Caste census ಹೊಸ ಚರ್ಚೆಗೆ ವೇದಿಕೆ ತೆರೆದಿಟ್ಟ ಬಿಹಾರ ಜಾತಿಗಣತಿ

Team Udayavani, Oct 3, 2023, 6:00 AM IST

Caste census ಹಲವು ವಾದಗಳ ತೆರೆದಿಟ್ಟ ಬಿಹಾರ ಜಾತಿಗಣತಿ

ವರ್ಷಾಂತ್ಯಕ್ಕೆ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆ, ಮುಂದಿನ ವರ್ಷದ ಏಪ್ರಿಲ್‌-ಮೇ ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಪೂರಕವಾಗಿರುವಂತೆ ಬಿಹಾರದಲ್ಲಿ ಇತ್ತೀಚೆಗೆ ನಡೆಸಲಾಗಿದ್ದ ಜಾತಿ ಗಣತಿಯ ವರದಿಯನ್ನು ಬಿಡುಗಡೆಗೊಳಿಸಲಾಗಿದೆ. ಅದರ ಅನ್ವಯ ಆ ರಾಜ್ಯದ ಒಟ್ಟು ಜನಸಂಖ್ಯೆಯ ಪೈಕಿ 13 ಕೋಟಿ ಮಂದಿ ಒಬಿಸಿಗೆ ಸೇರಿದವರು.

ಶೇಕಡಾವಾರು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ 63. ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಬಿಹಾರದಲ್ಲಿ ಇದೇ ಮೊದಲ ಬಾರಿಗೆ ಇಂಥ ಕ್ರಮ ಕೈಗೊಳ್ಳಲಾಗಿದೆ. ಬ್ರಿಟಿಷ್‌ ಆಡಳಿತದ ಭಾರತದಲ್ಲಿ 1931ರಲ್ಲಿ ಕೊನೆಯ ಬಾರಿಗೆ ಜಾತಿ ಆಧಾರಿತ ಸಮೀಕ್ಷೆ ನಡೆಸಲಾಗಿತ್ತು. 1881ರಲ್ಲಿ ಮೊದಲ ಬಾರಿಗೆ ಇಂಥ ಅಧ್ಯಯನ ಕೈಗೊಳ್ಳಲಾಗಿತ್ತು.

ಬಿಹಾರದ ವರದಿಯ ಬಗ್ಗೆ ಪಕ್ಷಿನೋಟ ಬೀರುವುದಿದ್ದರೆ ಶೇ.27 ಹಿಂದುಳಿದ ವರ್ಗ, ಶೇ.36 ಅತ್ಯಂತ ಹಿಂದುಳಿದ ವರ್ಗ, ಎಸ್‌ಸಿ ಶೇ.19.65, ಎಸ್‌ಟಿ ಶೇ.1.68, ಸಾಮಾನ್ಯ ವರ್ಗಕ್ಕೆ ಸೇರಿದವರು ಶೇ. 15.52 ಎಂಬ ವರ್ಗೀಕರಣವಿದೆ. ಯಾದವ ಸಮುದಾಯ ಶೇ.14, ಕುಮ್ರಿ ಶೇ.2.87 ಇದೆ.

ಬಿಹಾರದಲ್ಲಿ ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರ ನಡೆಸಿದ ಈ ಸಮೀಕ್ಷೆಯನ್ನೇ ಮುಂದಿಟ್ಟುಕೊಂಡೇ ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಇವರೇ ಮುಂತಾದವರು ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ “ನಾವು ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುತ್ತೇವೆ’ ಎಂಬ ಭರವಸೆಯ ಮಾತುಗಳನ್ನು ಆಗಾಗ ಹೇಳುತ್ತಾ ಬರುತ್ತಿದ್ದಾರೆ.

