ಅಪಾಯ ಮೈಮೇಲೆಳೆದುಕೊಳ್ಳುವ ಗುಣ ಅಸಡ್ಡೆ ಬೇಡ


Team Udayavani, May 16, 2020, 1:56 AM IST

ಅಪಾಯ ಮೈಮೇಲೆಳೆದುಕೊಳ್ಳುವ ಗುಣ ಅಸಡ್ಡೆ ಬೇಡ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭಾರತದಲ್ಲಿನ ಕೋವಿಡ್ ಪ್ರಕರಣಗಳ ಸಂಖ್ಯೆ ಶುಕ್ರವಾರದ ವೇಳೆಗೆ ಚೀನಕ್ಕಿಂತಲೂ ಹೆಚ್ಚಾಗುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಹೇಗಿರಲಿದೆಯೋ ಎಂಬ ಆತಂಕವಂತೂ ಕಾಡುತ್ತಿದೆ. ಆದುದರಿಂದ ಇನ್ನಷ್ಟು ಜಾಗರೂಕತೆ ಅತೀ ಅಗತ್ಯ.

ಕೋವಿಡ್ ವೈರಸ್‌ ಹಾವಳಿ ಸದ್ಯಕ್ಕಂತೂ ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ. ಶುಕ್ರವಾರದ ವೇಳೆಗೆ ಭಾರತದಲ್ಲಿನ ಕೋವಿಡ್ ಪ್ರಕರಣಗಳ ಸಂಖ್ಯೆ ಚೀನಕ್ಕಿಂತಲೂ ಹೆಚ್ಚಾಗುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಹೇಗಿರಲಿದೆಯೋ ಎಂಬ ಆತಂಕವಂತೂ ಕಾಡುತ್ತಿದೆ.

ಆದಾಗ್ಯೂ ಅನ್ಯ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಮರಣ ಹಾಗೂ ಸೋಂಕು ಹರಡುವಿಕೆ ಪ್ರಮಾಣ ಕಡಿಮೆ ಇದೆ. ಇನ್ನು ಸೋಂಕಿತರ ವಿಚಾರಕ್ಕೆ ಬಂದರೆ, ಎಪ್ರಿಲ್‌ನ ಆರಂಭಿಕ ಸಮಯದಲ್ಲಿ ಪ್ರತಿ ನಾಲ್ಕು ದಿನಕ್ಕೊಮ್ಮೆ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುತ್ತಿತ್ತು, ಆದರೆ ಈಗ ಈ ಅವಧಿ ವಿಸ್ತರಣೆಗೊಂಡಿದೆ. ಇನ್ನೊಂದೆಡೆ ಕಳೆದ 11 ದಿನಗಳಲ್ಲಿ ಮೃತಪಟ್ಟವರ ಸಂಖ್ಯೆ ದ್ವಿಗುಣಗೊಂಡಿದೆ.

ಆದಾಗ್ಯೂ ಭಾರತಕ್ಕಿಂತ ಕಡಿಮೆ ಸೋಂಕಿತರನ್ನು ಹೊಂದಿರುವ ಅನೇಕ ರಾಷ್ಟ್ರಗಳಲ್ಲಿ ಮೃತಪಟ್ಟವರ ಸಂಖ್ಯೆ ನಮ್ಮಲ್ಲಿಗಿಂತ ಅಧಿಕವಿದೆ. ಉದಾಹರಣೆಗೆ ಬೆಲ್ಜಿಯಂನಲ್ಲಿ ಸೋಂಕಿತರ ಸಂಖ್ಯೆ 54 ಸಾವಿರವಿದ್ದರೆ, ಮೃತಪಟ್ಟವರು 8 ಸಾವಿರಕ್ಕೂ ಅಧಿಕ ಜನ. ಹಾಗೆಂದು ಭಾರತ ಸುಸ್ಥಿತಿಯಲ್ಲಿದೆ ಎಂಬುದು ಇದರರ್ಥವಲ್ಲ.

