ಡಿ.ಕಗ್ಗಲ್‌ನಲ್ಲಿ ತಹಶೀಲ್ದಾರ್ ಗ್ರಾಮವಾಸ್ತವ
ಗ್ರಾಮಸ್ಥರಿಂದ ನೂರಾರು ಅರ್ಜಿಗಳ ಸಲ್ಲಿಕೆ
Team Udayavani, Feb 21, 2021, 4:44 PM IST
ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕು ತಿಮ್ಮಲಾಪುರ ಗ್ರಾಮದಲ್ಲಿ ಜಿಲ್ಲಾ ಧಿಕಾರಿಗಳು ಗ್ರಾಮ ವಾಸ್ತವ್ಯ ಹೂಡಿದ ಬೆನ್ನಲ್ಲೇ ಬಳ್ಳಾರಿ ತಾಲೂಕು ಡಿ.ಕಗ್ಗಲ್ ಗ್ರಾಮದಲ್ಲಿ ತಹಶೀಲ್ದಾರ್ ರೆಹನ್ ಪಾಷಾ ವಾಸ್ತವ್ಯ ಹೂಡಿ ಸ್ಥಳೀಯ ಸಾರ್ವಜನಿಕರ ಸಮಸ್ಯೆಗಳನ್ನು ಶನಿವಾರ ಆಲಿಸಿದರು.
ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಗ್ರಾಮದಲ್ಲಿ ಬಿಡಾರ ಹೂಡಿದ್ದ ತಾಲೂಕು ಮಟ್ಟದ ಅ ಧಿಕಾರಿಗಳು, ಸಾರ್ವಜನಿಕರಿಂದ ಕೇಳಿಬರುವ ಸಮಸ್ಯೆಗಳ ಪಟ್ಟಿಯನ್ನು ಮಾಡಿಕೊಂಡಿದ್ದರು. ಜತೆಗೆ ಗ್ರಾಮವಾಸ್ತವ್ಯ ದಿನದಂದು ಆಗಮಿಸಿ ತಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಂತೆ ಸ್ಥಳೀಯ ಜನರಲ್ಲೂ ಜಾಗೃತಿ ಮೂಡಿಸಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಮಸ್ಥರಿಂದ ನೂರಾರು ಅರ್ಜಿಗಳು ಸಲ್ಲಿಕೆಯಾದವು. ಸಂಜೆವರೆಗೆ ಸಲ್ಲಿಕೆಯಾದ ಅಹವಾಲುಗಳ ಪೈಕಿ ಕಂದಾಯ ಇಲಾಖೆಗೆ ಸೇರಿದ ಅರ್ಜಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಮಧ್ಯಾಹ್ನ 1 ಗಂಟೆ ವೇಳೆಗೆ ಪಹಣಿ ತಿದ್ದುಪಡಿಗೆ ಸಂಬಂಧಿಸಿದ 634 ಅರ್ಜಿಗಳು ಸಲ್ಲಿಕೆಯಾಗಿದ್ದವು. ಉಳಿದಂತೆ ಹಕ್ಕುಪತ್ರ ಬದಲಾವಣೆ, ಸ್ಮಶಾನಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಂಬಂಧಿಸಿದ ಅರ್ಜಿಗಳು ಸಲ್ಲಿಕೆಯಾಗಿರುವುದು ಗಮನಾರ್ಹ.
ಡಿ.ಕಗ್ಗಲ್ ಗ್ರಾಮದ ಮುಂದೆಯೇ ಎಲ್‌ಎಲ್‌ಸಿ ಕಾಲುವೆ ಹಾದು ಹೋಗಿದ್ದರೂ, ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆಯಿದೆ. ನೇರವಾಗಿ ಕಾಲುವೆಯಿಂದ ಪೈಪ್‌ಲೈನ್ ಹಾಕಿ ನೀರಿನ ಸಮಸ್ಯೆ ನೀಗಿಸಿಕೊಡಬೇಕು ಎಂದು ಗ್ರಾಮಸ್ಥರು ತಹಶೀಲ್ದಾರ್ ರೆಹಾನ್ ಪಾಷಾ ಅವರಲ್ಲಿ ಮನವಿ ಮಾಡಿದರು.
ಈ ಕುರಿತು ನೀರಾವರಿ ಇಲಾಖೆ ಅ ಧಿಕಾರಿಗಳ ಜತೆ ಚರ್ಚಿಸಿ ಆದಷ್ಟು ಬೇಗ ಈ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು
ತಹಶೀಲ್ದಾರ್ ಭರವಸೆ ನೀಡಿದರು. ಮೋಕಾ ಠಾಣೆ ಪಿಎಸ್‌ಐ ಎನ್.ರಘು, ಬಿಇಒ ಸಿದ್ಧಲಿಂಗಮೂರ್ತಿ, ಆಹಾರ ಪೂರೈಕೆ ಇಲಾಖೆಯ ಅ ಧಿಕಾರಿ
ಶರಣಯ್ಯಸ್ವಾಮಿ, ಕೃಷಿ ಇಲಾಖೆ ಅ ಧಿಕಾರಿ ಪಾಲಾಕ್ಷಗೌಡ ಸೇರಿದಂತೆ ಬಿಸಿಎಂ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜೆಸ್ಕಾಂ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಓದಿ : ಪರಿಶೀಲಿಸ್ತಿರೋ; ಚಹಾ ಕುಡಿದು ಹೋಗ್ತಿರೋ! : ಅಂಗನವಾಡಿ ಸೂಪರ್‌ವೈಜರ್‌ಗೆ ತರಾಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.