ಜಾತಿಗಣತಿ ಎನ್ನುವುದೇ ರಾಜಕೀಯದಲ್ಲಿ ಅತ್ಯಂತ ಸೂಕ್ಷ್ಮವಾಗಿರುವ ವಿಚಾರವೇ ಹೌದು. ಕೊಂಚ ತಪ್ಪಿ ಹೋದರೂ ಅದರಿಂದ ಉಂಟಾಗುವ ರಾಜಕೀಯ ಪ್ರತಿಕೂಲ ಸಂಗತಿಗಳು ವರ್ಷಾನುಗಟ್ಟಲೆ ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ಆಗಾಗ ವಿಶೇಷವಾಗಿ ಚುನಾವಣೆಗಳ ಸಂದರ್ಭಗಳಲ್ಲಿ ಸದ್ದು ಮಾಡುತ್ತಲೇ ಇರುತ್ತವೆ. ಒಟ್ಟು 40 ಲೋಕಸಭಾ ಸದಸ್ಯರನ್ನು ಕಳುಹಿಸಿಕೊಡುವ ಬಿಹಾರದಲ್ಲಿ ಮುಸ್ಲಿಂ ಸಮುದಾಯದ ಪ್ರಮಾಣ ಶೇ. 17.70. ಹಿಂದೂಗಳು ಶೇ.81.99.ಜಾತಿ ಎನ್ನುವುದು ಕತ್ತಿಯ ಅಲಗಿನ ಮೇಲೆ ನಡೆದಂತೆಯೇ ಸರಿ ಎಂಬ ಮಾತನ್ನು ದೇಶದ ರಾಜಕೀಯ ವಲಯದ ಹಿರಿಯ ನಾಯಕರು ಆಗಾಗ ಆತ್ಮೀಯ ವಲಯದಲ್ಲಿ ಹೇಳುವುದುಂಟು. ಇಂಥ ವರದಿಗಳು ಕೇವಲ ರಾಜಕೀಯ ಲಾಭ ಪಡೆಯುವುದಕ್ಕೋ, ನಾಯಕರ ವೈಯಕ್ತಿಕ ವರ್ಚಸ್ಸು ಹೆಚ್ಚಿಸಲು ಬಳಕೆಯಾಗದೆ, ನಿಜವಾಗಿಯೂ ಅನ್ಯಾಯಕ್ಕೆ, ತುಳಿತಕ್ಕೆ ಒಳಗಾಗಿರುವ ಸಮುದಾಯಕ್ಕೆ ಅನುಕೂಲವಾಗುವಂತೆ ಸರ್ಕಾರಗಳ ಕಲ್ಯಾಣ ಯೋಜನೆಗಳು ಅವರಿಗೆ ತಲುಪುವಂತೆ ಆಗಬೇಕು.

ವರದಿ ಪ್ರಕಟಗೊಳ್ಳುತ್ತಲೇ ರಾಜಕೀಯವಾಗಿ ಲಾಭ-ನಷ್ಟದ ಲೆಕ್ಕಾಚಾರಗಳು, ಆರೋಪ ಪ್ರತ್ಯಾರೋಪಗಳಿಗೆ ಸೋಪಾನವಾಗಿದೆ. ಬಿಹಾರ ಬಿಜೆಪಿ ಘಟಕ ಅಧ್ಯಕ್ಷ ಸಾಮ್ರಾಟ್‌ ಚೌಧರಿಯವರ ಪ್ರಕಾರ ವರದಿ ರಾಜ್ಯದ ಬದಲಾಗಿರುವ ಸಾಮಾಜಿಕ ಕ್ಷೇತ್ರದ ಅಂಶವನ್ನು ಪ್ರತಿಫ‌ಲಿಸಬೇಕಾಗಿತ್ತು ಎಂದಿದ್ದಾರೆ. ಇನ್ನು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಮತ್ತೆ ದೇಶಾದ್ಯಂತ ಜಾತಿಗಣತಿ ನಡೆಸಬೇಕು ಎಂಬ ವಾದ ಮುಂದಿಟ್ಟಿದ್ದಾರೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಕೈಗೊಂಡಿದ್ದು, ಅದರ ಪರಿಷ್ಕೃತ ವರದಿ ಇಷ್ಟರಲ್ಲೇ ಬಿಡುಗಡೆಯಾಗುವ ನಿರೀಕ್ಷೆ ಇದೆ. ಈ ಸಮೀಕ್ಷೆ ಸಹ ರಾಜ್ಯದ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಂಚಲನ ಮೂಡಿಸುವ ಸಾಧ್ಯತೆ ಇದೆ.ಆದರೆ ಈ ಪ್ರಕ್ರಿಯೆ ಜೇನಿನ ಗೂಡಿಗೆ ಕಲ್ಲು ಎಸೆದ ಹಾಗೆ ಎನ್ನುವುದು ಎಲ್ಲ ಪಕ್ಷಗಳಿಗೂ ತಿಳಿದಿರುವ ಕಾರಣ, ಒಂದಿಲ್ಲೊಂದು ಲೆಕ್ಕಾಚಾರಗಳೇ ಮೇಳೈಸುತ್ತವೆ.

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.