ಏಕೆಂದರೆ  ಮುಂದಿನ  ದಿನಗಳಲ್ಲಿ ಪರಿಸ್ಥಿತಿ ಹೇಗಿರುತ್ತದೋ ಎನ್ನುವುದು ತಿಳಿಯದು. ದೇಶದಲ್ಲಿ ಎಲ್ಲ ರಾಜ್ಯಗಳಲ್ಲೂ ಪರಿಸ್ಥಿತಿ ಒಂದೇ ತೆರನಾಗಿಲ್ಲ. ಕೆಲವು ರಾಜ್ಯಗಳು ಕೋವಿಡ್ ವಿರುದ್ಧ ಸಕ್ಷಮವಾಗಿ ಹೋರಾಡುತ್ತಿದ್ದರೆ, ಇನ್ನೂ ಕೆಲವು ರಾಜ್ಯಗಳು ಕೈಚೆಲ್ಲುವ ಹಂತದತ್ತ ಸಾಗುತ್ತಿವೆ. ಪ್ರತಿಯೊಂದು ರಾಜ್ಯವೂ ದೇಶದ ಆರ್ಥಿಕ ಯಂತ್ರದಲ್ಲಿ ತನ್ನದೇ ಆದ ಪಾತ್ರವಹಿಸುವುದರಿಂದ, ಒಂದರ ದುಸ್ಥಿತಿ ಇನ್ನೊಂದರ ಮೇಲೆ ಖಂಡಿತ ಪರಿಣಾಮ ಬೀರುತ್ತದೆ.

ಆದಾಗ್ಯೂ ಜಗತ್ತಿನ ಅನೇಕ ಪರಿಣತರು ಭಾರತದಲ್ಲಿ ಎಪ್ರಿಲ್‌ ಅಂತ್ಯದ ವೇಳೆಗೆ ಸೋಂಕಿತರ ಸಂಖ್ಯೆ 2 ಲಕ್ಷ ದಾಟಲಿದೆ ಎಂದು ಹೇಳಿದ್ದರು. ಆದರೆ ತ್ವರಿತವಾಗಿ ದೇಶಾದ್ಯಂತ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿಗೊಳಿಸಿದ ಪರಿಣಾಮ ಸೋಂಕು ಹರಡುವಿಕೆಯ ಸರಪಳಿಗಂತೂ ಪೆಟ್ಟುಬಿದ್ದಿರುವುದು ತಿಳಿಯುತ್ತದೆ.

ಹಾಗೆಂದು ಖಂಡಿತ ನಾವು ನಿರಮ್ಮಳವಾಗಿ ಇರುವ ಅವಕಾಶವೇ ಇಲ್ಲ. ಏಕೆಂದರೆ ಲಾಕ್‌ಡೌನ್‌ನ ನಿಯಮಗಳಲ್ಲಿ ತುಸು ಸಡಿಲಿಕೆ ತರುತ್ತಿದ್ದಂತೆಯೇ ಜನರು ಢಾಳಾಗಿಯೇ ನಿಷ್ಕಾಳಜಿ ಮೆರೆಯಲಾರಂಭಿಸಿದ್ದಾರೆ.

ರಾಜಧಾನಿ ಬೆಂಗಳೂರಿನ ಉದಾಹರಣೆಯನ್ನೇ ನೀಡುವುದಾದರೆ ಕೆಲವೇ ದಿನಗಳಲ್ಲಿ ಬದಲಾಗಿರುವ ಪರಿಸ್ಥಿತಿಯಂತೂ ಆತಂಕ ಹುಟ್ಟಿಸುವಂತಿದೆ. ಕೆಲವೇ ದಿನಗಳ ಹಿಂದೆ, ಖಾಲಿ ಹೊಡೆಯುತ್ತಿದ್ದ ರಸ್ತೆಗಳೆಲ್ಲ ಈಗ ಟ್ರಾಫಿಕ್‌ ಜಾಮ್‌ನಿಂದ ತುಳುಕಲಾರಂಭಿಸಿವೆ.

