ಸರ್ಕಾರಿ ಸವಲತ್ತು ಅರ್ಹರಿಗೆ ತಲುಪಲಿ
"ಸರ್ಕಾರದ ನಡೆ ಹಳ್ಳಿಯ ಕಡೆ' ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಉದ್ಘಾಟಿಸಿದರು
Team Udayavani, Feb 21, 2021, 3:29 PM IST
ಚನ್ನಗಿರಿ: ಗ್ರಾಮೀಣರ ಸಮಸ್ಯೆಗಳ ಜೊತೆಯಲ್ಲಿ ಅವರ ಕುಂದುಕೊರತೆಗಳನ್ನು ಆಲಿಸಲು·ಅಧಿಕಾರಿಗಳು ನೇರವಾಗಿ ಮನೆ ಮನೆಗೆ ತೆರಳಿ ಮಾಹಿತಿ ಪಡೆದು ಸೇವೆ ನೀಡಲಿದ್ದಾರೆ·ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.
ತಾಲೂಕಿನ ದುರ್ವಿಗೆರೆ ಗ್ರಾಮದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ”ಸರ್ಕಾರದ ನಡೆ-ಹಳ್ಳಿಯ ಕಡೆ’ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನುಉದ್ಘಾಟಿಸಿ ಅವರು ಮಾತನಾಡಿದರು.
ಯಾವ ಗ್ರಾಮವೂ ಮೂಲ ಸೌಕರ್ಯಗಳಿಂದವಂಚಿತವಾಗಬಾರದು ಎಂಬ ಉದ್ದೇಶದೊಂದಿಗೆ ಸರ್ಕಾರವೇ ನೇರವಾಗಿ ಗ್ರಾಮಗಳಿಗೆಭೇಟಿ ನೀಡಿ ಅಲ್ಲಿರುವ ಸಮಸ್ಯೆಗಳನ್ನು ಆಲಿಸಿ ಅವರಿಗೆ ಸೌಲಭ್ಯಗಳನ್ನು ನೀಡುವಂತಹವಿನೂತನ ಕಾರ್ಯಕ್ರಮ ಇದಾಗಿದೆ. ಗ್ರಾಮೀಣ ಪ್ರದೇಶದ ಎಷ್ಟೋ ಜನರು ಸರ್ಕಾರದಸೌಲಭ್ಯಗಳನ್ನು ಬಳಸಿಕೊಳ್ಳದೆ ವಂಚಿತರಾಗಿದ್ದಾರೆ. ಯಾರಿಗೆ ಸರ್ಕಾರದ ಸೌಲಭ್ಯಸಿಕ್ಕಿಲ್ಲವೋ ಅಂತಹವರನ್ನು ಗುರುತಿಸಿ ಸೌಲಭ್ಯ ಒದಗಿಸಲಿದ್ದಾರೆ ಎಂದರು. ದುರ್ವಿಗೆರೆಗ್ರಾಪಂ ವ್ಯಾಪ್ತಿಯಲ್ಲಿ ಪ್ರತಿಯೊಂದು ಮನೆಗಳಿಗೆ ನಲ್ಲಿ ಸಂಪರ್ಕ ಕೊಡಿಸಲು 1.62
ಕೋಟಿ ರೂ. ಹಾಗೂ ಶಾಲಾ ಕೊಠಡಿ ನಿರ್ಮಾಣಕ್ಕೆ ಹೆಚ್ಚುವರಿಯಾಗಿ 27 ಲಕ್ಷ ರೂ.ಮಂಜೂರು ಮಾಡಲಾಗಿದೆ. ಗ್ರಾಮದಲ್ಲಿ ಬೆಸ್ಕಾಂನಿಂದ ಹಳೆಯ ವಿದ್ಯುತ್ ಕಂಬಗಳನ್ನುತೆರವುಗೊಳಿಸಿ ಹೊಸ ವಿದ್ಯುತ್ ಕಂಬ ಹಾಗೂ ಲೈನ್‌ಗಳನ್ನು ಹಾಕಿಸಲಾಗುವುದು ಎಂದುತಿಳಿಸಿದರು. ತಹಶೀಲ್ದಾರ್ ಪಟ್ಟರಾಜ ಗೌಡ ದುರ್ವಿಗೆರೆ ಗ್ರಾಪಂ ಅಧ್ಯಕ್ಷ ತಿಪ್ಪೇಶ್ ನಾಯ್ಕಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷೆ ಕವಿತಾ ಕಲ್ಲೇಶ್, ಉಪಾಧ್ಯಕ್ಷೆ ಚಂದ್ರಮ್ಮ ರುದ್ರಪ್ಪ,ಜಿಪಂ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ ನಾಯ್ಕ, ಇಒ ಪ್ರಕಾಶ್ ಇತರರು ಇದ್ದರು.
ಓದಿ :·ದೇಣಿಗೆ ನೀಡುವುದಿಲ್ಲವಾದರೆ ಸಿದ್ದು, HDK ಬಾಯಿ ಮುಚ್ಚಿಕೊಂಡು ತೆಪ್ಪಗಿರಲಿ: ಪ್ರಹ್ಲಾದ್ ಜೋಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.