ಗ್ರಾಮ ವಾಸ್ತವ್ಯದಲ್ಲಿ ಸ್ಥಳದಲ್ಲೇ ಸಮಸ್ಯೆ ನೀಗಲಿ


Team Udayavani, Feb 20, 2021, 12:01 PM IST

ಗ್ರಾಮ ವಾಸ್ತವ್ಯದಲ್ಲಿ ಸ್ಥಳದಲ್ಲೇ ಸಮಸ್ಯೆ ನೀಗಲಿ

ಕೊಳ್ಳೇಗಾಲ: ಸಮಸ್ಯೆಗಳ ಸರಮಾಲೆಯನ್ನೇ ಹೊದ್ದುಕೊಂಡಿರುವ ತಾಲೂ ಕಿನ ಹೊಸ ಮಾಲಂಗಿ ಗ್ರಾಮದಲ್ಲಿ ಜಿಲ್ಲಾಡಳಿತವೇ ವಾಸ್ತವ್ಯ ಹೂಡಲಿದ್ದು, ಈ ಹಳ್ಳಿಯ ಜನರು ಸ್ಥಳದಲ್ಲೇ ಸಮಸ್ಯೆಗಳು ಇತ್ಯರ್ಥವಾಗುವ ಆಶಾಭಾವನೆ ಹೊಂದಿದ್ದಾರೆ.

ಸಾಮಾಜಿಕ ಭದ್ರತೆ ಯೋಜನೆಯಡಿಮಾಸಾಶನ, ಪಿಂಚಣಿ, ಜಮೀನು ದಾಖಲೆ ಮತ್ತಿತರ ಕೆಲಸ ಕಾರ್ಯಗಳಿಗೆ ತಾಲೂಕು ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಿಗೆ ಅಲೆದಾಡಿ ರೋಸಿ ಹೋಗಿದ್ದ ಗ್ರಾಮಸ್ಥರು ಇದೀಗ ಜಿಲ್ಲಾಡಳಿತವೇ ಗ್ರಾಮದಲ್ಲಿ ಬೀಡು ಬಿಡುತ್ತಿರುವುದರಿಂದ ಸಂತಸಗೊಂಡಿದ್ದು, ನಮ್ಮೂರಿನ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ ಎಂಬ ವಿಶ್ವಾಸ ಹೊಂದಿದ್ದಾರೆ.

ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆಗೆ ಎಂಬ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮ ಯಾವ ರೀತಿ ಫ‌ಲಕಾರಿಯಾಗುತ್ತದೆ ಎಂಬುದನ್ನು ಒಂದೇ ದಿನದಲ್ಲಿ ಉತ್ತರ ಸಿಗಲಿದೆ.

ಒಂದು ಗ್ರಾಮದ ಎಂದಾ ಕ್ಷಣ ಗ್ರಾಮದಲ್ಲಿ ವಿವಿಧ ಕೋಮಿನ ಜನರು ಇರು ತ್ತಾರೆ. ಅದೇ ರೀತಿ ಗ್ರಾಮಗಳಲ್ಲಿ ಸಮ ಸ್ಯೆಗಳು ಹೊದ್ದು ಮಲಗುವಷ್ಟು ಇರುತ್ತವೆ. ವಿವಿಧ ಇಲಾಖೆಗಳ ಅಧಿಕಾರಿಗಳೇ ದಂಡೇ ಗ್ರಾಮದಲ್ಲಿ ತಂಗುವುದರಿಂದ ವರ್ಷಗಟ್ಟಲೆ, ತಿಂಗಳುಗಟ್ಟಲೆ ಕಾಡುತ್ತಿರುವ ವಿವಾದಗಳು ಒಂದು ದಿನ ದಲ್ಲೇ ಇತ್ಯರ್ಥವಾಗುವುದೇ ಎಂಬ ಕುತೂಹಲ ಗ್ರಾಮಸ್ಥರಲ್ಲಿ ಮನೆಮಾಡಿದೆ. ಜಿಲ್ಲಾ ಡಳಿತ ವಾಸ್ತವ್ಯದಿಂದ ಗ್ರಾಮದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿ ಹಾರ ಸಿಗುವ ಉದ್ದೇಶವನ್ನಿಟ್ಟುಕೊಂಡು ಕಾರ್ಯಕ್ರಮ ರೂಪಿಸಲಾಗಿದೆ.

ಮಾಸಾಶನ: ವೃದ್ಧರು, ವಿಧವೆಯರು, ಅಂಗವಿಕಲರಿಗೆ ಸಾಮಾಜಿಕ ಭದ್ರತೆ ಯೋಜನೆಯಡಿ ಮಾಸಾಶನ ನೀಡುತ್ತಿದ್ದು, ಸಾಕಷ್ಟು ಫ‌ಲಾನುಭವಿ ಗಳು ಸೌಲಭ್ಯಕ್ಕಾಗಿ ತಾಲೂಕು ಕಚೇರಿ ಮತ್ತು ಗ್ರಾಮ ಪಂಚಾಯ್ತಿಗೆ ಸುತ್ತಾಡಿದ್ದರೂ‌ ಸಕಾಲದಲ್ಲಿ ಪಿಂಚಣಿ ಸಿಕ್ಕಿಲ್ಲ. ಅರ್ಹರು ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಲು ಆಗಿಲ್ಲ. ಮಧ್ಯವರ್ತಿಗಳ ಮೊರೆ ಹೋಗುತ್ತಿರುವ ಜನರು ರೋಸಿ ಹೋಗಿದ್ದಾರೆ.

