ಯಾಕೆ ಫೆ. 21ನ್ನು ವಿಶ್ವ ಮಾತೃ ಭಾಷಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ..!?

ವಿಶ್ವ ಮಾತೃ ಭಾಷೆಯ ಹಿನ್ನೆಲೆ

Team Udayavani, Feb 21, 2021, 12:41 PM IST

Why February 21 Is Celebrated As Matrubhasha Diwas

ಭಾರತ ಅನೇಕ ಸಂಸ್ಕೃತಿ, ಪರಂಪರೆ, ಸಂಪ್ರದಾಯ ಹಾಗೂ ಭಹು ಭಾಷೆಯನ್ನು ಹೊಂದಿರುವ ರಾಷ್ಟ್ರ. ಪ್ರಾಧೇಶಿಕ ವೈವಿಧ್ಯತೆಯ ಆಧಾರದ ಮೇಲೆ ಭಾಷೆಗಳು ಬೆಳೆದು ಶ್ರೀಮಂತ ಸಂಸ್ಕೃತಿಗೆ ಕಾರಣವಾಗುತ್ತದೆ. ಇಡೀ ಜಗತ್ತಿನಲ್ಲಿ ಅಂದಾಜು ಏಳು ಸಾವಿರ ಭಾಷೆಗಳಿದ್ದು, ಅವುಗಳಲ್ಲಿ ಎಷ್ಟೋ ಭಾಷೆಗಳು ಇಂದು ಅಳಿವಿನಂಚಿನಲ್ಲಿವೆ. ಆ ಎಲ್ಲಾ ಭಾಷಾ ಸಂಸ್ಕೃತಿಯ ಬಹು ಭಾಷಾವಾದವನ್ನು, ಸಬಲೀಕರಣದತ್ತ ಸಾಗಿಸಲು ವಿಶ್ವ ಮಾತೃ ಭಾಷಾ ದಿನವನ್ನು ಆಚರಿಸಲಾಗುತ್ತಿದೆ.

ಓದಿ : ಬಿಸಿನೀರು ಹಾಗೂ ತಣ್ಣೀರನ್ನು ದೈನಂದಿನ ಬದುಕಿನಲ್ಲಿ ಹೇಗೆ ಬಳಸಬೇಕು?

ಫೆಬ್ರವರಿ 21 ನ್ನು ಪ್ರಪಂಚಾದ್ಯಂತ ವಿಶ್ವ ಮಾತೃ ಭಾಷೆ ದಿನವಾಗಿ ಆಚರಿಸಲಾಗುತ್ತದೆ. ಬಹುಭಾಷೆ ಮತ್ತು ಬಹುಸಂಸ್ಕೃತಿಯನ್ನು ಪ್ರತಿಬಿಂಬಿಸಲು ಮತ್ತು ಪ್ರೋತ್ಸಾಹಿಸಿ ಉಳಿಸಲು ಈ ಆಚರಣೆಯನ್ನು ಮಾಡಲಾಗುತ್ತಿದೆ. 1999 ರಲ್ಲಿ ಮೊದಲ ಬಾರಿಗೆ ಇದನ್ನು ಯುನೆಸ್ಕೋ ಘೋಷಿಸಿತು. ಇದರ ಮುಂದುವರೆದ ಭಾಗವಾಗಿ ವಿಶ್ವಸಂಸ್ಥೆಯು 2008 ನ್ನು ವಿಶ್ವ ಭಾಷೆಗಳ ವರ್ಷ ಎಂದು ಆಚರಿಸಿತು. 2000 ನೆಯ ಇಸವಿಯಿಂದ ಪ್ರತಿ ವರ್ಷ ವಿಶ್ವ ಮಾತೃ ಭಾಷೆ ದಿವಸವನ್ನು ಆಚರಿಸಲಾಗುತ್ತಿದೆ. 1952 ನೆಯ ಇಸವಿಯಲ್ಲಿ ಅಂದಿನ ಪಾಕಿಸ್ತಾನದ ಭಾಗವಾಗಿದ್ದ ಇಂದಿನ ಬಾಂಗ್ಲಾದೇಶದಲ್ಲಿ ಬಾಂಗ್ಲಾ ಭಾಷೆಯನ್ನು ಅಧಿಕೃತ ಭಾಷೆಯಾಗಿ ಗುರುತಿಸಿ ಘೋಷಿಸಬೇಕು ಎಂದು ಹೋರಾಡಿ ವಿದ್ಯಾರ್ಥಿಗಳು ಸತ್ತದಿನದ ನೆನಪಿಗೆ ಈ ಆಚರಣೆಯನ್ನು ಮಾಡಲಾಗುತ್ತಿದೆ.

