ವಡಾಲ ಜಿಎಸ್‌ಬಿ ಸಾರ್ವಜನಿಕ ಗಣೇಶೋತ್ಸವ ಸಮಿತಿ: 66ನೇ ವಾರ್ಷಿಕ ಶ್ರೀ ಗಣೇಶೋತ್ಸವ

Team Udayavani, Feb 19, 2021, 8:19 PM IST

programme held at mumbai

ಮುಂಬಯಿ: ವಡಾಲದ ದ್ವಾರಕಾನಾಥ ಭವನದ ಜಿಎಸ್‌ಬಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ 66ನೇ ವಾರ್ಷಿಕ ಶ್ರೀ ಗಣೇಶೋತ್ಸವವು ಫೆ. 15ರಂದು ಮಾಘ ಚತುರ್ಥಿಯ ದಿನದಂದು ವಡಾಲದ ಶ್ರೀರಾಮ ಮಂದಿರದ ವಠಾರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಕೋವಿಡ್ ಹಿನ್ನೆಲೆಯಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀಮದ್‌ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್‌ ಸ್ವಾಮೀಜಿ ಮತ್ತು ಅವರ ಪಟ್ಟಶಿಷ್ಯ ಶ್ರೀಮದ್‌ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಆದೇಶ ಹಾಗೂ ಅನುಗ್ರಹದ ಮೇರೆಗೆ ಸಮಿತಿಯ ವಿಶ್ವಸ್ಥ ಕಾರ್ಯಾಧ್ಯಕ್ಷ, ವಿಶ್ವಸ್ಥ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಮಾಘ ಚತುರ್ಥಿಯಂದು ಒಂದು ದಿನದ ಗಣೇಶೋತ್ಸವವನ್ನು ಸರಳ ರೀತಿಯಲ್ಲಿ ಆಯೋಜಿಸಿದರು

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆಯಿಂದ ಶ್ರೀರಾಮ ದೇವರ ಸನ್ನಿಧಿಯಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಶ್ರೀ ಸಿದ್ಧಿವಿನಾಯಕ ದೇವರ ಪ್ರಾಣ ಪ್ರತಿಷ್ಠೆ ನಡೆಯಿತು. ಬಳಿಕ ಗಣಪತಿ ಸನ್ನಿಧಿಯಲ್ಲಿ ವಿಶ್ವಸ್ಥ ಮಂಡಳಿಯ ಕಾರ್ಯಾಧ್ಯಕ್ಷರು, ಇತರ ಪದಾಧಿಕಾರಿಗಳು, ಸಂಚಾಲಕ ಮಂಡಳಿ, ಉತ್ಸವ ಸಮಿತಿಯ ಅಧ್ಯಕ್ಷರು, ಸ್ವಯಂಸೇವಕರು, ಸಮಾಜ ಬಾಂಧವರ ಪರವಾಗಿ ಗಣಪತಿಹೋಮ ನಡೆಯಿತು. ಕೋವಿಡ್ ಮಹಾಮಾರಿಯಿಂದ ಸರ್ವರನ್ನು ಮಹಾಗಣಪತಿ ದೇವರು ರಕ್ಷಿಸಲೆಂದು ಈ ಸಂದರ್ಭದಲ್ಲಿ ಪ್ರಾರ್ಥಿಸಲಾಯಿತು.

ಅಪರಾಹ್ನ 1ರಿಂದ ಶ್ರೀ ಗಣೇಶ ದೇವರಿಗೆ ಮಹಾಪೂಜೆ, ನೈವೇದ್ಯ ಪೂಜೆ, ಮಹಾಮಂಗಳಾರತಿ, ಸಂಜೆ ಭಜನೆ, ದೇವರ ಸ್ತುತಿ, ಭಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಯೂಟ್ಯೂಬ್‌ ಮುಖಾಂತರ ಎಲ್ಲ ಕಾರ್ಯಕ್ರಮಗಳನ್ನು ನೇರ ಪ್ರಸಾರ ಮಾಡಲಾಗಿತ್ತು. ದಿನಪೂರ್ತಿ ವಿವಿಧ ರೀತಿಯ ಪೂಜೆಗಳು ನಡೆದವು. ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕಾರ್ಯಕ್ರಮವು ನಡೆಯಿತು.

ರಾತ್ರಿ ಪೂಜೆಯ ಬಳಿಕ ವೇ| ಮೂ| ಅನಂತ ಭಟ್‌ ಅವರು ಗಣೇಶೋತ್ಸವದ ವಿಶೇಷತೆಯನ್ನು ವಿವರಿಸಿದರು. ಬಳಿಕ ವಿಸರ್ಜನ ಪೂಜೆ, ಆರತಿ ನಡೆಯಿತು. ಬಳಿಕ ಗಣೇಶ ಮೂರ್ತಿಯನ್ನು ದೇವಸ್ಥಾನದ ಪ್ರಾಂಗಣದ ಬಾವಿಯಲ್ಲಿ ವಿಸರ್ಜಿಸ ಲಾಯಿತು. ವೇ| ಮೂ| ಸುಧಾಮ ಭಟ್‌, ಅನಂತ್‌ ಭಟ್‌, ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಗೋವಿಂದಾಚಾರ್ಯ, ತ್ರಿವಿಕ್ರಮ ಆಚಾರ್ಯ ಮತ್ತು ಇತರ ಅರ್ಚಕ ವೃಂದದವರು ಸಹಕರಿಸಿದರು. ಸಮಿತಿಯ ವಿಶ್ವಸ್ಥ ಸಂಚಾಲಕರು, ಸ್ವಯಂಸೇವಕರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.