ಶೈಕ್ಷಣಿಕ ವಾತಾವರಣ ಹದಗೆಡಿಸುವ ಯತ್ನ ಸಲ್ಲದು


Team Udayavani, Mar 16, 2022, 6:00 AM IST

ಶೈಕ್ಷಣಿಕ ವಾತಾವರಣ ಹದಗೆಡಿಸುವ ಯತ್ನ ಸಲ್ಲದು

ತರಗತಿಗಳಲ್ಲಿ ವಸ್ತ್ರ ಸಂಹಿತೆ/ಸಮವಸ್ತ್ರ ಜಾರಿ ಹಾಗೂ ಹಿಜಾಬ್‌ ಸೇರಿದಂತೆ ಧಾರ್ಮಿಕ ಗುರುತಿನ ವಸ್ತ್ರಧಾರಣೆ ನಿರ್ಬಂಧ ಸಂಬಂಧ ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಇದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ತ್ರಿಸದಸ್ಯ ಪೀಠ, ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ. ಮಕ್ಕಳಲ್ಲಿ ಸಮಾನತೆಯ ಭಾವವನ್ನು ಬಿತ್ತಲೆಂದೇ ಸಮವಸ್ತ್ರದ ಪರಿಕಲ್ಪನೆ ಮೂಡಿಬಂದಿದೆ ಎಂದಿದೆ.

ಈ ವರ್ಷದ ಆದಿಯಲ್ಲಿ ಉಡುಪಿ ಸರಕಾರಿ ಕಾಲೇಜಿನಲ್ಲಿ ಹಿಜಾಬ್‌ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ತರಗತಿ ಪ್ರವೇಶವನ್ನು ನಿರ್ಬಂಧಿಸಿತ್ತು. ಆ ಬಳಿಕ ಪ್ರಕರಣ ತಾರಕಕ್ಕೇರಿತ್ತು. ಹಲವು ಜಿಲ್ಲೆಗಳಲ್ಲಿ ಇದೇ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ತರಗತಿಗೆ ಹಾಜರಾಗಲು ಪ್ರಯತ್ನಿಸಿದಾಗ, ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರಲು ಯತ್ನಿಸಿದರು. ಈ ಬೆಳವಣಿಗೆ ರಾಜ್ಯದಲ್ಲಿ ಕೊಂಚ ಅಶಾಂತಿಯ ವಾತಾವರಣವನ್ನು ಸೃಷ್ಟಿಸಿತು. ಸರಕಾರವೂ ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿತು. ಇದನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಇತರರು ಹೈಕೋರ್ಟ್‌ಗೆ ಅರ್ಜಿಗಳನ್ನು ಸಲ್ಲಿಸಿದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ತ್ರಿಸದಸ್ಯ ಪೀಠ ಫೆ.25ರಂದು ತೀರ್ಪನ್ನು ಕಾಯ್ದಿರಿಸಿತ್ತು. ಮಂಗಳವಾರ ತೀರ್ಪನ್ನು ಪ್ರಕಟಿಸಿದ ನ್ಯಾಯಪೀಠವು, ಹಿಜಾಬ್‌ ಧಾರಣೆ ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆ ಅಲ್ಲವಾಗಿದ್ದು ಶಾಲಾ ಸಮವಸ್ತ್ರದ ಕುರಿತಂತೆ ಆದೇಶ ಹೊರಡಿಸಲು ಸರಕಾರ ಮತ್ತು ಶಾಲಾಡಳಿತ ಮಂಡಳಿಗಳಿಗೆ ಪೂರ್ಣ ಅಧಿಕಾರವಿದೆ ಎಂದಿದೆ.

