ಗ್ರಾಮಗಳ ಅಭಿವೃದ್ಧಿಗೆ ಮುನ್ನುಡಿಯಾಗಲಿ ಜಿಲ್ಲಾಧಿಕಾರಿಗಳ ವಾಸ್ತವ್ಯ


Team Udayavani, Feb 20, 2021, 7:10 AM IST

ಗ್ರಾಮಗಳ ಅಭಿವೃದ್ಧಿಗೆ ಮುನ್ನುಡಿಯಾಗಲಿ ಜಿಲ್ಲಾಧಿಕಾರಿಗಳ ವಾಸ್ತವ್ಯ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರಕಾರ ಇದೀಗ ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಪ್ರತೀ ತಿಂಗಳ ಮೂರನೇ ಶನಿವಾರದಂದು ಜಿಲ್ಲಾಧಿಕಾರಿಗಳು ಜಿಲ್ಲೆಯ ಒಂದು ಗ್ರಾಮದಲ್ಲಿ ವಾಸ್ತವ್ಯ ಹೂಡಿ ಆ ಗ್ರಾಮದ ಜನತೆಯ ಸಮಸ್ಯೆ, ಬೇಡಿಕೆಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಕಟ್ಟಪ್ಪಣೆ ಮಾಡಿದೆ. ಅದರಂತೆ ರಾಜ್ಯದ ಬಹುತೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಶನಿವಾರ ಗ್ರಾಮ ವಾಸ್ತವ್ಯ ಮಾಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ ನಿಗದಿಯಾಗಿರುವ ಗ್ರಾಮಗಳ ಜನರು ತಮ್ಮೂರಿನ ಸಮಸ್ಯೆಗಳು ಮತ್ತು ಬೇಡಿಕೆಗಳ ಪಟ್ಟಿಯೊಂದಿಗೆ ಜಿಲ್ಲಾ ಧಿಕಾರಿಗಳ ಸ್ವಾಗತಕ್ಕೆ ಸಜ್ಜಾಗಿದ್ದಾರೆ.

ಗ್ರಾಮ ವಾಸ್ತವ್ಯದ ಪರಿಕಲ್ಪನೆ ಹೊಸದೇನಲ್ಲ. ಎಚ್‌.ಡಿ. ಕುಮಾರಸ್ವಾಮಿ ಮೊದಲ ಬಾರಿ ಸಿಎಂ ಆಗಿದ್ದ ವೇಳೆ ಗ್ರಾಮ ವಾಸ್ತವ್ಯವನ್ನು ಹಮ್ಮಿಕೊಳ್ಳುವ ಮೂಲಕ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದರು. ಆದರೆ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ಮಾಡಿದ ಹಳ್ಳಿಯ ರಸ್ತೆಗಳು ಡಾಮರು ಕಂಡರೆ, ಸರಕಾರಿ ಶಾಲೆ, ಕಚೇರಿ, ಕಟ್ಟಡಗಳು ಸುಣ್ಣಬಣ್ಣ ಬಳಿದುಕೊಂಡು ಹೊಸ ರೂಪ ಪಡೆ ದದ್ದನ್ನು ಬಿಟ್ಟರೆ ಈ ಗ್ರಾಮಗಳ ಸ್ಥಿತಿ ಇಂದಿಗೂ ಹಾಗೆಯೇ ಇದೆ. ಆ ಬಳಿ ಕವೂ ಸಚಿವರು, ರಾಜಕಾರಣಿಗಳ ಗ್ರಾಮ ವಾಸ್ತವ್ಯ ಕಾರ್ಯ ಕ್ರಮಗಳು ನಡೆದುಕೊಂಡು ಬಂದಿವೆಯಾದರೂ ಫ‌ಲಿತಾಂಶ ಹೇಳಿಕೊಳ್ಳುವಂಥದ್ದಿಲ್ಲ.

ಇದೀಗ ಗ್ರಾಮ ವಾಸ್ತವ್ಯದ ಸರದಿ ಅಧಿಕಾರಿಗಳದು. ಒಂದರ್ಥದಲ್ಲಿ ಜಿಲ್ಲಾ ಡಳಿ  ತ ಮತ್ತು ತಾಲೂಕು ಆಡಳಿತದ ಮುಖ್ಯಸ್ಥರಾಗಿರುವ ಜಿಲ್ಲಾಧಿಕಾರಿ ಗಳು ಮತ್ತು ತಹಶೀಲ್ದಾರರ ಗ್ರಾಮ ವಾಸ್ತವ್ಯ ಹೆಚ್ಚು ಮಹತ್ವಪೂರ್ಣ. ಕಾರ್ಯಾಂಗದಲ್ಲಿ ತಮ್ಮದೇ ಆದ ಹೊಣೆಗಾರಿಕೆಗಳನ್ನು ಹೊಂದಿರುವ ಜಿಲ್ಲಾಧಿಕಾರಿಗಳು ಅಭಿವೃದ್ಧಿಯಲ್ಲಿ ಇನ್ನೂ ಹಿಂದುಳಿದಿರುವ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಅಲ್ಲಿನ ವಸ್ತುಸ್ಥಿತಿಯನ್ನು ಕಣ್ಣಾರೆ ಕಂಡು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರಗಳನ್ನು ಒದಗಿಸುವ ದಿಸೆಯಲ್ಲಿ ಈ ಕಾರ್ಯಕ್ರಮ ಸ್ವಾಗತಾರ್ಹ ನಡೆಯೇ.