ವಿಶ್ವ ಮಾತೃ ಭಾಷೆ ದಿನದ ಹಿನ್ನೆಲೆ :

1947 ರಲ್ಲಿ ಭಾರತದಿಂದ ಪಾಕಿಸ್ತಾನ ವಿಭಜನೆಗೊಂಡಾಗ ಅಲ್ಲಿ ಪೂರ್ವ ಪಾಕಿಸ್ತಾನ, ಪಶ್ಚಿಮ ಪಾಕಿಸ್ತಾನ ಎಂಬ ಎರಡು ಭೂ ಪ್ರದೇಶಗಳು ರಚನೆಯಾದುವು. ಪೂರ್ವ ಪಾಕಿಸ್ತಾನವೆಂದರೆ ಇಂದಿನ ಬಾಂಗ್ಲಾದೇಶ, ಪಶ್ಚಿಮ ಪಾಕಿಸ್ತಾನವೆಂದರೆ ಈಗಿರುವ ಪಾಕಿಸ್ತಾನ. ಪೂರ್ವ ಪಾಕಿಸ್ತಾನದ ಮಾತೃಭಾಷೆ ಬಂಗಾಳಿಯಾಗಿತ್ತು. ಪಶ್ಚಿಮ ಪಾಕಿಸ್ತಾನದ ಮಾತೃಭಾಷೆ ಉರ್ದು ಆಗಿತ್ತು.

ಓದಿ : ಕೋವಿಡ್ 2ನೇ ಅಲೆಯ ಬಗ್ಗೆ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಬಸವರಾಜ ಬೊಮ್ಮಾಯಿ

1948 ರಲ್ಲಿ ಪಶ್ಚಿಮ ಪಾಕಿಸ್ತಾನ ಮಾತೃಭಾಷೆ ಉರ್ದುವನ್ನು’ ರಾಷ್ಟ್ರಭಾಷೆ’ಯೆಂದು ಘೋಷಿಸಿತು. ಇದರಿಂದ ಪೂರ್ವ ಪಾಕಿಸ್ತಾನದ ಬಂಗಾಳಿ ಭಾಷೆಯನ್ನು ಮಾತಾನಾಡುತ್ತಿದ್ದವರು ತುಂಬ ಅಸಮಾಧಾನಗೊಂಡರು. ಉರ್ದುವನ್ನು ರಾಷ್ಟ್ರಭಾಷೆ ಮಾಡಿದ್ದನ್ನು ವಿರೋಧಿಸಿ ಪ್ರತಿಭಟನೆ ಮಾಡತೊಡಗಿದರು. ಆಗ ಪಾಕ್ ಇವರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಕೂಡ ಮಾಡಿತು.

ಪಾಕ್ ಸರ್ಕಾರದ ನಿಷೇಧವನ್ನು ಮೀರಿ 21. 02. 1952 ರಂದು ಢಾಕಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡತೊಡಗಿದರು.ಪ್ರತಿಭಟನೆ ತೀವ್ರ ಸ್ವರೂಪ ಪಡೆದಾಗ, ಪಾಕ್ ಸರ್ಕಾರದ ಆದೇಶದಂತೆ ಪೋಲಿಸರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದಾಗ ಢಾಕಾ ವಿಶ್ವವಿದ್ಯಾನಿಲಯದ ಕೆಲವು ವಿದ್ಯಾರ್ಥಿಗಳು ಅಸುನೀಗಿದರು.

ಬಾಂಗ್ಲಾದೇಶದ ಮಾತೃಭಾಷೆ ಬಂಗಾಳಿಯನ್ನು ಆಡಳಿತ ಭಾಷೆಯನ್ನಾಗಿ ಮಾಡಬೇಕೆಂದು ಪ್ರಾಣತೆತ್ತ ವಿದ್ಯಾರ್ಥಿಗಳ ನೆನಪಿಗಾಗಿ ಆ ದಿನವನ್ನು ವಿಶ್ವಸಂಸ್ಥೆಯ ಯುನೆಸ್ಕೊವು “ವಿಶ್ವ ಮಾತೃ ಭಾಷೆ ದಿವಸ”ವನ್ನಾಗಿ ಆಚರಿಸುವಂತೆ ಘೋಷಿಸಿತು.

ಈ ವರ್ಷದ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನ ಧ್ಯೇಯ : ಸುಸ್ಥಿರ ಅಭಿವೃದ್ಧಿಗೆ ಭಾಷಾ ವೈವಿಧ್ಯತೆಯ ಮತ್ತು ಬಹು ಭಾಷಾವಾದದ ಎಣಿಕೆ.

ಓದಿ : ಡ್ರಗ್ಸ್ ದಂಧೆಯಲ್ಲಿ ಕೈಲಾಶ್ ವಿಜಯವರ್ಗಿಯಾ ಅವರ ಸಹಾಯಕ… ?!

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.