ಕೋವಿಡ್‌ ಇನ್ನೂ ಹೋಗಿಲ್ಲ; ಇರಲಿ ಎಚ್ಚರ!


Team Udayavani, Apr 23, 2022, 6:00 AM IST

Covidಕೋವಿಡ್‌ ಇನ್ನೂ ಹೋಗಿಲ್ಲ; ಇರಲಿ ಎಚ್ಚರ!

ದೇಶದಲ್ಲಿ ಮೂರನೇ ಅಲೆ ಅಥವಾ ಒಮಿಕ್ರಾನ್‌ ರೂಪಾಂತರಿ ಹೆಚ್ಚಾಗಿ ಬಾಧಿಸದ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಬಹುತೇಕ ಕೊರೊನಾ ನಿಯಮಾವಳಿಗಳನ್ನು ಜನ ದೂರ ಸರಿಸಿದ್ದಾರೆ. ಆದರೆ ಸದ್ದಿಲ್ಲದೇ ನಾಲ್ಕನೇ ಅಲೆ ಆರಂಭವಾಗುತ್ತಿದ್ದು, ಇದರ ಪ್ರಭಾವ ಎಷ್ಟಿದೆ ಎಂಬುದನ್ನು ಇನ್ನೂ ಯಾರಿಗೂ ಅರಿಯಲು ಆಗಿಲ್ಲ. ಹಾಗೆಯೇ, ದಿಲ್ಲಿ ಸೇರಿದಂತೆ ದೇಶದ ಕೆಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ನಿಧಾನಗತಿಯಲ್ಲಿ ಹೆಚ್ಚಳವಾಗುತ್ತಿದೆ. ಪಾಸಿಟಿವಿಟಿ ದರವೂ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿ ಎರಡು ಒಮಿಕ್ರಾನ್‌ನ ಸಬ್‌ವೇರಿಯಂಟ್‌ ಪ್ರಕರಣಗಳು ಕಾಣಿಸಿಕೊಂಡಿದ್ದು, ಒಂದಷ್ಟು ಆತಂಕಕ್ಕೂ ಕಾರಣವಾಗಿದೆ.

ಮೊದಲ ಅಲೆಗಿಂತಲೂ ಎರಡನೇ ಅಲೆ ವೇಳೆ ದೇಶ ಕೊರೊನಾದಿಂದ ಭಾರೀ ಪ್ರಮಾಣದಲ್ಲಿ ನಲುಗಿತ್ತು. ಹಾಸಿಗೆ ಸಿಗದೆ, ಆಮ್ಲ

ಜನಕವೂ ಸರಿಯಾಗಿ ಸಮಯಕ್ಕೆ ಲಭ್ಯವಾಗದೇ ಅಸಂಖ್ಯಾತ ಮಂದಿ ಪ್ರಾಣಬಿಟ್ಟಿದ್ದರು. ಕೊರೊನಾದ ಎರಡನೇ ಅಲೆ ಮನುಕುಲವನ್ನೇ ಬಹುವಾಗಿ ಕಾಡಿತ್ತು ಎಂದು ಹೇಳಿದರೆ ತಪ್ಪಾಗಲಾರದು. ಆದರೆ ಮೂರನೇ ಅಲೆ ವೇಳೆ ವೇಗವಾಗಿ ಹರಡುವ ಒಮಿಕ್ರಾನ್‌ ರೂಪಾಂತರಿ ಕಾಣಿಸಿಕೊಂಡು ಎಲ್ಲೆಡೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್‌ ಇದು ತೀವ್ರವಾಗಿ ಹರಡುವ ಶಕ್ತಿ ಹೊಂದಿದ್ದು ಬಿಟ್ಟರೆ, ಆರೋಗ್ಯದ ಮೇಲೆ ಅಷ್ಟಾಗಿ ಕೆಟ್ಟ ಪರಿಣಾಮ ಬೀರಲಿಲ್ಲ. ಹೀಗಾಗಿ ಮೂರನೇ ಅಲೆಯನ್ನು ಸಲೀಸಾಗಿ ದಾಟಿದೆವು.

ಈಗ ಕೊರೊನಾ ಸೋಂಕಿನ ಮೂಲ ದೇಶ ಚೀನದಲ್ಲೇ ಸೋಂಕು ಹೆಚ್ಚಾಗಿ ಬಾಧಿಸುತ್ತಿದೆ. ಶಾಂಘೈಯಂಥ ನಗರದಲ್ಲಿ ಇನ್ನೂ ಲಾಕ್‌ಡೌನ್‌ ತೆರವಾಗಿಲ್ಲ. ದೇಶದ ಬಹುತೇಕ ಜನರಿಗೆ ಲಸಿಕೆ ನೀಡಿದ್ದರೂ ಕೊರೊನಾ ಹೆಚ್ಚಳದ ಗತಿ ಬದಲಾಗಿಲ್ಲ. ಅಲ್ಲಿಯೂ ಆಹಾರ ಸೇರಿದಂತೆ ಅಗತ್ಯ ವಸ್ತುಗಳಿಗೆ ಜನ ನಲುಗುತ್ತಿರುವುದನ್ನು ನೋಡುತ್ತಿದ್ದೇವೆ.

