Karnataka By Poll 2024: ಟಿಕೆಟ್‌ ಘೋಷಣೆ ಮೊದಲೇ ರಂಗೇರಿದ ಶಿಗ್ಗಾವಿ ಕಣ

ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕಾಂಗ್ರೆಸ್‌ ತಂತ್ರಕ್ಕೆ ಪ್ರತಿತಂತ್ರ ಹೂಡಲು ಮುಂದಾಗಿದೆ.

Team Udayavani, Oct 19, 2024, 5:06 PM IST

Karnataka By Poll 2024: ಟಿಕೆಟ್‌ ಘೋಷಣೆ ಮೊದಲೇ ರಂಗೇರಿದ ಶಿಗ್ಗಾವಿ ಕಣ

ಉದಯವಾಣಿ ಸಮಾಚಾರ
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಪ್ರತಿಷ್ಠೆಯಾಗಿದ್ದು, ಕ್ಷೇತ್ರದಲ್ಲಿ ಎರಡು ಪಕ್ಷಗಳ ತಂತ್ರ, ಪ್ರತಿತಂತ್ರಗಳ ಸದ್ದು ಜೋರಾಗಿದೆ. ಕ್ಷೇತ್ರದಲ್ಲಿ ಚುನಾವಣಾ ಕಣ ಟಿಕೆಟ್‌ ಘೋಷಣೆಗೂ ಮೊದಲೇ ರಂಗೇರುತ್ತಿದೆ.

ಶಿಗ್ಗಾವಿ ಕ್ಷೇತ್ರ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಕ್ಷೇತ್ರದಲ್ಲಿ ಗೆಲುವು ಸಾಧಿ ಸುವ ಮೂಲಕ ಕ್ಷೇತ್ರದಲ್ಲಿ ತಮ್ಮ ಪಕ್ಷದ ಬಲಾಬಲ ಸಾಬೀತುಪಡಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಎರಡು ಪಕ್ಷಗಳ ಹೈಕಮಾಂಡ್‌ ಅಭ್ಯರ್ಥಿ ಆಯ್ಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅಳೆದು ತೂಗಿ ಅಭ್ಯರ್ಥಿ ಘೋಷಣೆಗೆ ಮುಂದಾಗಿದ್ದು ಕುತೂಹಲ ಮೂಡಿಸಿದೆ.

ಕ್ಷೇತ್ರದಲ್ಲಿ ಉಪಚುನಾವಣೆ ಘೋಷಣೆಯಾಗು ತ್ತಿದ್ದಂತೆ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಬಿಜೆಪಿ ಭದ್ರಕೋಟೆಯಾಗಿರುವ ಕ್ಷೇತ್ರವನ್ನು ಈ ಬಾರಿ ಶತಾಯಗತಾಯ ಕೈ ವಶಪಡಿಸಿಕೊಳ್ಳಲು ಕಾಂಗ್ರೆಸ್‌ ರಣತ್ರಂತ ಹೆಣೆಯುತ್ತಿದ್ದರೆ, ಮೊತ್ತೊಂದೆಡೆ ಬಿಜೆಪಿಗೆ ಕ್ಷೇತ್ರವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯ ಎದುರಾಗಿದೆ. ಹೀಗಾಗಿ ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕಾಂಗ್ರೆಸ್‌ ತಂತ್ರಕ್ಕೆ ಪ್ರತಿತಂತ್ರ ಹೂಡಲು ಮುಂದಾಗಿದೆ.

ಎರಡು ಪಕ್ಷಗಳಲ್ಲಿ ಟಿಕೆಟ್‌ ಘೋಷಣೆಯ ಆರಂಭದಲ್ಲಿಯೇ ಲೆಕ್ಕಾಚಾರ ಜೋರಾಗಿದ್ದು, ಮೊದಲು ಬಿಜೆಪಿ ಟಿಕೆಟ್‌ ಘೋಷಣೆ ಮಾಡುತ್ತೋ ಅಥವಾ ಕಾಂಗ್ರೆಸ್‌ ಘೋಷಣೆ ಮಾಡುತ್ತೋ ಎಂಬುದು ಸಾಕಷ್ಟು ಕುತೂಹಲ ಮೂಡಿಸಿದೆ. ಬಿಜೆಪಿ ಯಾರಿಗೆ ಟಿಕೆಟ್‌ ಘೋಷಣೆ ಮಾಡುತ್ತೆ ಎಂಬುದನ್ನು ನೋಡಿಕೊಂಡು ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡುವ ಚಿಂತನೆ ನಡೆಸಿದೆ.

ಮತ್ತೊಂದೆಡೆ ಕಾಂಗ್ರೆಸ್‌ ಯಾರಿಗೆ ಟಿಕೆಟ್‌ ನೀಡುತ್ತೋ ಅದನ್ನು ಅವಲೋಕಿಸಿ ಬಿಜೆಪಿ ಟಿಕೆಟ್‌ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಮೊದಲು ಯಾರು ಟಿಕೆಟ್‌ ಘೋಷಣೆ ಮಾಡ್ತಾರೆ ಎಂಬುದೂ ಕುತೂಹಲಕಾರಿಯಾಗಿದೆ.

ಕಗ್ಗಂಟಾದ ಟಿಕೆಟ್‌ ಹಂಚಿಕೆ: ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ಮುಹೂರ್ತ ನಿಗದಿಯಾಗಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದರೂ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳಿಗೆ ಟಿಕೆಟ್‌ ಹಂಚಿಕೆ ಕಗ್ಗಂಟಾಗಿದೆ. ಬಿಜೆಪಿ ಟಿಕೆಟ್‌ ಹಂಚಿಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ
ಬೆಂಗಳೂರಿನಲ್ಲಿ ರಹಸ್ಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ತೆಕ್ಕೆಯಲ್ಲಿರುವ ಶಿಗ್ಗಾವಿ ಕ್ಷೇತ್ರವನ್ನು ಗೆಲ್ಲುವ ಕುರಿತು ಹೆಚ್ಚು ಚರ್ಚೆ ನಡೆದಿದೆ.

