ದೇಶದಲ್ಲಿ ಸಾಮಾಜಿಕ ಭದ್ರತೆ ಮರೀಚಿಕೆ
ದೇಶದಲ್ಲಿ ಸಾಮಾಜಿಕ ಭದ್ರತೆ ಮರೀಚಿಕೆ
Team Udayavani, Feb 21, 2021, 4:07 PM IST
ದಾವಣಗೆರೆ: ದೇಶದಲ್ಲಿ ರೈತರು ಆರ್ಥಿಕವಾಗಿ, ನೈತಿಕವಾಗಿ ಮತ್ತು ಸಾಂಸ್ಕೃತಿಕವಾಗಿ ದಿವಾಳಿಯಾಗಿದ್ದಾರೆ. ಕಳೆದ 20 ವರ್ಷದಲ್ಲಿ ಮೂರು ಲಕ್ಷಕ್ಕಿಂತ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಮಾಜಿಕ ನ್ಯಾಯದಡಿ ಅವರಿಗೆ ಅವ ಹಕ್ಕು ಒದಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ ದಾಸ್ ಹೇಳಿದರು.
ನಗರದ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಸಾಮಾಜಿಕ ನ್ಯಾಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಉಪನ್ಯಾಸ
ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ದಿನೇ ದಿನೇ ಜಾತಿ ಪ್ರಭಾವ, ಹಣದ ಪ್ರಭಾವ ಹೆಚ್ಚಾಗಿ ದಲಿತರ ಮೇಲೆ ದೌರ್ಜನ್ಯ, ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿವೆ. ತೈಲ ಬೆಲೆ ಏರಿಕೆಯಿಂದ ಜನ ಜೀವನ ದುಬಾರಿಯಾಗಿದೆ. ಇಂತಹ ವ್ಯವಸ್ಥೆ ವಿರುದ್ಧ ಜನ ಧ್ವನಿ ಎತ್ತದೆ ಇರುವುದು ವಿಷಾದನೀಯ ಎಂದರು. ದೇಶದಲ್ಲಿ ಒಂದಿಷ್ಟು ಅಭಿವೃದ್ಧಿ ಸಾಧಿಸಲಾಗಿದೆಯಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಭಿನ್ನ ನೀತಿಗಳಿಂದ ಜನ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಎಂದು ಆತಂಕ ವ್ಯಕ್ತಪಡಿಸಿದರು. ಕಾನೂನು ಕಾಲೇಜು ಪ್ರಾಂಶುಪಾಲ ಡಾ| ಎಂ. ಸೋಮಶೇಖರಪ್ಪ ಅಧ್ಯಕ್ಷತೆ
ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಡಿ.ಪಿ. ಬಸವರಾಜ, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಎಚ್. ಅರುಣ್‌ಕುಮಾರ್, ಜಿ.ಎಸ್.ಯತೀಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಓದಿ : ಗ್ರಾಮ ವಾಸ್ತವ್ಯ: ಅರ್ಜಿಗಳ ಸುರಿಮಳೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.