ಭರವಸೆ ಮೂಡಿಸಿದ ಭರ್ಜರಿ ಬಂಡವಾಳ ಹೂಡಿಕೆ

Team Udayavani, Nov 5, 2022, 6:00 AM IST

ಭರವಸೆ ಮೂಡಿಸಿದ ಭರ್ಜರಿ ಬಂಡವಾಳ ಹೂಡಿಕೆ

ಬಹುನಿರೀಕ್ಷಿತ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯ ಸರಕಾರದ ಗುರಿಯ ದುಪ್ಪಟ್ಟು ಸುಮಾರು 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಂದಗಳಾಗಿರುವುದು ಉತ್ತಮ ಬೆಳವಣಿಗೆ.
ರಾಜ್ಯದ ಆರ್ಥಿಕತೆ ಚೇತರಿಕೆ ದೃಷ್ಟಿಯಿಂದ ಹಾಗೂ ಉದ್ಯಮ ಮತ್ತು ಕೈಗಾರಿಕೆ ಬೆಳವಣಿಗೆ ಹಿನ್ನೆಲೆಯಲ್ಲಿ ಕೊರೊನಾ ಅನಂತರ ರಾಜ್ಯ ಸರಕಾರ ಇನ್ವೆಸ್ಟ್‌ ಕರ್ನಾಟಕ ಹೂಡಿಕೆ ಸಮಾವೇಶದ ಮೂಲಕ ಮೊದಲ ಹಂತದ ಯಶಸ್ಸು  ಗಳಿಸಿದೆ. ಹತ್ತು ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಿಂದ 10 ಲಕ್ಷ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇರುವುದು ರಾಜ್ಯದ ಪಾಲಿಕೆ ಭರವಸೆ ಮೂಡಿಸಿದೆ. ಕೊರೊನಾ ಅನಂತರ ವಿಶ್ವದ ಬಹುತೇಕ ದೇಶ ಮತ್ತು ರಾಜ್ಯಗಳ ಆರ್ಥಿಕತೆ ಕುಸಿದು ನಲುಗುತ್ತಿವೆ. ಇಂತಹ ಸಂದರ್ಭದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿದ ಮೊದಲ ರಾಜ್ಯ ಕರ್ನಾಟಕ ಎಂಬುದು ಹೆಮ್ಮೆಯ ವಿಚಾರ.

ಇದೀಗ ರಾಜ್ಯ ಸರಕಾರ ಬಂಡವಾಳ ಹೂಡಿಕೆಗೆ ತಕ್ಕಂತೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಾಗಿದೆ. ಒಪ್ಪಂದದ ಎರಡನೇ ಹಂತದಲ್ಲಿ ಇದು ಅತ್ಯಗತ್ಯ. ಜತೆಗೆ ಒಪ್ಪಂದಗಳ ಪೈಕಿ ಅನುಷ್ಠಾನದ ಪ್ರಮಾಣವೂ ಹೆಚ್ಚಳವಾಗಬೇಕಾಗಿದೆ. ಏಕೆಂದರೆ ಹಿಂದಿನ ನಾಲ್ಕು ಹೂಡಿಕೆದಾರರ ಸಮಾವೇಶದ ಪ್ರತಿಫ‌ಲ ನೋಡಿದಾಗ ಶೇ.15 ರಿಂದ ಶೇ.44 ರಷ್ಟು ಮಾತ್ರ ಅನುಷ್ಠಾನಗೊಂಡಿದೆ.

ಇದಕ್ಕೆ ಸಾಕಷ್ಟು ಕಾರಣಗಳು ಇರಬಹುದು, ಬೇರೆ ಬೇರೆ ಹಂತದಲ್ಲಿ ಅಡ್ಡಿಗಳು ಎದುರಾಗಿರಬಹುದು. ಆದರೆ ಪ್ರಸ್ತುತ ಕೈಗಾರಿಕೆ ಇಲಾಖೆ ಹಿಂದಿನ ನಿಯಮಾವಳಿಗಳಲ್ಲಿ ಸಾಕಷ್ಟು ಸರಳೀಕರಣ ಹಾಗೂ ಕೈಗಾರಿಕಾ ಸ್ನೇಹಿ ಕ್ರಮಗಳನ್ನು ಕೈಗೊಂಡಿದೆ. ಹೀಗಾಗಿ ಈ ಬಾರಿಯ ಒಪ್ಪಂದಗಳಲ್ಲಿ ಹೆಚ್ಚಿನ ಪ್ರಮಾಣದ ಅನುಷ್ಠಾನಕ್ಕೆ ಒತ್ತು ನೀಡಬೇಕಾಗಿದೆ.

