ಅಕ್ಷರ ದಾಸೋಹ ಸಿಬ್ಬಂದಿಯ ನ್ಯಾಯಸಮ್ಮತ ಬೇಡಿಕೆ ಈಡೇರಿಸಲಿ


Team Udayavani, Jul 11, 2023, 6:00 AM IST

ಅಕ್ಷರ ದಾಸೋಹ ಸಿಬ್ಬಂದಿಯ ನ್ಯಾಯಸಮ್ಮತ ಬೇಡಿಕೆ ಈಡೇರಿಸಲಿ

ಕಳೆದ 20 ವರ್ಷಗಳಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಿದ್ಧಪಡಿಸುವ “ಅಕ್ಷರ ದಾಸೋಹ’ ದ ಸಿಬ್ಬಂದಿ ಕನಿಷ್ಠ ವೇತನ ಜಾರಿಯೂ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹತ್ತಾರು ಸಲ ಪ್ರತಿಭಟನೆ-ಧರಣಿ ನಡೆಸಿದರೂ ಸರ್ಕಾರ ಮಾತ್ರ ಇದುವರೆಗೂ ಅವರ ಬೇಡಿಕೆಗಳಿಗೆ ಸ್ಪಂದಿಸಿಲ್ಲ. ಅಕ್ಷರ ದಾಸೋಹ ಸಿಬ್ಬಂದಿಯಲ್ಲಿ ಶೇ.99ರಷ್ಟು ಮಹಿಳೆಯರೇ ಇರುವುದು ವಿಶೇಷ. ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ “ಶಕ್ತಿ’ ಯೋಜನೆ ಹಾಗೂ ಮನೆಯೊಡತಿಗೆ ತಿಂಗಳಿಗೆ 2 ಸಾವಿರ ರೂ. ಪಾವತಿಸುವ “ಗೃಹಲಕ್ಷ್ಮಿ’ ಯೋಜನೆಗೆ ಸಾವಿರಾರು ಕೋಟಿ ರೂ.ಗಳನ್ನು ಬೊಕ್ಕಸದಿಂದ ಖರ್ಚು ಮಾಡುವ ಮೂಲಕ ಸರ್ಕಾರ ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚೆಚ್ಚು ಮಾತನಾಡುತ್ತಿದೆ. ಆದರೆ ಯಾವುದೇ ಸೇವಾಭದ್ರತೆ ಇಲ್ಲದೆ ಬಹುತೇಕ ಇಡೀ ದಿನ ಶಾಲೆಗಳಲ್ಲಿ ದುಡಿಯುವ ಮಹಿಳೆಯರ ಕೈಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಚಿಂತನೆ ನಡೆಸಬೇಕಿದೆ.

ಅಕ್ಷರ ದಾಸೋಹ ಯೋಜನೆಯಡಿ ರಾಜ್ಯದಲ್ಲಿ 1.21 ಲಕ್ಷ ಬಿಸಿಯೂಟ ತಯಾರಕ ಸಿಬ್ಬಂದಿ ಇದ್ದಾರೆ. ಅವರಿಗೆ ಸದ್ಯ ಮಾಸಿಕ 3600 ರೂ. ಮಾತ್ರ ನೀಡಲಾಗುತ್ತಿದೆ. ತಿಂಗಳ ವೇತನ ಲೆಕ್ಕ ಹಾಕಿದರೆ ದಿನಕ್ಕೆ 120 ರೂ. ಮಾತ್ರ ಕೂಲಿ ತಗಲುತ್ತದೆ. ರಾಜ್ಯದಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೀಡಲಾಗುವ ದಿನದ ಕೂಲಿಯನ್ನೇ 316 ರೂ.ಗಳಿಗೆ ನಿಗದಿಪಡಿಸಲಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 25 ಮಕ್ಕಳಿಗೆ ಒಬ್ಬರು ಮುಖ್ಯ ಅಡುಗೆಯವರನ್ನು ನೇಮಿಸಿಕೊಂಡಿದ್ದು ಇವರಿಗೆ ಮಾಸಿಕ 3700 ರೂ. ವೇತನ ನಿಗದಿಯಾಗಿದ್ದರೆ 25 ಕ್ಕಿಂತ ಅಧಿಕ ಮಕ್ಕಳಿರುವ ಶಾಲೆಗಳಲ್ಲಿ ಮಕ್ಕಳ ಪ್ರಮಾಣಕ್ಕೆ ಅನುಗುಣವಾಗಿ ಕೆಲಸ ಮಾಡುವ ಅಡುಗೆ ಸಹಾಯಕರಿಗೆ 3600 ರೂ. ಮಾಸಿಕ ವೇತನವಿದೆ. ರಾಜ್ಯ ಸರ್ಕಾರವೇ ಕನಿಷ್ಠ ವೇತನವನ್ನು 15 ಸಾವಿರ ರೂ.ಗಳಿಗೆ ನಿಗದಿಪಡಿಸಿರುವಾಗ ಯಾವ ಮಾನದಂಡದ ಆಧಾರದ ಮೇಲೆ ಬಿಸಿಯೂಟದ ಸಿಬ್ಬಂದಿಗೆ ತಿಂಗಳಿಗೆ 3600 ರೂ. ನಿಗದಿಪಡಿಸಿದ್ದಾರೆ ಎಂಬುದು ಯಕ್ಷ ಪ್ರಶ್ನೆ. ಇಷ್ಟೊಂದು ಕನಿಷ್ಠ ಪ್ರಮಾಣದ ವೇತನದಲ್ಲಿ ಕುಟುಂಬ ನಿರ್ವಹಣೆ ಸಾಧ್ಯವೇ? ಎಂಬುದು ಸರ್ಕಾರದ ಗಮನಕ್ಕೆ ಬಂದಿಲ್ಲವೇ?