ಈ ವೇಳೆ ಭರತ್‌ ಬೊಮ್ಮಾಯಿಗೆ ಟಿಕೆಟ್‌ ನೀಡುವ ಕುರಿತು ಮಾತುಕತೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದು ವೇಳೆ ಭರತ್‌ ಬೊಮ್ಮಾಯಿಗೆ ಟಿಕೆಟ್‌ ನೀಡಲು ಹೈಕಮಾಂಡ್‌ ಒಪ್ಪದಿದ್ದರೆ ಬಸವರಾಜ ಬೊಮ್ಮಾಯಿ ಅವರ ಆಪ್ತ ಚೆನ್ನು ಪಾಟೀಲರಿಗೆ ಟಿಕೆಟ್‌ ಕೊಡಿಸುವ ಬಗ್ಗೆಯೂ ಗಂಭೀರ ಚಿಂತನೆ ನಡೆದಿದೆ ಎನ್ನಲಾಗಿದ್ದು, ಇನ್ನುಳಿದಂತೆ ಸ್ಥಳೀಯ ಬಿಜೆಪಿ ಮುಖಂಡರಾದ ಶ್ರೀಕಾಂತ ದುಂಡಿಗೌಡ್ರ, ಶೋಭಾ ನಿಸ್ಸಿಮಗೌಡ್ರ, ಶಿವಾನಂದ ಮ್ಯಾಗೇರಿ, ಡಿ.ಎಸ್‌. ಮಾಳಗಿ ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಲಾಬಿ ಜೋರು:
ಕಾಂಗ್ರೆಸ್‌ನಲ್ಲಿ ಸಹ ಟಿಕೆಟ್‌ಗಾಗಿ ಆಕಾಂಕ್ಷಿಗಳ ಲಾಬಿ ಜೋರಾಗಿದ್ದು, ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ಜಿಲ್ಲೆಯ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಟಿಕೆಟ್‌ ಆಕಾಂಕ್ಷಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿ
ಹೈಕಮಾಂಡ್‌ಗೆ ರವಾನಿಸಲಾಗಿದೆ. ಅ. 23ಕ್ಕೆ ಟಿಕೆಟ್‌ ಅಂತಿಮಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದ್ದು, ಕೈ ಟಿಕೆಟ್‌ಗಾಗಿ ಮಾಜಿ
ಶಾಸಕ ಅಜ್ಜಂಫೀರ್‌ ಖಾದ್ರಿ, ಯಾಸೀರ್‌ ಖಾನ್‌ ಪಠಾಣ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಕಾಡಾ ಅಧ್ಯಕ್ಷ ಸೋಮಣ್ಣ ಬೇವಿನಮರದ, ಮಾಜಿ ಸಚಿವ ಆರ್‌.ಶಂಕರ್‌ ಪ್ರಯತ್ನ ನಡೆಸಿದ್ದಾರೆ.

■ ವೀರೇಶ ಮಡ್ಲೂರ

ಟಾಪ್ ನ್ಯೂಸ್

1-a-raut

Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ

Channapatna By Poll; Nikhil Kumaraswamy again gave a taunt to the BJP leaders

Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟ ನಿಖಿಲ್ ಕುಮಾರಸ್ವಾಮಿ

isrel netanyahu

Drone target; ಉಗ್ರರಿಂದ ಇಸ್ರೇಲ್ ಪ್ರಧಾನಿ ನೆತನ್ಯಾಹು ಟಾರ್ಗೆಟ್: ನಿವಾಸದ ಬಳಿ ಸ್ಫೋ*ಟ

1-omar-nn

Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Explainer: ರಾಜ್ಯದ ಜಾತಿ ಜನ ಗಣತಿಗೆ ಯಾಕೆ ಇಷ್ಟೊಂದು ಚರ್ಚೆ ?

Explainer: ರಾಜ್ಯದ ಜಾತಿ ಜನ ಗಣತಿ ಕುರಿತು ಯಾಕೆ ಇಷ್ಟೊಂದು ಚರ್ಚೆ ?

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ವನಿತಾ ಟಿ20 ವಿಶ್ವಕಪ್‌: ಮೊದಲ ಪ್ರಶಸ್ತಿಗೆ ಮುತ್ತಿಕ್ಕಲಿ ಭಾರತ

ವನಿತಾ ಟಿ20 ವಿಶ್ವಕಪ್‌: ಮೊದಲ ಪ್ರಶಸ್ತಿಗೆ ಮುತ್ತಿಕ್ಕಲಿ ಭಾರತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-raut

Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ

Channapatna By Poll; Nikhil Kumaraswamy again gave a taunt to the BJP leaders

Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟ ನಿಖಿಲ್ ಕುಮಾರಸ್ವಾಮಿ

ಮಂಗಳೂರು: ಮಂದಾರದ ಬದುಕು ಕಸಿದ ಪ್ಲಾಸ್ಟಿಕ್‌ ಪರ್ವತ

Mangaluru:ಮಂದಾರದ ಬದುಕು ಕಸಿದ ಪ್ಲಾಸ್ಟಿಕ್‌ ಪರ್ವತ..ಈ ಸ್ಥಿತಿಗೆ ಪ್ಲಾಸ್ಟಿಕ್‌ ನೇರ ಕಾರಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.