ಸಾವಯವ ಕೃಷಿಯಲ್ಲಿ ಬಸವನಾಡು ಫಸ್ಟ್‌

ವಿಜಯಪುರ ಜಿಲ್ಲೆಯೊಂದರಲ್ಲೇ 8500 ಅರ್ಜಿ ಇರುವುದೇ ಇದಕ್ಕೆ ಸಾಕ್ಷಿ.

Team Udayavani, Feb 19, 2021, 6:29 PM IST

ಸಾವಯವ ಕೃಷಿಯಲ್ಲಿ ಬಸವನಾಡು ಫಸ್ಟ್‌

ವಿಜಯಪುರ: ರಸಗೊಬ್ಬರ ಬಳಕೆಗೆ ಒಗ್ಗಿಕೊಳ್ಳದ ವಿಜಯಪುರ ಜಿಲ್ಲೆ ಪಾರಂಪರಿಕ ಸಾವಯವ ಕೃಷಿ ಉತ್ಪಾದನೆ ಮಾತ್ರವಲ್ಲ, ಸಾವಯವ ಉತ್ಪಾದನೆ
ದೃಢೀಕರಣ ಪ್ರಮಾಣೀಕರಣ ಪಡೆಯುವಲ್ಲಿ ಪ್ರಥಮ ಸ್ಥಾನದಲ್ಲಿದೆ. ರಾಜ್ಯದಾದ್ಯಂತ ಎಲ್ಲ ಜಿಲ್ಲೆಗಳಿಂದ ಪ್ರಸಕ್ತ ವರ್ಷದಲ್ಲಿ ಸಾವಯವ ಕೃಷಿ ಉತ್ಪಾದನೆ ದೃಢೀಕರಣ ಪ್ರಮಾಣ ಪತ್ರಕ್ಕೆ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಶೇ.48 ರಷ್ಟು ವಿಜಯಪುರ ಜಿಲ್ಲೆಗೆ ಸೇರಿದ್ದವು. ಇದು ಸಾವಯವ ಕೃಷಿ ಉತ್ಪಾದನೆಗೆ ಬಸವನಾಡಿನ ರೈತರು ತೋರುತ್ತಿರುವ ಬದ್ಧತೆಗೆ ಸಾಕ್ಷಿ.

ಅಖಂಡ ವಿಜಯಪುರ ಜಿಲ್ಲೆಯಲ್ಲಿ 2005ರಲ್ಲಿ ವಿಜಯಪುರ-ಬಾಗಲಕೋಟೆ ಸಾವಯವ ಕೃಷಿ ಪ್ರಾಂತೀಯ ಸಂಘಗಳ ಒಕ್ಕೂಟ ಅಸ್ತಿತ್ವಕ್ಕೆ ಬಂದಿದೆ. ಇದರ ಅ ಧೀನದಲ್ಲೇ ವಿಜಯಪುರ ಜಿಲ್ಲೆಯ ರೈತರು ಸಾವಯವ ಕೃಷಿ ಉತ್ಪಾದಿಸಿ, ಮಾರುಕಟ್ಟೆ ಕಂಡುಕೊಂಡಿದ್ದರು. ಆದರೆ ಆಡಳಿತಾತ್ಮಕ ಕಾರಣಗಳಿಂದಾಗಿ 2018 ರಲ್ಲಿ ಜಿಲ್ಲೆಯ ಸಾವಯವ ಕೃಷಿ ಉತ್ಪಾದಕರು ಪ್ರತ್ಯೇಕ ಒಕ್ಕೂಟ ರಚಿಸಿಕೊಂಡಿದ್ದಾರೆ.

ಇದರ ಅಡಿಯಲ್ಲಿ ಸಾವಯವ ಕೃಷಿ ಉತ್ಪಾದನೆ ಮಾಡುವ ರೈತರ 30 ಸಂಘಗಳು ಸಕ್ರಿಯವಾಗಿ ಕೆಲಸ ಮಾಡುತ್ತಿವೆ. ಜಿಲ್ಲೆಯಲ್ಲಿ 1300 ರೈತರು ತಮ್ಮ ಜಮೀನಿನಲ್ಲಿ ಸಾವಯವ ಕೃಷಿ ಉತ್ಪಾದನೆ ಮಾಡುವ ತಮ್ಮ ಉತ್ಪಾದನೆಗಳಿಗೆ ಸಾವಯವ ಕೃಷಿ ಪ್ರಮಾಣೀಕರಣ ಮತ್ತು ದೃಢೀಕರಣ ಪಡೆದಿದ್ದಾರೆ. ಇದಲ್ಲದೇ 2016 ರಿಂದ 2019 ರವರೆಗೆ ಕೃಷಿ ಪಾರಂಪರಿಕ ಕೃಷಿ ವಿಕಾಸ ಯೋಜನೆಯಲ್ಲಿ ಜಿಲ್ಲೆಯ ಅವಿಭಜಿತ 5 ತಾಲೂಕುಗಳಲ್ಲಿ ತಲಾ 150 ರೈತರಂತೆ ಜಿಲ್ಲೆಯಲ್ಲಿ
750 ರೈತರು ಸಾವಯವ ಕೃಷಿ ಉತ್ಪಾದನೆಯಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಹೊಸದಾಗಿ 750 ಹೆಕ್ಟೇರ್‌ ಪ್ರದೇಶದಲ್ಲಿ ಸಂಪೂರ್ಣ ಸಾವಯವ ಕೃಷಿ ಉತ್ಪಾದನೆಗೆ ರೈತರು ಜಮೀನು ಹದಗೊಳಿಸಿಕೊಂಡಿದ್ದಾರೆ.