ಇ- ಸ್ವ ತ್ತು: ಇ-ಸ್ವತ್ತು, ಸಾಲ ಸೌಲಭ್ಯ, ಇನ್ನಿತರ ಕೆಲಸಗಳಿಗೆ ಗ್ರಾಮಸ್ಥರು  ತಿಂಗಳಾನು ಗಟ್ಟಲೇ ಪಟ್ಟಣಕ್ಕೂ, ಗ್ರಾಮಕ್ಕೂ ಅಲೆದಾಡುವ ಸ್ಥಿತಿ ಒಂದೆಡೆಯಾದರೆ, ಮತ್ತೂಂದೆಡೆ ಆಧಾರ್‌ ಕಾರ್ಡ್‌ ನಲ್ಲಿ ಉಂಟಾಗಿರುವ ನ್ಯೂನತೆ ಸರಿಪಡಿಸಲು ಅಲೆದಾಟ, ಆರ್‌ಟಿಸಿಯಲ್ಲಿ ಗೊಂದಲ ಸೇರಿದಂತೆ ಅನೇಕ ಸಮಸ್ಯೆಗಳು ಇನ್ನಿಲ್ಲದಂತೆ ಕಾಡುತ್ತಿವೆ.

ಸ್ಮಶಾನ ವಿವಾದ: ಹೊಸ ಮಾಲಂಗಿ ಗ್ರಾಮ ಬಹು ಸಮಾ ಜದ ಜನರು ವಾಸಿ ಸುವ ಒಂದು ದೊಡ್ಡ ಗ್ರಾಮವಾಗಿದೆ. ಇಲ್ಲಿ ಸ್ಮಶಾನಕ್ಕಾಗಿ ಗ್ರಾಮಸ್ಥರು ಅರ್ಜಿಗಳನ್ನು ಚುನಾಯಿತ ಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಸಲ್ಲಿಸಿ, ಸ್ಮಶಾನಕ್ಕಾಗಿ ಹಲವಾರು ಬಾರಿ ಹೋರಾಟ ನಡೆಸಿದ್ದರು. ಗ್ರಾಮ ಸ್ಥರ ಒತ್ತಾಯದ ಮೇರೆಗೆ ಒಂದು ಎಕರೆ ಜಮೀನು ನೀಡಲಾಗಿತ್ತು. ಆದರೆ, ಈ ಜಮೀನು ವಿವಾದ ನ್ಯಾಯಾಲಯದ ಮೆಟ್ಟಿಲೇರಿದ್ದು, ಇದಕ್ಕೆ ತಾರ್ಕಿಕ ಅಂತ್ಯವಾಡಬೇಕಿದೆ.

ಕೆರೆ‌ ಒತ್ತುವರಿ: ಗ್ರಾಮದಲ್ಲಿ ಸುಮಾರು 2 ಎಕರೆಗೂ ಹೆಚ್ಚು ವಿಸ್ತೀರ್ಣದ ದೊಡ್ಡ ಕೆರೆ ಇದೆ. ಇದನ್ನು ಹಲವರು ಒತ್ತುವರಿ ಮಾಡಿ ಕೊಂಡಿದ್ದಾರೆ. ಈ ಕುರಿತು

ಸಾರ್ವಜನಿಕರು ಹಲವು ಬಾರಿ ಗಮನ ಸೆಳೆದಿದ್ದರೂ ಇನ್ನೂ ಇತ್ಯರ್ಥವಾಗಿಲ್ಲ. ಯಾರೊಬ್ಬರೂ ತಲೆ ಕಡೆಸಿಕೊಂಡಿಲ್ಲ. ಗ್ರಾಮದಲ್ಲೇ ತಹಶೀಲ್ದಾರ್‌ ಸೇರಿದಂತೆ ಕಂದಾಯ ಹಾಗೂ ಗ್ರಾಪಂ ಅಧಿಕಾರಿಗಳು ವಾಸ್ತವ್ಯ ಹೂಡುತ್ತಿರುವುದರಿಂದ ಕರೆಒತ್ತುವರಿಯನ್ನು ತೆರವುಗೊಳಿಸಿ, ಪುನಶ್ಚೇನ ಕೈಗೊಳ್ಳಬೇಕಿದೆ. ಗ್ರಾಮಗಳ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿರುವ ಟಗರಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹ ದೇವ ಪ್ರಭು, ಹೊಸ ಮಾಲಂಗಿ ಗ್ರಾಮವು ಟಗರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದು, ಗ್ರಾಮಕ್ಕೆ ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪ ಸೇರಿ ದಂತೆ ಮೂಲ ಭೂತ ಸೌಕ ರ್ಯ ಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ರೇಷನ್‌ ಕಾರ್ಡ್‌ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಬಹುದು. ಕೆಲವು ಗ್ರಾಮಸ್ಥರ ಜಮೀನುಗಳು ಪೋಡು ಆಗಿಲ್ಲವೆಂದು ದೂರುಗಳು ಬಂದಿವೆ. ಅದೇ ರೀತಿ ಉಳಿದಂತೆ ಸಣ್ಣ ಪುಟ್ಟ ಸಮಸ್ಯೆಗಳು ಇದ್ದು, ಇವುಗಳನ್ನು ಸ್ಥಳದಲ್ಲೇ ಬಗೆ ಹರಿಸಲಾಗುವುದು. ಕೆ.ಕುನಾಲ್‌, ತಹಶೀಲ್ದಾರ್‌

 

ಡಿ.ನಟರಾಜು

ಟಾಪ್ ನ್ಯೂಸ್

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.