ಯುವ ಜನಾಂಗದಲ್ಲಿ ಕುಸಿಯುತ್ತಿದೆ ಧಾರ್ಮಿಕ ಮೌಲ್ಯ: ರಂಭಾಪುರಿ ಶ್ರೀ
ಅಣದೂರಿನ ಶಿವಯೋಗಿ ಶಿವಾಚಾರ್ಯರು ಪಾಲ್ಗೊಂಡು ನೂತನ ಶ್ರೀಗಳಿಗೆ ಶುಭ ಹಾರೈಸಿದರು.
Team Udayavani, Feb 22, 2021, 3:33 PM IST
ಕಲಬುರಗಿ: ಆಧುನಿಕ ಯುಗದಲ್ಲಿ ಬೆಳೆಯುತ್ತಿರುವ ಯುವ ಜನಾಂಗದಲ್ಲಿ ಧಾರ್ಮಿಕ ಮೌಲ್ಯಗಳು ಕುಸಿಯುತ್ತಿವೆ ಎಂದು ಬಾಳೆಹೊನ್ನೂರು ರಂಭಾಪುರಿ
ಶ್ರೀ ಡಾ| ವೀರಸೋಮೇಶ್ವರ ಜಗದ್ಗುರು ಕಳವಳ ವ್ಯಕ್ತಪಡಿಸಿದರು. ತಾಲೂಕಿನ ಬಬಲಾದ (ಎಸ್) ಗ್ರಾಮದ ಶ್ರೀಮದ್ ರಂಭಾಪುರಿ ಖಾಸಾ ಶಾಖಾ ಬೃಹನ್ಮಠದ ಅ ಧಿಕಾರ ಹಸ್ತಾಂತರ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಧರ್ಮ ಸಂಸ್ಕೃತಿ ಮತ್ತು ಪರಂಪರೆ ಮೌಲ್ಯಗಳ ಬಗ್ಗೆ ನಿರ್ಲಕ್ಷé ಮನೋಭಾವ ಬೆಳೆಯುತ್ತಿರುವ ದಿನಗಳಲ್ಲಿ ಧರ್ಮ ಸಂರಕ್ಷಣೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಪುನರುತ್ಥಾನಗೊಳಿಸುವ ಜವಾಬ್ದಾರಿ ಮಠಗಳ ಮೇಲಿದೆ ಎಂದು ಹೇಳಿದರು.
ದೇಶಕ್ಕೊಂದು ಸಂವಿಧಾನ ಇರುವಂತೆ ಧರ್ಮಕ್ಕೊಂದು ಧರ್ಮ ಸಂವಿಧಾನವಿದೆ. ವೀರಶೈವ ಧರ್ಮದಲ್ಲಿ ಅಷ್ಟಾವರಣ, ಪಂಚಾಚಾರ ಮತ್ತು ಷಟ್ಸಸ್ಥಲಗಳು ಮೂಲವಾಗಿವೆ. ಇವುಗಳ ಅರಿವು ಮತ್ತು ಆಚರಣೆ ಬಹಳ ಮುಖ್ಯ. ತತ್ವಕ್ಕಿಂತ ಆಚರಣೆ, ಮಾತಿಗಿಂತ ಕೃತಿ, ಬೋಧನೆಗಿಂತ ಸಾಧನೆ, ದಾನಕ್ಕಿಂತ ದಾಸೋಹ, ಚರಿತ್ರೆಗಿಂತ ಚಾರಿತ್ರ್ಯ ಮುಖ್ಯವೆಂದು ವೀರಶೈವ ಧರ್ಮ ಸಾರಿದೆ ಎಂದು ನುಡಿದರು.