ಜಿಲ್ಲಾಧಿಕಾರಿಗಳು ವಾಸ್ತವ್ಯ ಮಾಡಿದಾಕ್ಷಣ ಆ ಗ್ರಾಮದ ಸಮಸ್ಯೆಗಳೆ ಲ್ಲವೂ ಪರಿಹಾರಗೊಳ್ಳುತ್ತವೆ ಎಂದು ಈಗಲೇ ಷರಾ ಬರೆದುಬಿಡುವುದು ಅವಸರದ ಕ್ರಮವಾದೀತೇನೋ? ಬಹುತೇಕ ಗ್ರಾಮಗಳಲ್ಲಿ ಜನರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಹೆಚ್ಚಿನವು ಕಂದಾಯ ಇಲಾಖೆಗೆ ಸಂಬಂಧಿಸಿದವುಗಳೇ. ಕಂದಾಯ ಇಲಾ ಖೆಗೆ ಸಂಬಂಧಿಸಿದ ವಿಚಾರಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಹೊಣೆಗಾರಿಕೆ ಇರುವುದರಿಂದ ಗ್ರಾಮಸ್ಥರ ಇಂತಹ ಕೆಲವೊಂದು ಸಮಸ್ಯೆಗಳಿಗೆ ಅವರು ಸ್ಪಂದಿಸಿದಾಕ್ಷಣ ಗ್ರಾಮ ವಾಸ್ತವ್ಯ ಸಾರ್ಥಕವಾಯಿತು ಎನ್ನಲಾಗದು. ಜಿಲ್ಲೆಯ ಸಮಗ್ರ ಆಡಳಿತದ ಹಿಡಿತ ಜಿಲ್ಲಾಧಿಕಾರಿಗಳ ಬಳಿ ಇರುವುದರಿಂದ ಅವರು ಉತ್ತರದಾಯಿತ್ವವನ್ನು ಹೊಂದಿದ್ದಾರೆ. ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಅವರು ಜನರ ಸಮಸ್ಯೆ ಮತ್ತು ಬೇಡಿಕೆಗಳಿಗೆ ಸ್ಪಂದಿಸಿದರೆ ಅದರಲ್ಲಿ ವಿಶೇಷತೆ ಯಾದರೂ ಏನು?. ತಾತ್ಕಾಲಿಕ ಪರಿಹಾರ, ಭರವಸೆಗಳಿಗಿಂತ ಶಾಶ್ವತ ಪರಿಹಾರ ಮಾರ್ಗೋ ಪಾಯಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕಾರ್ಯೋನ್ಮುಖ ರಾಗಬೇಕು. ಗ್ರಾಮ ವಾಸ್ತವ್ಯದ ವೇಳೆ ತಮ್ಮ ಕೆಳಹಂತದ ಅಧಿಕಾರಿಗಳಿಗೆ ನೀಡಿದ ಆದೇಶ, ಸೂಚನೆಗಳು ಪಾಲನೆಯಾಗಿ ವೆಯೇ ಎಂಬುದನ್ನು ಖಾತರಿಪಡಿಸಿ ಕೊಳ್ಳುವ ಗುರುತರ ಜವಾಬ್ದಾರಿಯೂ ಜಿಲ್ಲಾಧಿಕಾರಿಗಳ ಮೇಲಿದೆ. ನಿಗದಿತ ಕಾಲಮಿತಿಗೊಮ್ಮೆ ತಾವು ವಾಸ್ತವ್ಯ ಹೂಡಿದ ಗ್ರಾಮದ ಸ್ಥಿತಿಗತಿಗಳ ಕುರಿತಂತೆ ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು. ಹಾಗಾದಲ್ಲಿ ಮಾತ್ರ ಗ್ರಾಮ ವಾಸ್ತವ್ಯದ ನೈಜ ಉದ್ದೇಶ ಈಡೇರೀತು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.