ತೀರ್ಪು ಹೊರಬೀಳುತ್ತಿದ್ದಂತೆಯೇ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತ ವಾಗತೊಡಗಿವೆ. ಅರ್ಜಿದಾರರಲ್ಲಿ ಕೆಲವರು ಸುಪ್ರೀಂ ಕೋರ್ಟ್‌ಗೆ ಮೇ ಲ್ಮನವಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್‌ ಅಭಿಪ್ರಾಯ ನೀಡುವವರೆಗೆ ವಿವಾದಕ್ಕಿಂತ ಮೊದಲಿದ್ದ ಶಾಂತಿಯುತ ಶೈಕ್ಷಣಿಕ ವಾತಾವರಣವನ್ನು ಮರು ಸ್ಥಾಪಿಸಿ ಎಲ್ಲ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಕಾಪಾಡುವುದು ಸರಕಾರ ಸೇರಿದಂತೆ ಎಲ್ಲರ ಕರ್ತವ್ಯವೂ ಸಹ. ಎಲ್ಲ ಸಂಘಟನೆಗಳು, ಸಮುದಾಯದ ಮುಖಂಡರೂ ಈ ವಿಷಯವನ್ನು ಪ್ರತಿಷ್ಠೆಯಾಗಿಸಿಕೊಳ್ಳದೆ ಜವಾಬ್ದಾರಿ ಮೆರೆಯಬೇಕು.

ಈಗ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ವಾರ್ಷಿಕ ಪರೀಕ್ಷೆಗಳು ಆರಂಭಗೊಂಡಿವೆ. ಈ ಹಂತದಲ್ಲಿನ ಯಾವುದೇ ನಡೆ ಮಕ್ಕಳು,ಪೋಷಕರಲ್ಲಿ ಗೊಂದಲ, ಆತಂಕ ಸೃಷ್ಟಿಸುವಂತಿರಬಾರದು. ಪೋಷಕರು ಹಾಗೂ ವಿದ್ಯಾರ್ಥಿಗಳು ಶೈಕ್ಷಣಿಕ ವಾತಾವರಣ ಹದಗೆಡಿಸುವ ಯಾವುದೇ ಪ್ರಸ್ತಾವವನ್ನೂ ಬೆಂಬಲಿಸಬಾರದು. ಇದುವೇ ವಿವಾದವನ್ನು ಜೀವಂತವಾಗಿರಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುವವರಿಗೆ ಕಲಿಸ ಬಹುದಾದ ಪಾಠ.

ಸರಕಾರವೂ ವಿಷಯ ನ್ಯಾಯಾಲಯದಲ್ಲಿದೆ ಎಂಬ ಕಾರಣಕ್ಕೆ ತರಗತಿ ಗಳನ್ನು ವಜಾಗೊಳಿಸುವ, ಪರೀಕ್ಷೆಗಳನ್ನು ಮುಂದೂಡುವ ತೀರ್ಮಾನಕ್ಕೆ ಬರಬಾರದು. ಇಂಥ ಪರಿಸ್ಥಿತಿಗೆ ಯಾವುದೇ ಸಮುದಾಯವಾಗಲಿ, ಸಂಘಟನೆಯಾಗಲಿ ಆಸ್ಪದ ನೀಡಬಾರದು. ತಾಳ್ಮೆಯಿಂದ ವರ್ತಿಸುವುದು ನಮ್ಮದೇ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಪೂರಕವಾದ ನಡೆ. ಹಾಗಾಗಿ ಈ ಗುರುತರ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುವುದೇ ಎಲ್ಲರ ಮುಂದಿರುವ ಸದ್ಯದ ಮಧ್ಯಮ ಮಾರ್ಗ.

ಟಾಪ್ ನ್ಯೂಸ್

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

PM-yojana

Education: ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಬಡ ಪ್ರತಿಭಾನ್ವಿತರಿಗೆ ವರದಾನ

supreme-Court

Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ

Canada

Canada Temple Attack: ಕೆನಡಾ ದೇಗುಲ ದಾಳಿ: ಜಾಗತಿಕ ವಿರೋಧ ಪ್ರತಿಧ್ವನಿಸಲಿ

Flight

Hoax Call: ಹುಸಿ ಬಾಂಬ್‌ ಬೆದರಿಕೆ ಮರುಕಳಿಸದಿರಲಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.