ಕುಂಚೆಬೈಲು ಸರ್ಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ
ಕುಂಚೆಬೈಲಿನಲ್ಲಿ ಹೇರೂರು ಗಾಮದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ತಹಶೀಲ್ದಾರ್ ಅಂಬುಜಾ ಉದ್ಘಾಟಿಸಿದರು.
Team Udayavani, Feb 21, 2021, 5:40 PM IST
ಶೃಂಗೇರಿ: ಸರ್ಕಾರದ ನಿರ್ದೇಶನದಂತೆ ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮ ವಾಸ್ತವ್ಯದ ಮೂಲಕ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಲಾಗುತ್ತದೆ ಎಂದು ತಹಶೀಲ್ದಾರ್ ಅಂಬುಜಾ ಹೇಳಿದರು.
ಮೆಣಸೆ ಗ್ರಾಪಂನ ಕುಂಚೆಬೈಲು ಸರ್ಕಾರಿ ಶಾಲೆಯಲ್ಲಿ ಶನಿವಾರ ಹೇರೂರು ಗ್ರಾಮ ವಾಸ್ತವ್ಯ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಸಮಸ್ಯೆಯನ್ನು ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸಿ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದರು.
ಜಿಪಂ ಸದಸ್ಯೆ ಶಿಲ್ಪಾ ರವಿ ಮಾತನಾಡಿ, ಸರ್ಕಾರ ಉತ್ತಮ ಉದ್ದೇಶದಿಂದ ರೂಪಿಸಿರುವ ಗ್ರಾಮ ವಾಸ್ತವ್ಯದ ಮೊದಲ ಸಭೆಗೆ ಮಾಹಿತಿ ಕೊರತೆಯಿಂದ ಪೂರ್ಣ ಪ್ರಮಾಣದ ಯಶಸ್ಸು ದೊರಕಿಲ್ಲ. ಜನಪ್ರತಿನಿಧಿ ಗಳಿಗೂ ಸಮರ್ಪಕ ಮಾಹಿತಿ ನೀಡದೆ ಗ್ರಾಮಸ್ಥರಿಗೆ ಸೂಕ್ತ ಮಾಹಿತಿ
ನೀಡಿಲ್ಲ. ಮುಂದಿನ ಸಭೆಗೆ ಮುನ್ನ ಕನಿಷ್ಠ ಎರಡು ಗ್ರಾಮಗಳಲ್ಲಿ ಸಭೆ ನಡೆಸಿ, ಮುಂಚಿತವಾಗಿ ಪ್ರಕಟಣೆ ನೀಡಬೇಕು. ಸರ್ಕಾರ ಕೈಗೊಂಡಿರುವ ಯೋಜನೆ ಯಶಸ್ವಿಯಾಗಬೇಕು ಎಂದರು.
ತಾಪಂ ಕಾರ್ಯ ನಿರ್ವಹಣಾಧಿಕಾರಿ ಜಂಯರಾಂ, ತಾಪಂ ಅಧ್ಯಕ್ಷೆ ಜಯಶೀಲ, ಸದಸ್ಯ ಕೆ.ಎಸ್. ರಮೇಶ್, ಮೆಣಸೆ ಗ್ರಾಪಂ ಅಧ್ಯಕ್ಷ ನವೀನ್, ಉಪಾಧ್ಯಕ್ಷೆ ಜಯಲಕ್ಷ್ಮೀ ಮತ್ತಿತರರು ಇದ್ದರು.
ಓದಿ : ಕೃಷಿ ಪದವಿ ಕೋರ್ಸುಗಳ ಪ್ರವೇಶಾತಿಯಲ್ಲಿ ರೈತರ ಮಕ್ಕಳ ಮೀಸಲಾತಿ ಹೆಚ್ಚಳ: ಸಚಿವ ಬಿ.ಸಿ.ಪಾಟೀಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.