ಜನರ ಸಮಸ್ಯೆಗೆ ಎಲ್ಲಾ ಇಲಾಖೆಗಳು ಸ್ಪಂದಿಸಲಿ: ಡಿಸಿ
|ಉಡುಗಣಿ ಹೋಬಳಿಯ ತಡಸನಳ್ಳಿ ಗ್ರಾಮದಲ್ಲಿ ಡಿಸಿ ಗ್ರಾಮ ವಾಸ್ತವ್ಯ
Team Udayavani, Feb 21, 2021, 5:16 PM IST
ಶಿವಮೊಗ್ಗ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿಯಲು ಮತ್ತು ಬಗೆಹರಿಸಲು “ಜಿಲ್ಲಾ ಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಉತ್ತಮ ಅವಕಾಶವಾಗಿದ್ದು, ಎಲ್ಲಾ ಇಲಾಖೆಗಳು ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.
ಶನಿವಾರ ಶಿಕಾರಿಪುರ ತಾಲೂಕಿನ ಉಡುಗಣಿ ಹೋಬಳಿಯ ತಡಸನಳ್ಳಿ ಗ್ರಾಮದಲ್ಲಿ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರಿಗೂ ಸಾಮಾಜಿಕ ಭದ್ರತೆ ಒದಗಿಸುವುದು ಕಂದಾಯ ಇಲಾಖೆಯ ಮುಖ್ಯ ಜವಾಬ್ದಾರಿಯಾಗಿದೆ.
ಇದರೊಂದಿಗೆ ಪಂಚಾಯತ್ರಾಜ್ ಇಲಾಖೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಮನ್ವಯ ಮಾಡಿಕೊಂಡು ಗ್ರಾಮೀಣ ಭಾಗದ ಜನಜೀವನವನ್ನು ಉತ್ತಮಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪ್ರತಿ ಹೋಬಳಿಯಲ್ಲಿರುವ ಗ್ರಾಮಗಳ ಸಮಸ್ಯೆಗಳು ಬಹುತೇಕ ಒಂದೇ ರೀತಿಯಾಗಿರುತ್ತವೆ. ಒಂದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದರೂ, ಆಯಾ ಹೋಬಳಿಯ ಸಮಸ್ಯೆಗಳನ್ನು ಅರಿಯಲು ಇದರಿಂದ ಸಾಧ್ಯವಾಗುತ್ತದೆ.
ಹೋಬಳಿ ಮಟ್ಟದ ಅ ಧಿಕಾರಿಗಳು ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಹಾಜರಿರುವುದರಿಂದ ಸಂಬಂ ಧಿಸಿದ ಎಲ್ಲಾ ಗ್ರಾಮಗಳ ಸಮಸ್ಯೆಗಳ ಪರಿಹಾರ ಸಾಧ್ಯವಾಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು. ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಶಿಕಾರಿಪುರ ತಾಲೂಕಿನ ಎಲ್ಲಾ ಶಾಲೆಗಳಿಗೆ ಅತ್ಯುತ್ತಮ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಶಿಕ್ಷಕರು ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಲು, ಆ ಮೂಲಕ ಎಸ್ ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಫಲಿತಾಂಶ ತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅರ್ಜಿಗಳನ್ನು ಪ್ರತಿಯೊಬ್ಬರೂ ಸಕಾಲದಲ್ಲಿ ತಮ್ಮ ಹಂತದಲ್ಲಿಯೇ ವಿಲೇವಾರಿ ಮಾಡಿದರೆ ಜಿಲ್ಲಾ ಧಿಕಾರಿಗಳು ಗ್ರಾಮ ಮಟ್ಟಕ್ಕೆ ಬಂದು ಅರ್ಜಿಗಳನ್ನು ಸ್ವೀಕರಿಸುವ ಪ್ರಶ್ನೆಯೇ ಬರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
B. S. Yediyurappa: ವಿಜಯೇಂದ್ರ ಬೆಳವಣಿಗೆ ಕೆಲವರಿಗೆ ಸಹಿಸಲು ಆಗುತ್ತಿಲ್ಲ
BJP: ನನ್ನ ಹೊಣೆ ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.