ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ

Team Udayavani, Jul 31, 2023, 7:15 AM IST

1-KSV

ವಿವಾದಿತ ಕಸ್ತೂರಿ ರಂಗನ್‌ ವರದಿ ಜಾರಿ ವಿಚಾರದಲ್ಲಿ ಕೇಂದ್ರ ಸರಕಾರ ಮತ್ತು ಆರು ರಾಜ್ಯಗಳ ಜತೆ ಚರ್ಚಿಸಿ ಜಾರಿ ಮಾಡುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಹೇಳಿದ್ದು, ಒಂದಷ್ಟು ವಿವಾದಗಳಿಗೆ ಕಾರಣವಾಗುವ ಎಲ್ಲ ಸಾಧ್ಯತೆಗಳಿವೆ. ರಾಜ್ಯವು ಹಿಂದಿನಿಂದಲೂ ಪಶ್ಚಿಮ ಘಟ್ಟಗಳ ಕುರಿತಾದ ಕಸ್ತೂರಿ ರಂಗನ್‌ ವರದಿಯನ್ನು ತಿರಸ್ಕಾರ ಮಾಡುತ್ತಲೇ ಬಂದಿದೆ. 

ಪರಿಸರ ಸಂರಕ್ಷಣೆ ವಿಚಾರದಲ್ಲಿ ಹೇಳುವುದಾದರೆ ಕಸ್ತೂರಿ ರಂಗನ್‌ ವರದಿ ಜಾರಿ ಉತ್ತಮವಾದ ಕ್ರಮವೇ ಆಗಿದೆ. ಆದರೆ ಕಾಡಂಚಿನಲ್ಲಿ ವಾಸಿಸುತ್ತಿರುವ ಜನರ ಹಿತದೃಷ್ಟಿಯಿಂದ ಹೇಳುವುದಾದರೆ ಅದು ಅತ್ಯಂತ ಮಾರಕವಾಗಿದೆ. ಹೀಗಾಗಿ ಇಲ್ಲಿ ರಾಜಕೀಯಕ್ಕಿಂತ ಪರಿಸರ ಮತ್ತು ಜನರ ಬದುಕಿನ ನಡುವೆ ಸಮತೋಲನವಾಗಿ ಒಂದು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ.

ಅಂದ ಹಾಗೆ, ಕಸ್ತೂರಿ ರಂಗನ್‌ ವರದಿಯನ್ನು ಈಗ ನೀಡಿದ್ದಲ್ಲ. 2011ರ ಆ. 31ರಂದು ಕೇಂದ್ರ ಸರಕಾರಕ್ಕೆ ಕಸ್ತೂರಿ ರಂಗನ್‌ ಅವರ ನೇತೃ ತ್ವದ ಸಮಿತಿ ವರದಿ ನೀಡಿತ್ತು. ಈ ವರದಿಯನ್ನು ಕೇಂದ್ರ ಸರಕಾರ 2013 ರಲ್ಲಿ ಒಪ್ಪಿಕೊಂಡಿತ್ತು. ಆದರೆ ಅಂದಿನಿಂದ ಇಂದಿನವರೆಗೂ ಪಶ್ಚಿಮ ಘಟ್ಟಗಳು ಹಾದು ಹೋಗಿರುವ ರಾಜ್ಯಗಳಲ್ಲಿ ಈ ವರದಿ ಬಗ್ಗೆ ಅಪಸ್ವರಗಳಿವೆ.

