Deepfake ವಿಚಾರ ಶೀಘ್ರ ನಿಯಮ ರೂಪಿತವಾಗಲಿ


Team Udayavani, Nov 24, 2023, 5:00 AM IST

cyber crime

ಪ್ರಸಕ್ತ ತಂತ್ರಜ್ಞಾನ ಯುಗದಲ್ಲಿ ಡೀಪ್‌ಫೇಕ್‌ ಅಥವಾ ನಕಲಿ ಮುಖ ಸೃಷ್ಟಿ ಎಂಬುದು ಸಮಸ್ಯೆಯಾಗಿ ಮಾರ್ಪಟ್ಟಿದ್ದು, ಇದು ಆತಂಕಕ್ಕೂ ಕಾರಣವಾಗಿದೆ. ಇತ್ತೀಚೆಗಷ್ಟೇ ಕರ್ನಾಟಕ ಮೂಲದ ನಟಿ ರಶ್ಮಿಕಾ ಮಂದಣ್ಣ ಅವರ ನಕಲು ವೇಷಧಾರಿಯಾಗಿ ಬೇರೊಬ್ಬಳು ಯುವತಿ ಕಾಣಿಸಿಕೊಂಡಿದ್ದು, ಇದು ಭಾರೀ ವಿವಾದಕ್ಕೂ ಕಾರಣವಾಗಿತ್ತು. ಇದಾದ ಬಳಿಕ ಕತ್ರಿನಾ ಕೈಫ್ ಮತ್ತು ಕಾಜೋಲ್‌ ಮತ್ತು ಸಾರಾ ತೆಂಡುಲ್ಕರ್‌ ಕೂಡ ಈ ಡೀಪ್‌ಫೇಕ್‌ ತಂತ್ರಜ್ಞಾನದಲ್ಲಿ ಸಂತ್ರಸ್ತರಾಗಿದ್ದನ್ನು ಹಂಚಿಕೊಂಡಿದ್ದರು. ಇದರ ಬೆನ್ನಲ್ಲಿಯೇ ಕೇಂದ್ರ ಸರಕಾರ ಎಐ ಆಧರಿತ ಡೀಪ್‌ಫೇಕ್‌ ತಂತ್ರಜ್ಞಾನಕ್ಕೆ ನಿಯಂತ್ರಣ ಹೇರಲು ಮುಂದಾಗಿದ್ದು, ಗುರುವಾರ ಸಾಮಾಜಿಕ ಜಾಲ ಕಂಪೆನಿಗಳ ಪ್ರತಿನಿಧಿಗಳ ಜತೆಗೆ ಮಾತುಕತೆಯನ್ನೂ ನಡೆಸಿದೆ.

ತಂತ್ರಜ್ಞಾನ ಮುಂದುವರಿದಂತೆ ಅದರಿಂದ ಉಂಟಾಗುವ ಅಪಾಯಗಳೂ ಹೆಚ್ಚಾಗುತ್ತವೆ. ಪ್ರತೀ ತಂತ್ರಜ್ಞಾನದ ಅನ್ವೇಷಣೆ ವೇಳೆಯಲ್ಲಿ ಇಂಥ ಆತಂಕಗಳು ಎದುರಾಗಿ ಅದಕ್ಕೊಂದು ಪರಿಹಾರ ಕಂಡುಕೊಳ್ಳುವುದು ವಾಡಿಕೆಯಾಗಿದೆ. ಆದರೆ ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್‌ ತಂತ್ರಜ್ಞಾನ ಬೆಳವಣಿಗೆಯಾದ ಮೇಲೆ ಯಾರ ನಿಯಂತ್ರಣಕ್ಕೂ ಸಿಗದ ರೀತಿಯಲ್ಲಿ ಇದು ಮುಂದುವರಿದು ಬಿಟ್ಟಿದೆ. ಅದರಲ್ಲೂ ಪ್ರತಿಯೊಬ್ಬರ ಕೈಯಲ್ಲಿ ಸ್ಮಾರ್ಟ್‌ ಫೋನ್‌, ಅದಕ್ಕೆ ತಕ್ಕಂತೆ ಅಂತರ್ಜಾಲ ವ್ಯವಸ್ಥೆಯೂ ಬೆಳೆದಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಡೀಪ್‌ಫೇಕ್‌ ಅಥವಾ ಮುಖ ನಕಲು ಮಾಡುವಂಥ ಅಸಂಖ್ಯಾತ ಆ್ಯಪ್‌ಗಳೂ ಇವೆ. ಇಲ್ಲಿ ಯಾರ ದೇಹಕ್ಕೆ, ಬೇರೆಯವರ ಮುಖವನ್ನು ಆರಾಮವಾಗಿ ಜೋಡಿಸಬಹುದು.

