ್ರಿ. ಆ ಮೂಲಕ ನಮ್ಮ ಅಭಿಯಾನಕ್ಕೆ ಬೆಂಬಲಿಸಿ ಎಂದು ಪಿ.ಎಚ್‌. ನೀರಲಕೇರಿ ಮನವಿ ಮಾಡಿದರು. ಮಾ. 21ರಂದು ಈ ಸಂಬಂಧ ಧಾರವಾಡದ ನರೇಂದ್ರ ಬೈಪಾಸ್‌ನಿಂದ ಗಬ್ಬೂರ ಕ್ರಾಸ್‌ ವರೆಗೆ ಸ್ವಾಭಿಮಾನ ಪಾದಯಾತ್ರೆ ಮಾಡುತ್ತೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.