ಮಧ್ಯ ಪ್ರದೇಶದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ : ಆರೋಪಿಗಳಲ್ಲೊಬ್ಬ ಬಿಜೆಪಿ ಮುಖಂಡ..!
ಬಿಜೆಪಿ ಮುಖಂಡ ವಿಜಯ್ ತ್ರಿಪಾಠಿ ಸೇರಿ ನಾಲ್ವರು ಆರೋಪಿಗಳ ಶೋಧ ಕಾರ್ಯದಲ್ಲಿ ಪೊಲೀಸರು
Team Udayavani, Feb 22, 2021, 12:41 PM IST
ಭೋಪಾಲ್ : ಮಧ್ಯಪ್ರದೇಶದ ಶಾಧೋಲ್ ಎಂಬಲ್ಲಿ 19 ವರ್ಷದ ಯುವತೊಯೋರ್ವಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳ ಪೈಕಿಯಲ್ಲಿ ಒಬ್ಬ ಶಾಲಾ ಶಿಕ್ಷಕ ಹಾಗೂ ಸ್ಥಳೀಯ ಬಿಜೆಪಿ ನಾಯಕ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆಯನ್ನು ಫಾರ್ಮ್ ಹೌಸ್ ವೊಂದರಲ್ಲಿ ಬಲವಂತವಾಗಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಆರೋಪಿಗಳಾದ ಜೈತಪುರ ಮಂಡಲ ಪಂಚಾಯತ್ ಅಧ್ಯಕ್ಷ, ಬಿಜೆಪಿ ಮುಖಂಡ ವಿಜಯ್ ತ್ರಿಪಾಠಿ ಹಾಗೂ ಅವನ ಸಹಚರರಾದ ರಾಜೇಶ್ ಶುಕ್ಲಾ, ಮುನ್ನಾ ಸಿಂಗ್, ಮೋನು ಮಹಾರಾಜ್ ಶನಿವಾರ ಅಪರಾತ್ರಿ ಹೊತ್ತಿಗೆ ಆಕೆಯ ಮನೆಯ ಬಳಿ ಆಕೆಯನ್ನು ಎಸೆದು ಹೋಗಿದ್ದಾರೆ ಎಂದು ಶಾಧೋಲ್ ನ ಎಸ್ ಪಿ ಅವಧೇಶ್ ಗೋಸ್ವಾಮಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಓದಿ: ತೆಂಕಣದ ಗಾಳಿ ಬೀಸಿದ ಸಾಹಿತ್ಯ ಶ್ರೇಷ್ಠ ಪಂಜೆ ಮಂಗೇಶರಾಯ…!
ಸದ್ಯ, ಪೊಲೀಸರು ಆರೋಪಿಗಳಿಗಾಗಿ ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ನಾಲ್ವರು ಆರೋಪಿಗಳ ವಿರುದ್ಧ ಸದ್ಯ ಪೊಲೀಸರು ಐಪಿಸಿ ಸೆಕ್ಶನ್ 363 (ಅಪಹರಣ) ಅಡಿಯಲ್ಲಿ, 376(ಡಿ) (ಸಾಮೂಹಿಕ ಅತ್ಯಾಚಾರ) ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಸಂತ್ರಸ್ತೆಯನ್ನು ಜೈತಪುರದಲ್ಲಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಯಿತು ಎಂದು ವರದಿಯಾಗಿದೆ. ಸಂತ್ರಸ್ತೆ ಪ್ರಜ್ಞೆ ಪಡೆದ ಮೇಲೆ, ಘಟನೆಯನ್ನು ಆಸ್ಪತ್ರೆಯಲ್ಲಿರುವಾಗಲೇ ಪೊಲೀಸರಿಗೆ ವಿವರಿಸಿದ್ದಾಳೆ.
“ರಾಜೇಶ್ ಶುಕ್ಲಾ ನನ್ನನ್ನು ಅಪಹರಿಸಿದ್ದು, ಆತನ ಫಾರ್ಮ್ ಹೌಸ್ ವೊಂದಕ್ಕೆ ಕರೆದುಕೊಂಡು ಹೋಗಿ ಬಲವಂತವಾಗಿ ಮದ್ಯವನ್ನು ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ” ಎಂದು ಸಂತ್ರಸ್ತೆ ಪೊಲೀಸರಲ್ಲಿ ಘಟನೆಯ ಬಗ್ಗೆ ಆರೋಪಿಸಿದ್ದಾಳೆ” ಎಂದು ವರದಿಯಾಗಿದೆ.
ಸದ್ಯ, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.