ತಹಶೀಲ್ದಾರ್ ಗ್ರಾಮ ವಾಸ್ತವ್ಯ : “ಸಾರ್ವಜನಿಕರ ತಳಮಟ್ಟದ ಸಮಸ್ಯೆಗಳಿಗೆ ಪರಿಹಾರ’
Team Udayavani, Feb 21, 2021, 5:30 AM IST
ಬಜಪೆ: ಮುಚ್ಚಾರು ಗ್ರಾ.ಪಂ. ವ್ಯಾಪ್ತಿಯ ಕೊಂಪದವು ಹಾಗೂ ಮುಚ್ಚಾರು ಗ್ರಾಮದಲ್ಲಿ ಕಂದಾಯ ಇಲಾಖೆಗೆ ಸಂಬಂಧ ಪಟ್ಟ ಸಮಸ್ಯೆಗಳ ಹಾಗೂ ಅರ್ಜಿ ವಿಲೇವಾರಿ ಮಾಡಲು ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಶನಿವಾರ ಮುಚ್ಚಾರು ಗ್ರಾ.ಪಂ. ಕಚೇರಿಯಲ್ಲಿ ಜರಗಿತು.
ಕಾರ್ಯಕ್ರಮವನ್ನು ಜಿ.ಪಂ. ಸದಸ್ಯ ಜನಾರ್ದನ ಗೌಡ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ, ಜನರ ಬಳಿಗೆ ಅಧಿಕಾರಿಗಳು ಬರುವುದರಿಂದ ತಳಮಟ್ಟದಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡಕೊಳ್ಳಬಹುದಾಗಿದೆ. ಅಲ್ಲದೆ ಜನರಿಗೆ ಸರಕಾರದ ಯೋಜನೆ, ಕಾರ್ಯಕ್ರಮಗಳ ಮಾಹಿತಿ ತಿಳಿಯಲು ಪೂರಕವಾಗುತ್ತದೆ. ಇದನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಮಂಗಳೂರು ತಾ| ಸಹಾಯಕ ಕಮಿಷನರ್ ಮದನ್ ಮೋಹನ್, ತಹಶೀಲ್ದಾರ್ ಗುರುಪ್ರಸಾದ್, ಗ್ರಾ.ಪಂ. ಅಧ್ಯಕ್ಷೆ ಮೋಹಿನಿ, ಉಪಾಧ್ಯಕ್ಷ ನಾರಾಯಣ ಪೂಜಾರಿ, ಪಿಡಿಒ ಜಲಜಾ, ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.
ಉಪತಹಶೀಲ್ದಾರ್ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಗ್ರಾ.ಪಂ. ಕಾರ್ಯದರ್ಶಿ ಸತೀಶ್ ಕುಮಾರ್ ಪಿ.ವಿ. ವಂದಿಸಿದರು. ಕಂದಾಯ ನಿರೀಕ್ಷಕರು ನವನೀತ್ ಮಾಳವ, ಆಹಾರ ಇಲಾಖೆಯ ಅಧಿಕಾರಿಗಳು, ಸರ್ವೇ ಇಲಾಖೆಯ ಅಧಿಕಾರಿಗಳು, ಗ್ರಾಮ ಕರಣಿಕರು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಕೃಷಿ ಇಲಾಖೆಯ ಅಧಿಕಾರಿಗಳು, ನಾಡ ಕಚೇರಿಯ ಸಿಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾ.ಪಂ. ಸಿಬಂದಿ ಸಹಕರಿಸಿದರು.
107 ಅರ್ಜಿ ಸ್ವೀಕಾರ
ಸುಮಾರು 150ಕ್ಕಿಂತಲೂ ಹೆಚ್ಚು ಗ್ರಾಮಸ್ಥರು ಭಾಗವಹಿಸಿದರು. ಹಕ್ಕುಪತ್ರ, ಸಂಧ್ಯಾ ಸುರಕ್ಷಾ ವೇತನ, ವಿಧವಾವೇತನ, ವೃದ್ಧಾಪ್ಯ ವೇತನ, ಮನಸ್ವಿನಿ, ಅಂಗವಿಕಲ ವೇತನಗಳು, ಮತದಾರರ ಪಟ್ಟಿ ಪರಿಶೀಲನೆ, ಸೇರ್ಪಡೆ, ಸ್ಥಳಕ್ಕೆ ಭೇಟಿ ನೀಡಿ ರಸ್ತೆ, ಪ.ಜಾತಿ, ಪಂಗಡದ ಪಿಂಚಣಿ, ಜಾಗದ ತಕರಾರುಗಳ ಬಗ್ಗೆ ಪರಿಹಾರ ಕಂಡುಕೊಳ್ಳಲಾಯಿತು. ಮಧ್ಯಾಹ್ನದ ವೇಳೆಗೆ ಸ್ವೀಕರಿಸಿದ ಅರ್ಜಿಗಳು ಪಿಂಚಣಿ 55, ಜಾತಿ ಆದಾಯ 46, ಸರ್ವೇ ಇಲಾಖೆ 6 ಒಟ್ಟು 107 ಅರ್ಜಿಗಳನ್ನು ಸ್ವೀಕರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.