ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 


Team Udayavani, May 18, 2024, 12:43 PM IST

2

ಕರ್ನಾಟಕ ಶಾಲೆ ಮತ್ತು ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ 2023-24ನೇ ಸಾಲಿನಲ್ಲಿ ನಡೆಸಿದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ಉತ್ತರಪತ್ರಿಕೆಗಳ ಮೌಲ್ಯಮಾಪನದ ವೇಳೆ ಹೆಚ್ಚುವರಿ ಅಂಕಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸಿತ್ತು. ಈ ಸಂಬಂಧ ಶೈಕ್ಷಣಿಕ ವಲಯ ಮಾತ್ರವಲ್ಲದೆ ಸಾರ್ವಜನಿಕರಿಂದಲೂ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ನೀಡುವ ಪದ್ಧತಿಯನ್ನು ಕೈಬಿಡುವಂತೆ ಮಂಡಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ.

ಕರ್ನಾಟಕ ಶಾಲೆ ಮತ್ತು ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ಈ ಬಾರಿಯಿಂದ  ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಅದರಂತೆ ಈಗಾಗಲೇ ಒಂದು ಪರೀಕ್ಷೆ ನಡೆದು ಫ‌ಲಿತಾಂಶ ಪ್ರಕಟಿಸಲಾಗಿದೆ. ಆದರೆ ಈ ಪರೀಕ್ಷೆಯಲ್ಲಿ ಭಾರೀ ಸಂಖ್ಯೆಯ ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಉತ್ತೀರ್ಣಕ್ಕೆ ಅಗತ್ಯವಿರುವಷ್ಟು ಅಂಕ ಗಳಿಸಲು ವಿಫ‌ಲರಾಗಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಂಡಳಿ, ಬೇರೆ ವಿಷಯಗಳಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಪರಿಗಣಿಸಿ, ಹಿನ್ನಡೆ ಕಂಡಿರುವ ವಿಷಯದಲ್ಲಿ ಹೆಚ್ಚುವರಿ ಅಂಕಗಳನ್ನು ನೀಡಿ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸಿತ್ತು. ಮಂಡಳಿಯ ಈ ನಿರ್ಧಾರದಿಂದಾಗಿ 1.70 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1ರಲ್ಲಿ ತೇರ್ಗಡೆಯಾಗಿ ದ್ದರು. ಇದರ ಹೊರತಾಗಿಯೂ ಒಟ್ಟಾರೆ ಫ‌ಲಿತಾಂಶ ಕಡಿಮೆಯಾಗಿತ್ತು.

ಪರೀಕ್ಷಾ ಮಂಡಳಿ ಮತ್ತು ಶಿಕ್ಷಣ ಇಲಾಖೆಯ ಈ ಕ್ರಮಕ್ಕೆ ರಾಜ್ಯಾದ್ಯಂತ ಸಾರ್ವತ್ರಿಕ ವಿರೋಧ ಕೇಳಿಬಂದಿತ್ತು. ಈ ತೆರನಾಗಿ ಹೆಚ್ಚುವರಿ ಅಂಕಗಳನ್ನು ನೀಡಿ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವುದಾದಲ್ಲಿ ಈ ಪರೀಕ್ಷೆಗಳನ್ನು ನಡೆಸುವುದಾದರೂ ಯಾಕಾಗಿ ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಶಿಕ್ಷಣ ಇಲಾಖೆಯ ಮುಂದಿಟ್ಟಿದ್ದರು. ಇಲಾಖೆಯ ಈ ನಿರ್ಧಾರದಿಂದಾಗಿ ವರ್ಷವಿಡೀ ಶ್ರಮವಹಿಸಿ ಅಧ್ಯಯನ ನಡೆಸಿ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಂಡಳಿ ದ್ರೋಹ ಬಗೆದಿದೆ ಎಂಬ ಆರೋಪ ಕೂಡ ವ್ಯಕ್ತವಾಗಿತ್ತು. ಇದರ ಜತೆಯಲ್ಲಿ ಹೆಚ್ಚುವರಿ ಅಂಕ ನೀಡಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವುದರಿಂದ ಅವರ ಭವಿಷ್ಯದ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಅಲ್ಲದೆ ಮುಂದಿನ ಬಾರಿಯೂ ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್ ನ ನಿರೀಕ್ಷೆಯಲ್ಲಿ ಕಲಿಕೆಯನ್ನು ನಿರ್ಲಕ್ಷಿಸುವ ಸಾಧ್ಯತೆ ಇದೆ ಎಂದು ಶಿಕ್ಷಕರು ಆತಂಕ ವ್ಯಕ್ತಪಡಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶುಕ್ರವಾರ ಶಿಕ್ಷಣ ಇಲಾಖೆ ಮತ್ತು ಮಂಡಳಿಯ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಸಮಾಲೋಚನೆ ನಡೆಸಿದರು. ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡುವ ತೀರ್ಮಾನದ ಬಗೆಗೆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸಿಎಂ ಮತ್ತು ಡಿಸಿಎಂ, ಕಡಿಮೆ ಅಂಕಗಳಿಸಿದ ವಿದ್ಯಾರ್ಥಿಯನ್ನು ನಗಣ್ಯ ಎಂದು ಪರಿಗಣಿಸಲಾಗದು. ಹಾಗೆಂದು ಅನುತ್ತೀರ್ಣರಾದ ವಿದ್ಯಾರ್ಥಿ ಗಳಿಗೆ ಹೆಚ್ಚುವರಿ ಅಂಕ ನೀಡಿ ತೇರ್ಗಡೆಗೊಳಿಸುವ ಅಗತ್ಯವಿಲ್ಲ. ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚುವರಿ ಅಂಕ ನೀಡುವ ಪದ್ಧತಿಯನ್ನು ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದಾರೆ. ಸರಕಾರದ ಈ ನಿರ್ಧಾರದಿಂದ ಪರೀಕ್ಷೆಯ ಉದ್ದೇಶ, ಶಿಕ್ಷಣದ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಹಿತವನ್ನು ಕಾಯ್ದುಕೊಂಡಂತಾಗಿದೆ. ಮಂಡಳಿ ಅಥವಾ ಇಲಾಖೆಯ ಲೋಪದೋಷಗಳನ್ನು ಹೊರತುಪಡಿಸಿದಂತೆ ವಿದ್ಯಾರ್ಥಿಗಳಿಗೆ ಬೇಕಾಬಿಟ್ಟಿಯಾಗಿ ಹೆಚ್ಚುವರಿ ಅಂಕ ನೀಡುವ ಸಂಪ್ರದಾಯಕ್ಕೆ ತಿಲಾಂಜಲಿ ನೀಡಿದಂತಾಗಿದ್ದು, ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಟ್ಟಂತಾಗಿದೆ.

 

 

ಟಾಪ್ ನ್ಯೂಸ್

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

10

Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

10

Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.