ಸದ್ಯ ನೀಡುತ್ತಿರುವ ಮಾಸಿಕ 3600 ರೂ. ವೇತನವನ್ನು 6 ಸಾವಿರ ರೂ.ಗಳಗೆ ಹೆಚ್ಚಿಸಬೇಕು, 60 ವರ್ಷದಲ್ಲಿ ನಿವೃತ್ತಿ ಹೊಂದುವವರಿಗೆ 1 ಲಕ್ಷ ರೂ. ಪರಿಹಾರ ನೀಡಬೇಕು, ಅಡುಗೆ ಮಾಡುವ ವೇಳೆ ಯಾವುದೇ ರೀತಿಯ ದುರ್ಘ‌ಟನೆ ಸಂಭವಿಸಿದರೆ ಎಫ್ಐಆರ್‌ ಇಲ್ಲದೆ ಅನುದಾನ ಕೊಡಬೇಕು, ಆರೋಗ್ಯ ವಿಮೆ, ಮರಣ ಪರಿಹಾರ, ಗಾಯಗಳಾದರೆ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂಬುದು ಅಕ್ಷರ ದಾಸೋಹ ಸಿಬ್ಬಂದಿಯ ಪ್ರಮುಖ ಬೇಡಿಕೆಗಳಾಗಿವೆ.

ಈ ಮಧ್ಯೆ ವಿಧಾನಸಭಾ ಚುನಾವಣೆಗೂ ಮುನ್ನ ಬೆಳಗಾವಿಯಲ್ಲಿ ಪಕ್ಷದ 6ನೇ ಗ್ಯಾರಂಟಿಯಾಗಿ ಕಾಂಗ್ರೆಸ್‌ ನಾಯಕ ಪ್ರಿಯಾಂಕಾ ವಾದ್ರಾ ಅವರು ಬಿಸಿಯೂಟ ತಯಾರಕರ ವೇತನವನ್ನು 6 ಸಾವಿರ ರೂ.ಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದ್ದರು. ಈ ಭರವಸೆ ಈಡೇರಿಸಿಲ್ಲ ಎಂಬುದು ಬಿಸಿಯೂಟ ತಯಾರಕರ ಒಕ್ಕೂಟದ ರಾಜ್ಯ ಸಮಿತಿಯ ಅಸಮಾಧಾನ. ಶಾಲಾ ಮಕ್ಕಳಿಗೆ ಅನ್ನಬಡಿಸುವ ಕೈಗಳಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಮಾನವೀಯತೆಯಿಂದ ಯೋಚಿಸಿದರೆ ಸರ್ಕಾರಕ್ಕೆ ಇದು ಯಾವುದೇ ರೀತಿಯ ಆರ್ಥಿಕ ಹೊರೆ ಅಲ್ಲ. ಇಡೀ ದಿನ ಶಾಲೆಯಲ್ಲಿ ಕೆಲಸದಲ್ಲೇ ನಿರತರಾಗಿರುವುದರಿಂದ ಬೇರೆ ಕೆಲಸಕ್ಕೂ ಹೋಗಲು ಸಮಯವಿಲ್ಲ. ಹೀಗಾಗಿ ಇದೊಂದು ರೀತಿ ಪೂರ್ಣಾವಧಿ ಕೆಲಸವಾಗಿದೆ. ಬಿಸಿಯೂಟ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಸರ್ಕಾರ ಪರಿಗಣಿಸಿದರೂ ಇತರೆ ನೌಕರರಿಗೆ ಸಿಗುತ್ತಿರುವ ಸೌಲಭ್ಯಗಳು ಸಿಗುತ್ತಿಲ್ಲ. ಹೀಗಾಗಿ ಸರ್ಕಾರದ ಮಟ್ಟದಲ್ಲಿ ಆಗುತ್ತಿರುವ ಅನಗತ್ಯ ಹಾಗೂ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿದರೆ ಈ ಸಿಬ್ಬಂದಿಯ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health-insure

GST Revise: ಆರೋಗ್ಯ ವಿಮೆ ಪ್ರಯೋಜನ ಜನಸಾಮಾನ್ಯರಿಗೂ ಕೈಗೆಟುಕಲಿ

Raichuru-Manvi

Raichuru Accident: ಶಾಲಾ ಬಸ್‌: ಬೇಜವಾಬ್ದಾರಿ ಚಾಲನೆಗೆ ಕಠಿನ ಕ್ರಮ ಅಗತ್ಯ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

CBi

Investigation Agency: ಸಿಬಿಐ ಪ್ರಕರಣಗಳು ತ್ವರಿತ ವಿಲೇವಾರಿಯಾಗಲಿ

Film

South India Film Industry: ಸಿನೆಮಾ ರಂಗ ಕಳಂಕ ಮುಕ್ತವಾಗಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.