6 ತಿಂಗಳಲ್ಲಿ ಪದವಿ ತರಗತಿ ಫ‌ುಲ್‌ ಸ್ಮಾರ್ಟ್‌

Team Udayavani, Feb 19, 2021, 4:09 PM IST

Graduate Classroom Full Smart in 6 Months

ಬೆಂಗಳೂರು: ಮುಂದಿನ ಆರು ತಿಂಗಳಲ್ಲಿ ರಾಜ್ಯದ ಎಂಟು ಸಾವಿರ ಪದವಿ ತರಗತಿ ಕೊಠಡಿಗಳನ್ನು “ಸ್ಮಾರ್ಟ್‌ಕ್ಲಾಸ್‌ ರೂಂ’ಆಗಿ ಮಾರ್ಪಾಡು ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ್‌ ತಿಳಿಸಿದರು.

ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಗುರು ವಾರ ನೂತನ ಜಿಮ್‌ ಹೌಸ್‌ ಹಾಗೂ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿಮಾತನಾಡಿದರು. ಬದಲಾದ ಕಾಲಮಾನದಲ್ಲಿ ಪದವಿ ತರಗತಿಗಳಲ್ಲಿ ಸ್ಮಾರ್ಟ್‌ಕಲಿಕೆ ಅತ್ಯಗತ್ಯವಾಗಿದೆ. ಹೀಗಾಗಿ, ರಾಜ್ಯದ ಎಲ್ಲಾ ಪದವಿ ಕಾಲೇಜುಗಳನ್ನು ಸಂಪೂರ್ಣ ಸ್ಮಾರ್ಟ್‌ಕ್ಲಾಸ್‌ ರೂಂ ಅಳವಡಿಸ ಲಾಗುತ್ತಿದೆ. ಒಟ್ಟು ಸಾವಿರ ತರಗತಿ ಕೊಠಡಿ  ಗಳಿದ್ದು, ಮುಂದಿನ ಆರು ತಿಂಗಳಲ್ಲಿ ಅವುಗಳನ್ನು ಸ್ಮಾರ್ಟ್‌ಕ್ಲಾಸ್‌ ರೂಂ ಮಾಡಲಾಗುತ್ತದೆ. ಏಪ್ರಿಲ್‌ ಅಂತ್ಯಕ್ಕೆ ಎರಡೂವರೆ ಸಾವಿರ ಕೊಠಡಿಗಳಲ್ಲಿ ಸ್ಮಾರ್ಟ್‌ಕ್ಲಾಸ್‌ ಇರಲಿದೆ ಎಂದರು.

ಸರ್ಕಾರಿ ಕಲಾ ಕಾಲೇಜು ಬೆಂಗಳೂರಿನಲ್ಲಿಯೇ ಹೆಮ್ಮೆಯ ಸಂಸ್ಥೆ. ಅನೇಕ ದಿಗ್ಗಜರನ್ನು ಕೊಟ್ಟ ಸಂಸ್ಥೆಯೂ ಹೌದು. ಇದೆಲ್ಲ ಗಮನದಲ್ಲಿ ಇಟ್ಟುಕೊಂಡು ಈ ಕಾಲೇಜನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈಗಷ್ಟೇ ಕಾಲೇಜಿನಲ್ಲಿ ಒಳಾಂಗಣ ಕ್ರೀಡಾಂಗಣ, ಜಿಮ್‌ ಆರಂಭವಾಗಿದೆ. ಇದು ವಿದ್ಯಾರ್ಥಿಗಳ ಆರೋಗ್ಯ ಹಾಗೂ ಮನೋಸ್ಥೈರ್ಯಕ್ಕೆ ಹೆಚ್ಚು ಪೂರಕವಾಗುತ್ತದೆ. ಜತೆಗೆ, ಸಮಾಜವನ್ನು ವಿದ್ಯಾರ್ಥಿ ಗಳು ನೇರವಾಗಿ ನೋಡಿ ಕಲಿಯಬೇಕು. ನಮ್ಮ ಆಚಾರ, ವಿಚಾರ, ಸಂಸ್ಕೃತಿ ಸೇರಿದಂತೆ ಸಮಾಜ ದಲ್ಲಿ ಏನೆಲ್ಲ ಒಳ್ಳೆಯದು ಇದೆಯೋ ಅದೆಲ್ಲವನ್ನು ಖುಷಿಯಾಗಿ ಕಂಡು ವಿದ್ಯಾರ್ಥಿಗಳು ಕಲಿಯಬೇಕು. ಮಾನಸಿಕವಾಗಿ, ದೈಹಿಕವಾಗಿ ಸದೃಢತೆ ಸಾಧಿಸ  ಬೇಕಾದರೆ ಇದೆಲ್ಲವೂ ಮುಖ್ಯ ಎಂದರು.

