ಫೆ. 22-27: ಕಾಂಗ್ರೆಸ್ ಪಾದಯಾತ್ರೆ
Team Udayavani, Feb 20, 2021, 1:30 AM IST
ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಫೆ. 22ರಿಂದ 27ರ ವರೆಗೆ “ಜನಧ್ವನಿ’ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪಾದಯಾತ್ರೆ ಹೆಜಮಾಡಿ ಟೋಲ್‌ಗೇಟಿನಿಂದ ಪ್ರಾರಂಭಗೊಂಡು ಕಾಪು, ಕಟಪಾಡಿ, ಉಡುಪಿ, ಕಲ್ಯಾಣಪುರ, ಸಂತೆಕಟ್ಟೆ, ಬ್ರಹ್ಮಾವರ, ಕುಂದಾಪುರ, ಅರೆಹೊಳೆ, ಬೈಂದೂರಿನಲ್ಲಿ ಸಮಾರೋಪಗೊಳ್ಳಲಿದೆ. 108 ಕಿ.ಮೀ. ಪಾದಯಾತ್ರೆಯಲ್ಲಿ ಪಕ್ಷದ ರಾಜ್ಯ ಮುಖಂಡರು ಭಾಗವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮಾರೋಪದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯಲ್ಲಿ ಈ ರ್ಯಾಲಿ ನಡೆಯುತ್ತಿದ್ದು, ಅನಂತರ ಉಳಿದ ಜಿಲ್ಲೆಗಳಲ್ಲಿಯೂ ನಡೆಯಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.