ಅಂದರೆ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಗೋವಾ ಮತ್ತು ಗುಜರಾತ್‌ ರಾಜ್ಯಗಳಲ್ಲಿ ಪಶ್ಚಿಮ ಘಟ್ಟ ಹಾದುಹೋಗಿದೆ. ಕರ್ನಾಟಕದಲ್ಲಿ ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪಶ್ಚಿಮ ಘಟ್ಟಗಳ ಸಾಲು ಇದೆ. ರಾಜ್ಯದಲ್ಲಿಯೇ 1,553ಕ್ಕೂ ಹೆಚ್ಚು ಹಳ್ಳಿಗಳಿವೆ. ವರದಿ ಜಾರಿಯಾದ ಮೇಲೆ ಕ್ವಾರಿ, ಮರಳು ಗಣಿಗಾರಿಕೆ, ಕೈಗಾರಿಕೆಗಳು, ಜಲವಿದ್ಯುತ್‌ ಯೋಜನೆಗಳು, ಪವನ ವಿದ್ಯುತ್‌ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳುವಂತಿಲ್ಲ. ಅಷ್ಟೇ ಅಲ್ಲ ಸೀಮೆಂಟ್‌, ಕಲ್ಲು, ರಾಸಾಯನಿಕ ಬಳಕೆ, ಜನವಸತಿ ನಿರ್ಮಾಣಕ್ಕೂ ನಿಷೇಧ ವಿಧಿಸಬೇಕು ಎಂಬ ಶಿಫಾರಸು ಇದೆ.

ಇದೆಲ್ಲದಕ್ಕಿಂತ ಪ್ರಮುಖವಾಗಿ ಇಡೀ ಪಶ್ಚಿಮ ಘಟ್ಟ ಪ್ರದೇಶವು ರಾಜ್ಯಗಳ ಹಿಡಿತದಿಂದ ಕೇಂದ್ರ ಸರಕಾರದ ಹಿಡಿತಕ್ಕೆ ಹೋಗಲಿದೆ. ಇಲ್ಲಿನ ಜನರನ್ನು ಒಕ್ಕಲೆಬ್ಬಿಸಬೇಕಾಗುತ್ತದೆ. ಈಗಾಗಲೇ ಇರುವ ಕೈಗಾರಿಕೆಗಳನ್ನೂ 5 ವರ್ಷಗಳಲ್ಲಿ ಮುಚ್ಚಬೇಕು ಎಂಬ ಅಂಶವೂ ಇದೆ.

ಸದ್ಯ ಕೇರಳ ರಾಜ್ಯ ಕಸ್ತೂರಿ ರಂಗನ್‌ ವರದಿಗೆ ತೀವ್ರವಾಗಿ ವಿರೋಧಿಸಿದೆ. ಹೀಗಾಗಿ ಕೇಂದ್ರ ಸರಕಾರ ಈ ರಾಜ್ಯದ ಬಗ್ಗೆ ಮೃದು ಧೋರಣೆ ತಳೆದಿದೆ. ಇದರ ಜತೆಗೆ ಹಿಂದಿನ ಬಿಜೆಪಿ ಸರಕಾರವೂ ವರದಿಯನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಹೀಗಾಗಿ ಈಗಿನ ಸರಕಾರ ಕಸ್ತೂರಿ ರಂಗನ್‌ ವರದಿ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಬೇಕಾಗುತ್ತದೆ. ಇಲ್ಲಿನ ತಜ್ಞರು, ಕಾನೂನು ಪಂಡಿತರು, ಬಾಧಿತರ ಸಂಕಷ್ಟಗಳನ್ನು ಆಲಿಸಿ ಕಡೆಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಎಲ್ಲದಕ್ಕಿಂತ ಪ್ರಮುಖವಾಗಿ ಈ ವಿಚಾರದಲ್ಲಿ ತಾರ್ಕಿಕ ಅಂತ್ಯವೊಂದು ಬೇಕಾಗಿದೆ. ಪಶ್ಚಿಮ ಘಟ್ಟಗಳ ಜನತೆ ಇನ್ನೂ ಈ ವರದಿ ಬಗ್ಗೆ ಹೆದರಿಕೆಯಲ್ಲೇ ಬದುಕುತ್ತಿದ್ದು, ಇವರ ಭಯವನ್ನು ನಿವಾರಿಸುವ ನಿಟ್ಟಿನಲ್ಲಿ ಒಂದು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಇಲ್ಲಿ ಕಾಡಿಗಾಗಲಿ ಅಥವಾ ಜನರ ಬದುಕಿಗಾಗಲಿ ತೊಂದರೆ ಇಲ್ಲದ ತೀರ್ಮಾನವೊಂದು ಸ್ಪಷ್ಟವಾಗಿ ಬರಬೇಕಾಗಿದೆ.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.