ಇದನ್ನೂ ಓದಿ:ಇಂಡಿಯನ್‌ ಬ್ಯಾಂಕ್‌ ಸಂಯೋಜನೆ ಪೂರ್ಣ

ಶ್ರಮವಿಲ್ಲದೆ ಫ‌ಲವಿಲ್ಲ: ಇತ್ತೀಚಿನ ಕೆಲ ವಿದ್ಯಾರ್ಥಿಗಳಲ್ಲಿ ಹೇಗೊ ಪದವಿ ಪಡೆಯುತ್ತೇವೆ. ಭಗ ವಂತನ ದಯೆಯಿದೆ ಎಂಬ ಕಲ್ಪನೆಗಳಿವೆ. ಇಂತಹ ಮನಸ್ಥಿತಿ  ಯಿಂದ ಹೊರಬನ್ನಿ. ಶ್ರಮವಿಲ್ಲದೆ ಫ‌ಲ ಸಾಧ್ಯವಿಲ್ಲ. ಪ್ರಾಮಾಣಿಕವಾಗಿ ಕಲಿಕೆಯಲ್ಲಿ ನಿರತರಾಗಿ, ಈ ವೇಳೆಯಲ್ಲಿ ತೋರುವ ನಿಲ್ಯìಕ್ಷ್ಯ ತಮಗೆ ತಾವೇ ಮಾಡಿಕೊಳ್ಳುವ ಅನ್ಯಾಯ. ಸದ್ಯ ಎಲ್ಲಾ ಮಾಹಿತಿ ಬೆರಳ ತುದಿಯÇÉೇ ಸಿಗುತ್ತಿದ್ದು, ಅದನ್ನು ಬಳಸಿಕೊಳ್ಳಿ, ಆಗ ಉದ್ಯೋಗ ಅರಸಿ ಬರುತ್ತದೆ ಎಂದರು. ಅತಿಕ್ರಮಕ್ಕೆ ಅವಕಾಶ ನೀಡದಿರಿ: ಮಾಜಿ ಉಪಸಭಾಪತಿ ಪುಟ್ಟಣ್ಣ ಮಾತನಾಡಿ, ನಗರದ ಕೇಂದ್ರ ಭಾಗದಲ್ಲಿರುವ ಪ್ರಮುಖ ಸರ್ಕಾರಿ ಕಾಲೇಜುಗಳು ಬಡವರ ಪಾಲಿಗೆ ವಿದ್ಯಾದೀಪಗಳಾಗಿವೆ. ಇವುಗಳನ್ನ ಅತಿಕ್ರಮಿಸಲು ಸರ್ಕಾರದ ವಿವಿಧ ಇಲಾಖೆಗಳು ಕಾಯುತ್ತಿವೆ. ಅದಕ್ಕೆ ಅವಕಾಶ ನೀಡಬಾರದು. ಮೆಟ್ರೋಗೆ ಈಗಾಗಲೇ ಸರ್ಕಾರಿ ಕಲಾ ಕಾಲೇಜು ಜಾಗ ನೀಡಲಾಗಿದೆ. ಅವರಿಂದ ಪರಿಹಾರ ಹಣ ವಸೂಲಿ ಮಾಡಿ ಕಾಲೇಜು ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.

ದೈಹಿಕವಾಗಿ ಫಿಟ್‌ ಆಗಿ: ಶಾಸಕ ರಿಜ್ವಾನ್‌ ಅರ್ಷದ್‌ ಮಾತನಾಡಿ, ಯುವಕರು ನಿತ್ಯ ಒಂದು ಗಂಟೆ ದೈಹಿಕ ಚುಟುವಟಿಕೆಯಲ್ಲಿ ತೊಡಗಿಕೊಳ್ಳ ಬೇಕು. ಇದು ನಿಮ್ಮನ್ನು ಫಿಟ್‌ ಆಗಿಸುತ್ತದೆ. ಉತ್ತಮ ಜ್ಞಾನದ ಜತೆಗೆ ಆರೋಗ್ಯ ದೃಷ್ಟಿಯಿಂದ ದೈಹಿಕವಾಗಿಯು ಸದೃಢ ಇರುವುದು ಮುಖ್ಯ. ಈ ನಿಟ್ಟಿ  ನಲ್ಲಿ ಕಾಲೇಜಿನಲ್ಲಿರುವ ಜಿಮ್‌ ಬಳಸಿಕೊಳ್ಳಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದರು. ಇದೇ ವೇಳೆ ಕಾಲೇಜು ವಸತಿ ನಿಲಯಕ್ಕೆ ಮನವಿ  . ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಿದ್ಧಪಡಿಸಿದ್ದ ಕಾಲೇಜು ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಕಾಲೇಜು ಪ್ರಾಂಶುಪಾಲ ಪ್ರೊ. ಕೋಡದ ರಾಜಶೇಖರಪ್ಪ ಸೇರಿದಂತೆ ಪ್ರಾಧ್ಯಾ  ಪಕರು, ಸಿಬ್ಬಂದಿ ವರ್ಗ ಹಾಜರಿದ್ದರು.

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.