ರಸ್ತೆಗಳಲ್ಲಿ ಜನ ಸಾಮಾಜಿಕ ಅಂತರದ ನಿಯಮವನ್ನು ಅವಗಣಿಸಿ ಗುಂಪುಗೂಡಿ ಅಡ್ಡಾಡುವುದು, ಒಂದೊಂದು ಬೈಕಿನಲ್ಲಿ ಇಬ್ಬರು ಮೂವರು ಕುಳಿತು ತಿರುಗಾಡುವುದು ನಿಜಕ್ಕೂ ಆತಂಕದ ವಿಷಯವೇ ಸರಿ. ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ ಇಂಥದ್ದೇ ಚಿತ್ರಣವಿರುವ ಬಗ್ಗೆ ವರದಿಯಾಗುತ್ತಿದೆ. ಅನೇಕರು, ಪೊಲೀಸರಿಂದ ಬೈಸಿಕೊಳ್ಳಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಮಾಸ್ಕ್ ಧರಿಸುತ್ತಿದ್ದಾರೆಯೇ ಹೊರತು, ಅದು ತಮ್ಮ ಹಾಗೂ ಸಮಾಜದ ಸುರಕ್ಷತೆಗೆ ಅಗತ್ಯ ಎಂದಲ್ಲ.

ಪರಿಸ್ಥಿತಿ ಹೀಗೇ ಮುಂದುವರಿದರೆ ನೋಡನೋಡುತ್ತಿರುವಂತೆಯೇ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಮ್ಮರವಾಗಿ ಬೆಳೆದು ನಿಲ್ಲುವುದರಲ್ಲಿ ಅನುಮಾನವಿಲ್ಲ. ಕೇಂದ್ರ ಸರಕಾರ, ರಾಜ್ಯ ಸರಕಾರಗಳು, ಆರೋಗ್ಯ- ಪೊಲೀಸ್‌ ವ್ಯವಸ್ಥೆಗಳು ರೋಗ ಪ್ರಸರಣವನ್ನು ತಡೆಯಲು ಹಗಲೂ ರಾತ್ರಿ ಶ್ರಮಿಸುತ್ತಿವೆ.

ಆದರೆ ಜನರಲ್ಲಿನ ಅಸಡ್ಡೆ ಗುಣ ಈ ಪ್ರಯತ್ನಗಳಿಗೆಲ್ಲ ಎಲ್ಲಿ ದೊಡ್ಡ ಅಡ್ಡಗಾಲಾಗಿ ಪರಿಣಮಿಸಿಬಿಡುತ್ತದೋ ಎಂಬ ಆತಂಕ ಎದುರಾಗಿದೆ. ಇನ್ನೇನು ಲಾಕ್‌ಡೌನ್‌ನ ಹೊಸ ಚರಣ ಆರಂಭವಾಗಲಿದೆ. ಆಗ ಮತ್ತಷ್ಟು ಕ್ಷೇತ್ರಗಳು ಕಾರ್ಯಾಚರಿಸಲಾರಂಭಿಸುತ್ತವೆ. ಹೀಗಾಗಿ ಗರಿಷ್ಠ ಎಚ್ಚರಿಕೆ ಅತ್ಯಗತ್ಯ.

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

school

Karnataka; ಶಾಲಾ ಆಸ್ತಿ ಸಂರಕ್ಷಣೆ ಅಭಿಯಾನ ಎಲ್ಲ ಇಲಾಖೆಗಳಿಗೂ ಮಾದರಿ

Forest

Forest: ಅರಣ್ಯದಲ್ಲಿ ನಿರಂತರ ಗಣಿಗಾರಿಕೆ: ಸರಕಾರ ಚರ್ಚಿಸಿ ನಿರ್ಧರಿಸಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.