ಸದ್ಯ ಭಾರತದಲ್ಲಿಯೂ ಅರ್ಹ ಜನಸಂಖ್ಯೆಯ ಬಹುತೇಕ ಮಂದಿ ಲಸಿಕೆ ಪಡೆದಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹೇಳುವುದಾದರೆ, ಇಡೀ ಜನಸಂಖ್ಯೆಗೆ ಕೊರೊನಾ ಬಂದು ಹೋಗಿರಬಹುದು ಎಂದು ವಿಶ್ಲೇಷಿಸಲಾಗಿದೆ. ಹೀಗಾಗಿ ಕೊರೊನಾ ಎದುರಿಸುವ ಶಕ್ತಿ ಭಾರತೀಯರಲ್ಲಿ ಒಂದಷ್ಟು ಹೆಚ್ಚಾಗಿಯೇ ಇದೆ.

ಒಂದು ಲಸಿಕೆ ಪಡೆದಿದ್ದೇವೆ ಎಂಬ ಅಭಯ, ಕೊರೊನಾಗೆ ತೆರೆದುಕೊಂಡಿರುವ ಸಾಧ್ಯತೆಗಳಿಂದಾಗಿ ಜನರಲ್ಲಿ ಕೊರೊನಾ ವಿರುದ್ಧದ ಹೋರಾಟದ ಶಕ್ತಿ ಬಂದಿದೆ. ಇಷ್ಟೆಲ್ಲ ಆಗಿದ್ದರೂ ಇನ್ನೂ ಕೊರೊನಾದ ರೂಪಾಂತರಿ ಹೇಗಿರಬಹುದು ಎಂದು ಹೇಳುವುದಕ್ಕೆ ಯಾರಿಗೂ ಸಾಧ್ಯವಾಗಿಲ್ಲ. ಒಂದು ವೇಳೆ ಹಿಂದಿನ ಎಲ್ಲ ರೂಪಾಂತರಿಗಳಿಗಿಂತ ಹೆಚ್ಚು ಸಾಮರ್ಥ್ಯದ ರೂಪಾಂತರಿ ಕಾಣಿಸಿಕೊಂಡರೆ ಲಸಿಕೆಯೂ ಕೆಲಸ ಮಾಡದೇ ಇರಬಹುದು. ಹೀಗಾಗಿ ಜನತೆ ಮುಂದಿರುವ ಏಕೈಕ

ಅಸ್ತ್ರವೆಂದರೆ, ಮುಂಜಾಗ್ರತೆ ಮಾತ್ರ. ಮಾಸ್ಕ್ ಧರಿಸುವುದು, ಆಗಾಗ ಕೈತೊಳೆದುಕೊಳ್ಳುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿಕೊಳ್ಳಬೇಕು. ಈಗಾಗಲೇ ಕೊರೊನಾ ಹೋಗಿಯಾಗಿದೆ ಎಂಬ ಅಂಶವನ್ನು ಮನಸ್ಸಿನಿಂದ ತೆಗೆದುಹಾಕಬೇಕು. ಇಲ್ಲದಿದ್ದರೆ, ಹೊಸ ರೂಪಾಂತರಿಯ ಕಾಟದಿಂದಾಗಿ ಎರಡನೇ ಅಲೆಯಲ್ಲಿ ಎದುರಿಸಿದ ನೋವು, ಸಂಕಟಗಳನ್ನೇ ಮತ್ತೆ ಎದುರಿಸಬೇಕಾದೀತು ಎಚ್ಚರ.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kannadiga

Editorial: ಕನ್ನಡಿಗರ ನಿಂದನೆಗೆ ಕಠಿನ ಕ್ರಮ: ಸ್ತುತ್ಯರ್ಹ ನಿಲುವು

4-editorial

Editorial: ಸುವರ್ಣ ಕರ್ನಾಟಕ: ವಿಕಾಸಕ್ಕೆ ಕಾರ್ಯಸೂಚಿ ಅಗತ್ಯ

cyber crime

Cyber ​​crime ತಡೆ: ವಿವೇಚನೆಯೇ ಕೀಲಿಕೈ

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.