ಇಂಧನ ಬೆಲೆ ಏರಿಕೆಗೆ ಆಕ್ರೋಶ
ಸರ್ಕಾರದ ದುರಾಡಳಿತದಿಂದ ಆರ್ಥಿಕತೆಗೆ ಧಕ್ಕೆ : ಗೋವಿಂದಪ್ಪ
Team Udayavani, Feb 19, 2021, 3:44 PM IST
ಹೊಸದುರ್ಗ: ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯಿಂದ ದಿನ ನಿತ್ಯದ ವಸ್ತುಗಳ ಬೆಲೆ ಏರಿಕೆಯಾಗಿ ಜನರ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಆರೋಪಿಸಿ ಹಾಗೂ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿ ಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ದುರಾಡಳಿತಕ್ಕೆ ದೇಶದ ಅರ್ಥ ವ್ಯವಸ್ಥೆ ಕುಸಿದಿದೆ. ಪ್ರತಿಯೊಂದು ವಸ್ತುವಿನ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಇದರಿಂದ ಜನಸಾಮಾನ್ಯರು ಸಂಕಷ್ಟದಲ್ಲಿ ಜೀವನ ಮಾಡುವಂತಾಗಿದೆ ಎಂದು ಆರೋಪಿಸಿದರು.
ಈಗಿನ ಕೇಂದ್ರ ಬಿಜೆಪಿ ಸರ್ಕಾರ, ಹಿಂದೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಕೃಷಿ ನೀತಿಯನ್ನು
ತಿದ್ದುಪಡಿ ಮಾಡಿದೆ. ಶ್ರೀಮಂತರಿಗೆ ಅನುಕೂಲವಾಗುವಂತಹ ನೀತಿಗಳನ್ನು ಜಾರಿಗೆ ತರಲು ಕೇಂದ್ರ ಮುಂದಾಗಿದೆ.
ಇದನ್ನು ವಿರೋಧಿ ಸಿ ಕಳೆದ ಮೂರು ತಿಂಗಳಿನಿಂದ ದೆಹಲಿಯಲ್ಲಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಅದಕ್ಕೂ ಜಗ್ಗದ ಸರ್ಕಾರ ರೈತರನ್ನು ಬಂಡವಾಳ ಶಾಹಿಗಳಿಗೆ ಅಡವಿಡಲು ಮುಂದಾಗಿದೆ ಎಂದು ದೂರಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಾಲೂಕಿನ ವಿದ್ಯುತ್ ಸಮಸ್ಯೆ ಪರಿಹಾರವಾಗಿತ್ತು. ಹತ್ತಾರು ಎಂಯುಎಸ್‌ಎಸ್ ಘಟಕ ಸ್ಥಾಪನೆ ಮಾಡಿದ ಪರಿಣಾಮ ವಿದ್ಯುತ್ ಸಮಸ್ಯೆ ಕಂಡು ಬಂದಿಲ್ಲ. ಅಲ್ಲದೆ ಇನ್ನೂ ಉತ್ತಮ ಗುಣಮಟ್ಟದ ವಿದ್ಯುತ್ ನೀಡುವ ನಿಟ್ಟಿನಲ್ಲಿ ಮಧುರೆ ಬಳಿ 66
ಕೆವಿ ವಿತರಣಾ ಘಟಕ ಸ್ಥಾಪನೆಗೆ ಹಣ ಬಿಡುಗಡೆ ಮಾಡಿಸಲಾಗಿತ್ತು. ಆದರೆ ಸರ್ಕಾರ ಬದಲಾಗಿ ಮೂರು ವರ್ಷ ಕಳೆಯುತ್ತಾ ಬಂದರೂ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಸಾಧ್ಯವಾಗಿಲ್ಲ. ಆರ್ಥಿಕ ಸಂಕಷ್ಟದ ನೆಪದಲ್ಲಿ ಭದ್ರಾ ಮೇಲ್ದಂಡೆ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಸ್ಥಗಿತಗೊಂಡಿವೆ ಎಂದು ವಾಗ್ಧಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಟಿ.ಬಿ. ಜಯಚಂದ್ರ, ಮಾಜಿ ಶಾಸಕ ಇಲ್ಕಲ್ ವಿಜಯಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಾಜ್‌ಪೀರ್, ಜಿಲ್ಲಾ
ಪ್ರಚಾರ ಸಮಿತಿ ಅಧ್ಯಕ್ಷ ಜಿಎಸ್ ಮಂಜುನಾಥ್, ಮಹಮ್ಮದ್ ಸನಾಉಲ್ಲಾ, ಗೋ. ತಿಪ್ಪೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಇಸ್ಮಾಯಿಲ್, ರಾಜಪ್ಪ, ಮುಖಂಡರುಗಳಾದ ಕಾರೇಹಳ್ಳಿ ಬಸವರಾಜ್, ಎಂ.ಪಿ. ಶಂಕರ್, ಆಗ್ರೋ ಶಿವಣ್ಣ, ಅಲ್ತಾಫ್, ಕೆ.ಟಿ. ಮಂಜುನಾಥ್, ಶ್ರೀರಾಂಪುರದ
ಕೃಷ್ಣಮೂರ್ತಿ ಮತ್ತಿತರರು ಭಾಗವಹಿಸಿದ್ದರು. ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಓದಿ : ಒಂದೂವರೆ ವರ್ಷದ ಮಗಳನ್ನು ಕತ್ತುಹಿಸುಕಿ ಕೊಂದ ಪಾಪಿ ತಂದೆಗೆ ಮರಣದಂಡನೆ ಶಿಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.