ದ್ವಾರ ಬಾಗಿಲು ಬದಲಿಸಿದ ಗ್ರಾಮಸ್ಥರು !

­ಬೇಡಿಕೆಗೆ ಅಧಿಕಾರಿಗಳು ಸ್ಪಂದಿಸದಿರುವುದಕ್ಕೆ ಆಕ್ರೋಶ -ಪ್ರತಿಭಟನೆ

Team Udayavani, Feb 19, 2021, 3:13 PM IST

Rampur issue

ರಾಂಪುರ: ಸಮೀಪದ ಬೇವೂರಿನಲ್ಲಿ ಭೂ ಸೇನಾ ನಿಗಮದ ವತಿಯಿಂದ ಎಸ್‌.ಸಿ ಕಾಲೋನಿಯಲ್ಲಿ 12 ಲಕ್ಷರೂ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ| ಬಾಬು ಜಗಜೀವನರಾಮ್‌ ಸಮುದಾಯ ಭವನದ ಮುಖ್ಯದ್ವಾರದ ದಿಕ್ಕು ಬದಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಒತ್ತಾಯಿಸಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಭವನದ ಮುಖ್ಯ ದ್ವಾರವನ್ನು ಪೂರ್ವ ದಿಕ್ಕಿನಿಂದ ದಕ್ಷಿಣ ದಿಕ್ಕಿಗೆ ನಿರ್ಮಿಸಿದ್ದಾರೆ.

ಸಮುದಾಯ ಭವನದ ಎದುರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಎಸ್‌ಸಿ ಸಮಾಜದ ಬಾಂಧವರು ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿ ಪ್ರತಿಭಟಿಸಿದರು. ಇಕ್ಕಟ್ಟಾದ ಜಾಗದಲ್ಲಿ ಬಾಗಿಲು ನಿರ್ಮಾಣ ಮಾಡಬೇಡಿ, ದಕ್ಷಿಣ ದಿಕ್ಕಿಗೆ ಬಾಗಿಲು ನಿರ್ಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಭೂಸೇನಾ ನಿಗಮದ ಅಧಿಕಾರಿಗಳಿಗೆ ಲಿಖೀತವಾಗಿ ಮನವಿ ಸಲ್ಲಿಸಿದರೂ ಮನವಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ದ ಪ್ರತಿಭಟನೆ ಕೂಗಿ ಪೂರ್ವ ದಿಕ್ಕಿನ ಬಾಗಿಲು ಒಡೆದು ಹಾಕಿ ದಕ್ಷಿಣ ದಿಕ್ಕಿನೆಡೆಗೆ ಬದಲಾಯಿಸಿದರು.

ಸಮುದಾಯ ಭವನಕ್ಕೆ 12 ಲಕ್ಷ ರೂ. ಮಂಜೂರು ಆಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಪ್ಲಾÂನಿಂಗ್‌ ರಿಪೋರ್ಟ್‌ ಕೇಳಿದರೇ ಹಾರಿಕೆ ಉತ್ತರ ನೀಡಿ ಹೋಗುತ್ತಿದ್ದಾರೆ. ಕಟ್ಟಡ ತಳಪಾಯವು ಕಳಪೆ ಕಾಮಗಾರಿಯಿಂದ ಕೂಡಿದ್ದು, ಇದು ಹೀಗೆ ಮುಂದುವರಿದರೆ ಅಧಿಕಾರಿಗಳ ವಿರುದ್ದ ಉಗ್ರ ಪ್ರತಿಭಟನೆ ಕೈಗೊಳ್ಳಲಾಗುತ್ತದೆ ಎಂದು ಈರಪ್ಪ ಕಡೇಮನಿ ಎಚ್ಚರಿಸಿದ್ದಾರೆ.

ರಾಜಕೀಯ ಕುತಂತ್ರ: ಸಮುದಾಯ ಭವನ ನಿರ್ಮಾಣದಲ್ಲಿ ರಾಜಕೀಯ ಕುತಂತ್ರಿಗಳು ಸೇರಿದ್ದು, ತಮಗೆ ಬೇಕಾದಂತೆ ಕಟ್ಟಡ ನಿರ್ಮಾಣ ಮಾಡುವ ಯೋಚನೆ ಮಾಡುತ್ತಿದ್ದಾರೆ. ಆದರೆ, ಅಭಿವಧಿ ಕಾರ್ಯ  ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಇದನ್ನು ತಕ್ಷಣ ನಿಲ್ಲಿಸಿ ಸ್ಥಳೀಯರ ಆದೇಶ ಪಾಲಿಸಿ ನಿರ್ಮಿಸಬೇಕೆಂದು ಸ್ಥಳೀಯ ಚಿದಾನಂದ ಹೊಸಮನಿ ಆಗ್ರಹಿಸಿದ್ದಾರೆ.

ಶಿಸ್ತುಕ್ರಮಕ್ಕೂ ಬದ್ಧ: ಸಮುದಾಯ ಭವನದ ದಿಕ್ಕು ಬದಲಿಸುವುದರಿಂದ ಮುಖ್ಯ ಬಾಗಿಲು ದ್ವಾರದ  ಮುಂದೆ ಖಾಲಿ ಜಾಗ ಹೆಚ್ಚಿಗೆ ಸಿಗುತ್ತದೆ. ಮೇಲಾಗಿ ವಾಸ್ತು ಕೂಡ ಚೆನ್ನಾಗಿದೆ. ಸಮಾಜದವರು ಯಾವುದೇ ಕಾರ್ಯಕ್ರಮ ನಡೆಸಿದರು ಉಪಯೋಗವಾಗುತ್ತದೆ. ಹೀಗಾಗಿ ಈ ವಿಷಯದಲ್ಲಿ ಇಲಾಖೆಯವರು ನಮ್ಮ ವಿರುದ್ಧ ಯಾವುದೇ ಕ್ರಮ ಜರುಗಿಸಿದರು ಬದ್ಧರಾಗಿದ್ದೇವೆ ಎಂದು ಸ್ಥಳೀಯ ಇದೇ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.