ಹಿಂದಿನ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿಯಿಂದ ತೆರವಾದ ಪೀಠಾಧಿಪತಿ ಸ್ಥಾನಕ್ಕೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯನ್ನು ನಿಯುಕ್ತಿಗೊಳಿಸಿ ಅಧಿಕಾರ ಹಸ್ತಾಂತರ ಸಮಾರಂಭ ಹಮ್ಮಿಕೊಳ್ಳಲಾಗಿದೆ. ನೂತನ ಶ್ರೀಗಳು ಧಾರ್ಮಿಕ ಜಾಗೃತಿ ಜೊತೆಗೆ ಸಾಮಾಜಿಕ ಚಿಂತನೆ ಹೊಂದಿ, ಮಠದ ಅಭಿವೃದ್ಧಿಗೊಳಿಸುವರೆಂಬ ವಿಶ್ವಾಸ ತಮಗಿದೆ ಎಂದು ರೇಶ್ಮೆ ಮಡಿ, ಸ್ಮರಣಿಕೆ ನೀಡಿ ಶುಭ ಹಾರೈಸಿ, ದಂಡ- ಕಮಂಡಲ, ಪಂಚಮುದ್ರಾ ನೀಡಿ ಆಶೀರ್ವದಿಸಿದರು. ನೂತನ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗೆ ಹಿಂದಿನ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಮಠದ ದಾಖಲೆ ಪತ್ರ ಹಸ್ತಾಂತರಿಸಿದರು.
ಚಿನ್ಮಯಗಿರಿ ಮಹಾಂತೇಶ್ವರ ಮಠದ ಸಿದ್ಧರಾಮ ಶಿವಾಚಾರ್ಯರು, ಹೊನ್ನಕಿರಣಗಿ ಚಂದ್ರಗುಂಡ ಶಿವಾಚಾರ್ಯರು, ಪಡಸಾವಳಿ ಡಾ| ಶಂಭುಲಿಂಗ
ಶಿವಾಚಾರ್ಯರು, ಶ್ರೀನಿವಾಸ ಸರಡಗಿ ಡಾ| ರೇವಣಸಿದ್ಧ ಶಿವಾಚಾರ್ಯರು, ರಾಜೇಶ್ವರ ಘನಲಿಂಗ ರುದ್ರಮುನಿ ಶಿವಾಚಾರ್ಯರು, ದೋರನಹಳ್ಳಿ ಶಿವಲಿಂಗ ರಾಜೇಂದ್ರ ಶಿವಾಚಾರ್ಯರು, ತೊನಸನಹಳ್ಳಿ ರೇವಣಸಿದ್ಧ ಶಿವಾಚಾರ್ಯರು, ದಂಡಗುಂಡ ಸಂಗನಬಸವ ಶಿವಾಚಾರ್ಯರು, ನವಲಕಲ್ಲ ಸೋಮನಾಥ ಶಿವಾಚಾರ್ಯರು, ಮಹಾರಾಷ್ಟ್ರದ ಜವಳಿ ವಿರಕ್ತಮಠದ ಗಂಗಾಧರ ಶ್ರೀ, ಅಣದೂರಿನ ಶಿವಯೋಗಿ ಶಿವಾಚಾರ್ಯರು ಪಾಲ್ಗೊಂಡು ನೂತನ ಶ್ರೀಗಳಿಗೆ ಶುಭ ಹಾರೈಸಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ಶಾಸಕ ರಾಜುಗೌಡ (ನರಸಿಂಹ ನಾಯಕ), ಯಾದಗಿರಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ, ಕಲಬುರಗಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ| ಸುರೇಶ ಸಜ್ಜನ, ಬೆಂಗಳೂರಿನ ಡಾ| ದಯಾನಂದ ಎಸ್. ಪಟ್ಟಣಶೆಟ್ಟಿ, ಉದ್ಯಮಿ ಸತೀಶ ವ್ಹಿ. ಗುತ್ತೇದಾರ, ಕೃಷ್ಣಾಜೀ ಕುಲಕರ್ಣಿ, ಕರಿಸಿದ್ಧಪ್ಪ ಪಾಟೀಲ ಹರಸೂರ, ಶಿವಶರಣಪ್ಪ ಸಾಹು ಸೀರಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.