ಕಾಲೇಜಿನಿಂದ ವಿದ್ಯಾರ್ಥಿಗಳ ಡ್ರಾಪ್‌ಔಟ್‌ ಅತ್ಯಂತ ಕಳವಳಕಾರಿ


Team Udayavani, Aug 4, 2021, 6:50 AM IST

ಕಾಲೇಜಿನಿಂದ ವಿದ್ಯಾರ್ಥಿಗಳ ಡ್ರಾಪ್‌ಔಟ್‌ ಅತ್ಯಂತ ಕಳವಳಕಾರಿ

ಕೊರೊನಾದಿಂದ ಶೈಕಣಿಕ ಕ್ಷೇತ್ರ ಸಂಪೂರ್ಣ ನಲುಗಿಹೋಗಿದೆ. ಪ್ರಾಥಮಿಕ, ಪ್ರೌಢ, ಉನ್ನತ ಶಿಕ್ಷಣದ ಮೇಲೆ ಸಮಾನ ಪರಿಣಾಮ ಬೀರಿದೆ. ತಾಂತ್ರಿಕ ಶಿಕ್ಷಣ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ. ಕಳೆದ ಒಂದೂವರೆ ವರ್ಷದಿಂದ ಯಾವ ಶಿಕ್ಷಣ ಸಂಸ್ಥೆಯಲ್ಲೂ ಭೌತಿಕ ತರಗತಿಗಳು ಸರಿಯಾಗಿ ನಡೆದಿಲ್ಲ. ಆನ್‌ಲೈನ್‌ ಹಾಗೂ ಪೂರ್ವ ಮುದ್ರಿತ ವೀಡಿಯೋ ತರಗತಿಗಳ ಮೂಲಕವೇ ಹೆಚ್ಚು ಬೋಧನೆ ನಡೆದಿದೆ. ಆದರೆ ಇಂದಿಗೂ ವಿದ್ಯಾರ್ಥಿಗಳು ಆನ್‌ಲೈನ್‌ ಶಿಕ್ಷಣಕ್ಕೆ ಸಂಪೂರ್ಣವಾಗಿ ಒಗ್ಗಿಕೊಂಡಿಲ್ಲ ಮತ್ತು ನೆಟ್‌ವರ್ಕ್‌ ಸಹಿತವಾಗಿ ತಾಂತ್ರಿಕ ಸಮಸ್ಯೆಗಳು ಬಗೆಹರಿದಿಲ್ಲ. ಇದು ಗ್ರಾಮೀಣ ಭಾಗದ ಪದವಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಸ್ಯೆ ಉಂಟುಮಾಡಿದೆ. ಸರಕಾರದಿಂದಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಈ ವಿಷಯವಾಗಿ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ. ಇಂದಿಗೂ ಅನೇಕ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಯಲ್ಲಿ ಭಾಗವಹಿಸಲು ತಾಂತ್ರಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಆನ್‌ಲೈನ್‌ ತರಗತಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿರುವುದು ಒಂದೆಡೆಯಾದರೆ ಭೌತಿಕ ತರಗತಿಯಷ್ಟು ಪರಿಣಾಮಕಾರಿಯಾಗಿ ಬೋಧನೆ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳ ಭವಿಷ್ಯದ ಯೋಚನೆ ಕಾಡಲಾರಂಭಿಸಿದೆ. ಇವೆಲ್ಲದರ ಪರಿಣಾಮವಾಗಿ ಉನ್ನತ ಶಿಕ್ಷಣದಲ್ಲಿ ವ್ಯಾಸಂಗವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಸಾಮಾನ್ಯ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್‌, ಡಿಪ್ಲೊಮಾ ಸಹಿತವಾಗಿ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಶೇ.20ರಷ್ಟು ವಿದ್ಯಾರ್ಥಿಗಳು ಕೊರೊನಾ ಸಂಕಷ್ಟ ಹಾಗೂ ಅದರಿಂದ ಉದ್ಭವಿಸಿರುವ ಆರ್ಥಿಕ ದುಃಸ್ಥಿತಿಯಿಂದ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ, ಜೀವನೋಪಾಯಕ್ಕಾಗಿ ತಾತ್ಕಾಲಿಕ ಉದ್ಯೋಗ ಸೇರಿಕೊಳ್ಳುತ್ತಿದ್ದಾರೆ. ಇನ್ನು ಅನೇಕ ವಿದ್ಯಾರ್ಥಿಗಳು ಉದ್ಯೋಗ ಹುಡುಕುತ್ತಿದ್ದಾರೆ. ಸರಕಾರ ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕೊರೊನಾ ಅಥವಾ ಇನ್ನಾವುದೇ ಕಾರಣ ದಿಂದ ಕಾಲೇಜು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ, ಪುನಃ ಅವರನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವ ಕಾರ್ಯ ಮಾಡಬೇಕು.

2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಸೆಪ್ಟಂಬರ್‌-ಅಕ್ಟೋಬರ್‌ನಲ್ಲಿ ಆರಂಭವಾಗಲಿದೆ. ಇದಕ್ಕೆ ಪೂರಕವಾಗಿ ಪ್ರವೇಶ ಪ್ರಕ್ರಿಯೆಗಳು ಶೀಘ್ರ ಆರಂಭವಾಗಲಿದೆ. ಈ ವೇಳೆಯಲ್ಲಿ ಕಳೆದ ವರ್ಷ ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಕೋರ್ಸ್‌ಗಳಲ್ಲಿ ದ್ವಿತೀಯ ಅಥವಾ ತೃತೀಯ ವರ್ಷದಲ್ಲಿ ವಿದ್ಯಾರ್ಥಿಗಳು ಈಗ ಮುಂದಿನ ವರ್ಷಕ್ಕೆ ದಾಖಲಾತಿ ಮಾಡಿಕೊಂಡಿದ್ದಾರೋ ಅಥವಾ ಇಲ್ಲವೋ ಎಂಬುದರ ಸಂಪರ್ಕ ಮಾಹಿತಿ ಸಂಗ್ರಹಣೆ ಮಾಡಬೇಕು.  ಕೊರೊನಾ ಕಾರಣದಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ, ತಾತ್ಕಾಲಿಕ ಉದ್ಯೋಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮುಂದೆ ಶೈಕ್ಷಣಿಕ ಭವಿಷ್ಯವೇ ಇಲ್ಲದಂತಾಗಬಾರದು.

ಕೌಟುಂಬಿಕ ಪರಿಸ್ಥಿತಿ, ಆರ್ಥಿಕ ಸಂಕಷ್ಟದಿಂದ ಶಿಕ್ಷಣ ಮೊಟಕು ಗೊಳಿಸಿದ ವಿದ್ಯಾರ್ಥಿಗಳು ಪುನಃ ಕಾಲೇಜಿಗೆ ಬರುವಂತಾಗಬೇಕು. ಈ ನಿಟ್ಟಿನಲ್ಲಿ ಸರಕಾರ ವಿಶೇಷ ಆದ್ಯತೆ ನೀಡುವ ಅಗತ್ಯವಿದೆ.

ಟಾಪ್ ನ್ಯೂಸ್

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.