ಪರಿಣಾಮ ಸ್ವಯಂ ಪ್ರೇರಣೆ ಹಾಗೂ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಸಾವಯವ ಕೃಷಿಯಲ್ಲಿ ತೊಡಗಿರುವ ಜಿಲ್ಲೆಯ ರೈತರು ತಮ್ಮ ಉತ್ಪನ್ನಗಳಿಗೆ ಸಾವಯವ ಪ್ರಮಾಣೀಕರಣ ಪತ್ರ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಹೊಸದಾಗಿ ತಮ್ಮ ಉತ್ಪನ್ನಗಳಿಗೆ ಸಾವಯವ ಕೃಷಿ ಪ್ರಮಾಣೀಕರಣ ಮತ್ತು
ದೃಢೀಕರಣ ಪಡೆಯಲು ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ 8500 ಅರ್ಜಿಗಳು ದೃಢೀಕರಣಗೊಂಡಿವೆ. ಈ ಪ್ರಮಾಣದಲ್ಲಿ ಸಾಯವ ದೃಢೀಕರಣ ಪತ್ರ ಪಡೆದ
ಜಿಲ್ಲೆ ಎಂಬ ಹೆಗ್ಗಳಿಕೆ ರಾಜ್ಯದಲ್ಲೇ ವಿಜಯಪುರ ಜಿಲ್ಲೆಗೆ ಸಿಕ್ಕಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಿಂದ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ 20 ಸಾವಿರ ಅರ್ಜಿಗಳಿಗೆ
ಮಾತ್ರ ದೃಢೀಕರಣ ಸಿಕ್ಕಿದ್ದು, ಇದರಲ್ಲಿ ವಿಜಯಪುರ ಜಿಲ್ಲೆಯೊಂದರಲ್ಲೇ 8500 ಅರ್ಜಿ ಇರುವುದೇ ಇದಕ್ಕೆ ಸಾಕ್ಷಿ.

ಇನ್ನು ಸಾವಯವ ಕೃಷಿಯಲ್ಲಿ ಪ್ರಮುಖವಾಗಿರುವ ಸಿರಿಧಾನ್ಯ ಉತ್ಪಾದನೆ ಉತ್ತೇಜನಕ್ಕೂ ಜಿಲ್ಲೆಯ ರೈತರು ಆದ್ಯತೆ ನೀಡಿದ್ದಾರೆ. ಇದಲ್ಲದೇ ಸಿರಿಧಾನ್ಯಗಳನ್ನು
ಸಂಸ್ಕರಿಸಿ ಗ್ರಾಹಕರಿಗೆ ತಲುಪಿಸಲು ಅವಿಭಜಿತ ಐದೂ ತಾಲೂಕಿನಲ್ಲಿ ತಲಾ 20 ಲಕ್ಷ ರೂ. ಮೊತ್ತದ ಸಂಸ್ಕರಣಾ ಘಟಕ ಸ್ಥಾಪನೆಗೆ ಮುಂದಾಗಿದ್ದಾರೆ.

ಸರ್ಕಾರ ಸಾವಯವ ಕೃಷಿಭಾಗ್ಯ ಯೋಜನೆ ಹಾಗೂ ಪಾರಂಪರಿಕ ಕೃಷಿ ಯೋಜನೆಯಲ್ಲಿ ಸರ್ಕಾರ ಶೇ.50 ರಷ್ಟು ಸಹಾಯ ಧನದ ನೆರವು ನೀಡಿದೆ.ವಿಜಯಪುರ ತಾಲೂಕಿನಲ್ಲಿ 3 ವರ್ಷದ ಹಿಂದೆಯೇ ಸಂಸ್ಕರಣಾ ಘಟಕ ಕಾರ್ಯಾರಂಭ ಮಾಡಿದ್ದರೆ, ಸಿಂದಗಿ ತಾಲೂಕಿನಲ್ಲಿ ವರ್ಷದ ಹಿಂದೆ ಸಂಸ್ಕರಣೆ ಆರಂಭಗೊಂಡಿದೆ. ಇಂಡಿ, ಬಸವನಬಾಗೇವಾಡಿ ತಾಲೂಕಿನಲ್ಲಿ ಎರಡು ತಿಂಗಳ ಹಿಂದೆ ಘಟಕಗಳು ಸಂಸ್ಕರಣೆ ನಡೆಸಿದ್ದರೆ, ಮುದ್ದೇಬಿಹಾಳ ತಾಲೂಕಿನಲ್ಲಿ ಸಂಸ್ಕರಣೆ ಆರಂಭಕ್ಕೆ ಸಿದ್ಧತೆ ಅಂತಿಮಗೊಂಡಿದೆ.

