ವಿದ್ಯಾರ್ಥಿನಿಯ ಕೈ ಸೇರಿದ ಆಧಾರ್!
Team Udayavani, Feb 20, 2021, 7:30 AM IST
ಪುತ್ತೂರು: ಐದು ವರ್ಷದಿಂದ ಆಧಾರ್ ಕಾರ್ಡ್‌ಗಾಗಿ ಕಚೇರಿಗೆ ಅಲೆದಾಡುತ್ತಿದ್ದ ಸುಳ್ಯ ತಾಲೂಕಿನ ಪೆರುವಾಜೆ ಕುಂಡಡ್ಕ ನಿವಾಸಿ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿನಿ ಪವಿತ್ರಾ ಅವರಿಗೆ ಫೆ.19 ರಂದು ಸಂಜೆ ಆಧಾರ್ ಕಾರ್ಡ್ ಕೈ ಸೇರಿದೆ.
“ದಶ ಪ್ರಯತ್ನಕ್ಕೆ ಒಲಿಯದ ಆಧಾರ್ ಕಾರ್ಡ್’ ಎಂಬ ಶೀರ್ಷಿಕೆಯಡಿ ಉದಯವಾಣಿ ವರದಿ ಪ್ರಕಟಿಸಿದ ದಿನವೇ ಪುತ್ತೂರು ವಿಭಾಗ ಅಂಚೆ ಇಲಾಖೆ ಸ್ಪಂದಿಸಿದ್ದು, ಹೊಸ ಆಧಾರ್ ಕಾರ್ಡ್ ವಿದ್ಯಾರ್ಥಿನಿಗೆ ಲಭಿಸಿದೆ.
ಪುತ್ತೂರು ಅಂಚೆ ವಿಭಾಗದ ಹಿರಿಯ ಅಧೀಕ್ಷಕ ಶ್ರೀಹರ್ಷ ನೆಟ್ಟಾರು, ಅಂಚೆ ಸಹಾಯಕಿ ಸುಮಾ ಎಚ್.ಎಸ್. ಅವರು ಪತ್ರಿಕಾ ವರದಿ ಆಧರಿಸಿ ವಿದ್ಯಾರ್ಥಿಯ ಆಧಾರ್ ಸಮಸ್ಯೆ ಬಗ್ಗೆ ಪೋಷಕರ ಜತೆ ಚರ್ಚಿಸಿ ಮಾಹಿತಿ ಪಡೆದುಕೊಂಡರು. ಈ ಹಿಂದೆ ನೋಂದಾಯಿಸಿದ ನೋಂದಣಿ ಸಂಖ್ಯೆ ಆಧರಿಸಿ ಪರಿಶೀಲಿಸಲಾಯಿತು. ಕೊನೆಗೆ ಎಲ್ಲ ಸಮಸ್ಯೆಗಳನ್ನು ಪರಿಹರಿಸಿಕೊಂಡು ಸಂಜೆ ವೇಳೆ ಹೊಸ ಆಧಾರ್ ಪ್ರತಿಯನ್ನು ಬೆಳ್ಳಾರೆ ಅಂಚೆ ಇಲಾಖೆ ಕಚೇರಿಯಲ್ಲಿ ವಿದ್ಯಾರ್ಥಿನಿ ಪವಿತ್ರಾ, ತಾಯಿ ಗೀತಾ ಅವರಿಗೆ ವಿತರಿಸಲಾಯಿತು.
ಜಿಲ್ಲಾಡಳಿತದ ಸೂಚನೆ :
ಉದಯವಾಣಿಯ ವರದಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಅಪರ ಜಿಲ್ಲಾಧಿಕಾರಿ ರೂಪಾ ಅವರ ಸೂಚನೆಯಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪವಿತ್ರಾ ಅವರ ಪೋಷಕರನ್ನು ಸಂಪರ್ಕಿಸಿ ಮಾಹಿತಿ ಪಡೆದು ತಾಲೂಕು ಆಡಳಿತಕ್ಕೆ ಸ್ಪಂದನೆ ನೀಡುವಂತೆ ನಿರ್ದೇಶಿಸಿದರು. ಸುಳ್ಯ ತಹಶೀಲ್ದಾರ್, ಉಪ ತಹಶೀಲ್ದಾರ್, ಪೆರುವಾಜೆ ಗ್ರಾಮಕರಣಿಕರು ಪೋಷಕರನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಮೇಲಾಧಿಕಾರಿಗಳ ಗಮನಕ್ಕೆ ತಂದರು. ಸ್ಥಳೀಯವಾಗಿ ಅಗತ್ಯ ವಿವರಗಳನ್ನು ಒದಗಿಸುವಲ್ಲಿ ಪೆರುವಾಜೆ ಗ್ರಾ.ಪಂ. ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಅವರು ಸಹಕಾರ ನೀಡಿದರು.
ಶಿಕ್ಷಣ ಸಚಿವರ ಸ್ಪಂದನೆ :
ಪವಿತ್ರಾಳ ಆಧಾರ್ ಸಮಸ್ಯೆಯ ಬಗ್ಗೆ ಉದಯವಾಣಿ ವರದಿಯನ್ನು ಫೇಸ್‌ಬುಕ್‌ನಲ್ಲಿ ಗಮನಿಸಿದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಸಂದೇಶ ರವಾನಿಸಿ, ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ತಿಳಿಸಿದರು. ಅದರಂತೆ ದ.ಕ. ಜಿಲ್ಲಾಡಳಿತ, ಜಿಲ್ಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ತತ್‌ಕ್ಷಣ ಆಧಾರ್ ಕಾರ್ಡ್ ಒದಗಿಸುವಂತೆ ನಿರ್ದೇಶಿಸಿದರು.
5 ವರ್ಷಗಳ ಅಲೆದಾಟಕ್ಕೆ ಮುಕ್ತಿ :
ಕೂಲಿ ಕಾರ್ಮಿಕ ಬಾಬು ಮತ್ತು ಗೀತಾ ದಂಪತಿ ಪುತ್ರಿ ಪವಿತ್ರಾ ಕಳೆದ ಐದು ವರ್ಷದಿಂದ ಆಧಾರ್ ಕಾರ್ಡ್‌ಗಾಗಿ ಪೋಷಕರ ಜತೆ ಸುತ್ತಾಡದ ಕಚೇರಿಗಳಿಲ್ಲ. ಖಾಸಗಿ, ಸರಕಾರಿ ಕೇಂದ್ರಗಳಲ್ಲಿ ಆಧಾರ್ ನೋಂದಣಿ ಮಾಡಿದ್ದರೂ ಈ ತನಕ ಕಾರ್ಡ್ ಸಿಕ್ಕಿರಲಿಲ್ಲ. ಪರಿಣಾಮ ಬಾಲಕಿ ಸ್ಕಾಲರ್ ಶಿಪ್ ಸೌಲಭ್ಯದಿಂದಲೂ ವಂಚಿತೆಯಾಗಿದ್ದಳು. ಇದೀಗ ಪವಿತ್ರಾ ಹಾಗೂ ಆಕೆಯ ಪೋಷಕರ ಐದು ವರ್ಷದ ಅಲೆದಾಟಕ್ಕೆ ಮುಕ್ತಿ ಸಿಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.