ಈವರೆಗಿನ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಗಳು ಬೆಂಗಳೂರು ಕೇಂದ್ರೀಕೃತವಾಗಿದ್ದವು. ಈ ಬಾರಿ ಬಿಯಾಂಡ್‌ ಬೆಂಗ ಳೂರು ಪರಿಕಲ್ಪನೆಯಲ್ಲಿ ಬೆಂಗಳೂರು ಹೊರತುಪಡಿಸಿ 2 ಮತ್ತು 3ನೇ ಹಂತದ ನಗರಗಳತ್ತ ಉದ್ಯಮಿಗಳು ಆಸಕ್ತಿ ತೋರಿರುವುದು ಉತ್ತಮ ಬೆಳ ವಣಿಗೆ. ಉದ್ಯಮಗಳು ರಾಜ್ಯ ಸರಕಾರದ ಮೇಲೆ ಇಟ್ಟಿರುವ ವಿಶ್ವಾಸ ಉಳಿಸಿ ಕೊಳ್ಳಲಾಗುವುದು. ಮೂರು ದಿನಗಳ ಸಮಾವೇಶದಲ್ಲಿನ ಒಪ್ಪಂದ  ಗಳನ್ನು ಮುಂದಿನ ಮೂರು ತಿಂಗಳೊಳಗಾಗಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹಾಗೂ ಕೈಗಾರಿಕೆ ಸಚಿ ವರು ಭರವಸೆ ನೀಡಿರುವುದು ಹೂಡಿಕೆದಾರರಲ್ಲಿÉ ಆಶಾಭಾವನೆ ಮೂಡಿಸಿದೆ. ಮುಂದಿನ ಜಾಗತಿಕ ಹೂಡಿಕೆದಾರರ ಸಮಾವೇಶ 2025ರಲ್ಲಿ ನಡೆಸುವುದಾಗಿ ಘೋಷಣೆ ಸಹ ಮಾಡಿರುವುದರಿಂದ ಅಷ್ಟರಲ್ಲಿ ಈಗಿನ ಸಮಾವೇಶದ ಎಲ್ಲ ಒಪ್ಪಂದ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಬೇಕಾಗಿದೆ.

ಈ ಬಾರಿಯ ಸಮಾವೇಶದಲ್ಲಿ ಇಂಧನ, ಉತ್ಪಾದನೆ, ನವೀಕರಿಸಬಹು ದಾದ ಇಂಧನ, ಮೂಲಸೌಕರ್ಯ ಸಹಿತ ಪ್ರಮುಖ ವಲಯಗಳಲ್ಲಿ ಹೂಡಿಕೆ ಪ್ರಮಾಣ ಹೆಚ್ಚಾಗಿರುವುದು ಗಮನಾರ್ಹ. ಐಟಿ-ಬಿಟಿ ಕೇಂದ್ರ ಆಗಿರುವ ಕರ್ನಾಟಕವನ್ನು ದೇಶದ ಆರ್ಥಿಕತೆಯ ಕೇಂದ್ರವನ್ನಾಗಿ ಸುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿಯವರು ಘೋಷಿಸಿರುವುದು ಮತ್ತು ಹೂಡಿಕೆದಾರರ ಸಮಾವೇಶವು ಕೇವಲ ಹೂಡಿಕೆಗೆ ಸೀಮಿತವಾಗದೆ ಯುವ ಜನರಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡಿದೆ ಎಂದು ಹೇಳಿರುವುದು ಕರ್ನಾಟಕದ ದಿಟ್ಟ ಹೆಜ್ಜೆಗೆ ಸಾಕ್ಷಿ.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada

Canada Temple Attack: ಕೆನಡಾ ದೇಗುಲ ದಾಳಿ: ಜಾಗತಿಕ ವಿರೋಧ ಪ್ರತಿಧ್ವನಿಸಲಿ

Flight

Hoax Call: ಹುಸಿ ಬಾಂಬ್‌ ಬೆದರಿಕೆ ಮರುಕಳಿಸದಿರಲಿ

kannadiga

Editorial: ಕನ್ನಡಿಗರ ನಿಂದನೆಗೆ ಕಠಿನ ಕ್ರಮ: ಸ್ತುತ್ಯರ್ಹ ನಿಲುವು

4-editorial

Editorial: ಸುವರ್ಣ ಕರ್ನಾಟಕ: ವಿಕಾಸಕ್ಕೆ ಕಾರ್ಯಸೂಚಿ ಅಗತ್ಯ

cyber crime

Cyber ​​crime ತಡೆ: ವಿವೇಚನೆಯೇ ಕೀಲಿಕೈ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.