ಪರಿಣಾಮ ಸಿರಿಧಾನ್ಯ ಯೋಜನೆಯಲ್ಲಿ ನವಣೆ, ಹಾರಕ, ಬರಕ, ಸಜ್ಜೆಯಂತ ಸಿರಿಧಾನ್ಯ ಬೆಳೆಯಲು ರೈತರಿಗೆ ಉತ್ತೇಜನ ನೀಡಲು ಸರ್ಕಾರವೂ ಯೋಜನೆ
ರೂಪಿಸಿದೆ. ನವಣೆ ಸಿರಿಧಾನ್ಯ ಬೆಳೆಯುವ ರೈತರಿಗೆ ಹೆಕ್ಟೇರ್‌ಗೆ 10 ಸಾವಿರ ರೂ. ಸಹಾಯ ಧನ ನೀಡಿದ್ದರಿಂದ 2019ರಲ್ಲಿ 5000 ಎಕರೆ ಪ್ರದೇಶದಲ್ಲಿ
ನವಣೆ ಬೆಳೆದಿದ್ದು, ಪ್ರಸಕ್ತ ವರ್ಷದ ಹಂಗಾಮಿನಲ್ಲಿ 2500 ಎಕರೆ ಪ್ರದೇಶದಲ್ಲಿ ನವಣೆ ಬೆಳೆಯಲಾಗಿದೆ.

ಆದರೆ ಜಿಲ್ಲೆಯಲ್ಲಿ ಸರ್ಕಾರದ ನೆರವಿನ ಯೋಜನೆಯಲ್ಲಿ ನವಣೆ ಬೆಳೆದ ರೈತರಿಗೆ ಮಾರುಕಟ್ಟೆಯದ್ದೇ ಸಮಸ್ಯೆ. ಕಳೆದ ವರ್ಷ ಸಿರಿಧಾನ್ಯ ಮಾರಾಟವಾಗದೇ ಕೊಳೆಯುತ್ತಿದ್ದು, ಪ್ರಸಕ್ತ ವರ್ಷದ ಬೆಳೆಗೂ ಮಾರುಕಟ್ಟೆ ಸಿಗದೇ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಅಗತ್ಯ ಮಾರುಕಟ್ಟೆ ಕಲ್ಪಿಸುವ ವ್ಯವಸ್ಥೆ ಮಾಡಿ ಉತ್ತೇಜನ ನೀಡಲಿ ಎಂಬುದು ಜಿಲ್ಲೆಯ ರೈತರ ಒಕ್ಕೊರಲ ಆಗ್ರಹವಾಗಿದೆ.

ಜಿಲ್ಲೆಯ ಬಹುತೇಕ ರೈತರು ಸಾವಯವ ಕೃಷಿಯನ್ನೇ ಅವಲಂಬಿಸಿದ್ದಾರೆ. ಪೂರ್ಣ ಪ್ರಮಾಣದಲ್ಲಿ ಜಿಲ್ಲೆಯನ್ನು ಸಾವಯವ ಕೃಷಿ ಕ್ಷೇತ್ರವಾಗಿಸುವುದು ಸುಲಭವೂ ಇದೆ. ಆದರೆ ಜಿಲ್ಲೆಯ ಸಾವಯವ ಕೃಷಿ ಹಾಗೂ ಸಿರಿಧಾನ್ಯ ಉತ್ಪಾದನೆಗೆ ಸರ್ಕಾರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ಜಿಲ್ಲೆಗೆ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಆದಲ್ಲಿ ಮಾರುಕಟ್ಟೆ ಕಲ್ಪಿಸಿಕೊಳ್ಳಲು ಸುಲಭವಾಗಲಿದೆ.
ಮಹಾದೇವ ಅಂಬಲಿ,
ಜಿಲ್ಲಾಧ್ಯಕ್ಷ ಸಾವಯವ ಕೃಷಿ ಸಂಘಗಳ
ಪ್ರಾಂತೀಯ ಒಕ್ಕೂಟ.

*ಜಿ.ಎಸ್‌.ಕಮತರ

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.