ತಳಮಟ್ಟದಿಂದ ಪಕ್ಷ ಸಂಘಟಿಸಲು ಆಗ್ರಹ

ಜಿಡಿಎಸ್ ಜಿಲ್ಲಾಧ್ಯಕ್ಷರ ವಿರುದ್ಧ ಕಾರ್ಯಕರ್ತರ ಆಕ್ರೋಶ

Team Udayavani, Feb 20, 2021, 4:44 PM IST

JDS

ಶಿವಮೊಗ್ಗ: ಇಲ್ಲಿನ ಜೆಡಿಎಸ್‌ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ವೀಕ್ಷಕರ ಸಮಿತಿ ಸಭೆಯಲ್ಲಿ ಜಿಲ್ಲಾಧ್ಯಕ್ಷರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಯಿತು.

ನೂತನ ಜಿಲ್ಲಾಧ್ಯಕ್ಷರನ್ನು ನೇಮಿಸಬೇಕು, ತಳಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂಬ ಆಗ್ರಹ ಕೇಳಿ ಬಂದಿತು. ಮಾಜಿ ಸಚಿವ ಬಿ.ಬಿ. ನಿಂಗಯ್ಯ ನೇತೃತ್ವದಲ್ಲಿ ಜೆಡಿಎಸ್‌ನ ಜಿಲ್ಲಾ ಕಚೇರಿ ಗಾಂಧಿ  ಮಂದಿರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ, ಜಿಲ್ಲಾಧ್ಯಕ್ಷರ ವಿರುದ್ಧವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಘಟಕದ ಅಧ್ಯಕ್ಷರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಪಕ್ಷ ಸಂಘಟನೆ ಕುರಿತು ಮಾತನಾಡಿದ ಬಹುತೇಕರು, ಜಿಲ್ಲಾಧ್ಯಕ್ಷರ ಬದಲಾವಣೆಗೆ ಒತ್ತಾಯಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್‌ ಅವರಿಗೆ ಜಿಲ್ಲಾ ಜೆಡಿಎಸ್‌ನ ಜವಾಬ್ದಾರಿ ನೀಡಬೇಕು ಎಂದು ಒತ್ತಾಯಿಸಿದರು.

ಹಾಗೆ ಬಂದು ಹೀಗೆ ಹೋಗುವವರಿಗೆ ಅಧಿಕಾರ ಕೊಡಬೇಡಿ. ಮಂಜುನಾಥ ಗೌಡ ಅವರನ್ನು ರಾತ್ರೋರಾತ್ರಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅದು ಪಕ್ಷದ ಕ್ರಮವೇ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಕಾರ್ಯಕರ್ತರಿಗೆ ಅಧಿ ಕಾರ ಕೊಡಲಿಲ್ಲ. ಜಿಲ್ಲೆಯಲ್ಲಿ ಪಕ್ಷಕ್ಕೆ ಕಾರ್ಯಕರ್ತರಿದ್ದಾರೆ. ಆದರೆ ಅಧಿಕಾರಕ್ಕೆ ಬಂದಾಗ ಕಾರ್ಯಕರ್ತರಿಗೆ ಸ್ಥಾನಮಾನ ಕೊಡಲಿಲ್ಲ. ಬೆಂಗಳೂರು ಕೇಂದ್ರಿತವಾಗಿ ಕಾರ್ಯಕರ್ತರಿಗೆ ವಿವಿಧ ಜವಾಬ್ದಾರಿ ನೀಡಲಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್‌ ಅವರಿಗೆ ಅಧಿಕಾರ ಕೊಡಿ ಎಂದು  ಕಾರ್ಯಕರ್ತರು ಆಗ್ರಹಿಸಿದರು. ಎಂ. ಶ್ರೀಕಾಂತ್‌ ಅವರಿಗೆ ಅಧಿ ಕಾರ ಕೊಟ್ಟು, ಅವರನ್ನು ಮುಂದೆ ಬಿಟ್ಟು, ಉಳಿದವರೆಲ್ಲ ಹಿಂದೆ ಸರಿಯುವುದಲ್ಲ. ಅವರ ಮುಂದಾಳತ್ವದಲ್ಲಿ ಸಂಘಟನೆ ಆಗಬೇಕು. ಪಕ್ಷಕ್ಕೆ ಹೈಕಮಾಂಡ್‌ ನಿಂದ ಹಣಕಾಸಿನ ನೆರವು ಕೂಡ ಕೊಡಬೇಕು ಎಂದು ಕುರುಣಾಮೂರ್ತಿ ಹೇಳಿದರು.

ಕಾರ್ಯಕರ್ತರ ಸಭೆಗೆ ಜಿಲ್ಲಾಧ್ಯಕ್ಷ ಆರ್‌.ಎಂ. ಮಂಜುನಾಥ ಗೌಡ ಗೈರಾಗಿದ್ದರು. ಅವರು ಕೋರ್ಟ್‌ಗೆ ಹಾಜರಾಗಬೇಕಿರುವ ಹಿನ್ನೆಲೆಯಲ್ಲಿ ಸಭೆಗೆ ಬಂದಿಲ್ಲ. ಹಲವು ಹೋರಾಟ ನಡೆಸಿದ್ದಾರೆ. ಪಕ್ಷದ ಸಂಘಟನೆ ಮಾಡುತ್ತಿದ್ದಾರೆ ಎಂದು ತೀರ್ಥಹಳ್ಳಿಯ ಸುಂದರೇಶ್‌ ತಿಳಿಸಿದರು.

ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಕಾಂತರಾಜು ಅವರು, ಮಂಜುನಾಥ ಗೌಡ ಅವರಿಂದಾಗಿಯೇ ಪಕ್ಷಕ್ಕೆ ಈ  ಸ್ಥಿತಿ ಬಂದಿದೆ. ಅ ಧಿಕಾರ ಇದ್ದಾಗ ಇದ್ದರು. ಅಧಿ ಕಾರ ಹೋದ ಮರುದಿನದಿಂದ ಈ ಕಡೆ ಬಂದಿಲ್ಲ ಎಂದರು. ಕಾಂತರಾಜು ಅವರೊಂದಿಗೆ ಹಲವರು ಧ್ವನಿಗೂಡಿಸಿದರು. ಮಧ್ಯ ಪ್ರವೇಶಿಸಿದ ಶ್ರೀಕಾಂತ್‌ ಅವರು, ಮಂಜುನಾಥಗೌಡ ಅವರು ತೀರ್ಥಹಳ್ಳಿಯಲ್ಲಿ ಸಂಘಟನೆ ಮಾಡುತ್ತಿದ್ದಾರೆ. ಆದರೆ ಅವರು ಜಿಲ್ಲಾ ಮಟ್ಟದಲ್ಲಿ ಸಂಘಟನೆ ಮಾಡಬೇಕು ಎಂದು ಎಲ್ಲರನ್ನೂ ಸಮಾಧಾನಪಡಿಸಿದರು.

ಜಿಪಂ ಸದಸ್ಯ ಮಣಿಶೇಖರ್‌ ಮಾತನಾಡಿದರು. ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್‌, ಡಿ.ಯಶೋಧರ, ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು. ವೀಕ್ಷಕರ ಸಮಿತಿಯಲ್ಲಿದ್ದ ಪ್ರಜ್ವಲ್‌ ರೇವಣ್ಣ ಗೈರಾಗಿದ್ದರು.

ಟಾಪ್ ನ್ಯೂಸ್

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.