ಇಂಥ ಅಪಾಯವನ್ನು ಕೇವಲ ಬಾಲಿವುಡ್‌ ಗಣ್ಯರಷ್ಟೇ ಅಲ್ಲ, ಸ್ವತ ಪ್ರಧಾನಿ ನರೇಂದ್ರ ಮೋದಿಯವರೂ ಹೇಳುವ ಮೂಲಕ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಸಿದ್ದರು. ತಮ್ಮ ಧ್ವನಿಯನ್ನು ನಕಲು ಮಾಡಿ ಹಾಡೊಂದನ್ನು ಸಿದ್ಧ ಮಾಡಿಸಿ, ಸಾಮಾಜಿಕ ಜಾಲ ತಾಣದಲ್ಲಿ ಹರಡಿದ್ದನ್ನು ಹೇಳಿದ್ದರು. ಅಲ್ಲದೆ ಬುಧವಾರದ ಜಿ20 ವರ್ಚುವಲ್‌ ಕಾರ್ಯಕ್ರಮದಲ್ಲೂ ಎಐನ ಅಪಾಯದ ಬಗ್ಗೆ ಜಾಗತಿಕ ನಾಯಕರ ಜತೆ ಚರ್ಚೆ ಮಾಡಿದ್ದರು.
ಇಂಥ ತಂತ್ರಜ್ಞಾನಗಳು ಪ್ರಧಾನಮಂತ್ರಿಯಂಥ ಹುದ್ದೆಯಲ್ಲಿ ಇರುವವರನ್ನೂ ಸಂತ್ರಸ್ತರನ್ನಾಗಿ ಮಾಡುತ್ತವೆ ಎಂದರೆ ಅಪಾಯದ ಅರಿವು ಎಲ್ಲರಿಗೂ ಮೂಡಲೇ ಬೇಕು. ಹೀಗಾಗಿ ಕೇಂದ್ರ ಸರಕಾರ ಇವುಗಳ ನಿಯಂತ್ರಣ ನಿಟ್ಟಿನಲ್ಲಿ ಗಟ್ಟಿ ಹೆಜ್ಜೆಯನ್ನು ಇಟ್ಟಿದೆ. ಇನ್ನು 10 ದಿನಗಳಲ್ಲಿ ನಿಯಂತ್ರಣ ನಿಯಮ ಜಾರಿಗೆ ತರುವುದಾಗಿ ಸ್ವತಃ ಕೇಂದ್ರದ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿ‌ನಿ ವೈಷ್ಣವ್‌ ಅವರೇ ಹೇಳಿದ್ದಾರೆ. ಅಲ್ಲದೆ ಇವುಗಳನ್ನು ಗುರುತಿಸಿ, ತೆಗೆಯುವಂಥ ತಂತ್ರಜ್ಞಾನವನ್ನು ರೂಪಿಸಿಕೊಳ್ಳಲು ಸಾಮಾಜಿಕ ಜಾಲ ಸಂಸ್ಥೆಗಳಿಗೂ ಹೇಳಿದ್ದಾರೆ.
ಏನೇ ಆಗಲಿ, ಇಂಥ ತಂತ್ರಜ್ಞಾನ ಬಳಸಿ ಬೇರೊಬ್ಬರ ವ್ಯಕ್ತಿತ್ವ ಹಾಳು ಮಾಡುವಂಥವರಿಗೆ ಕಠಿನ ಶಿಕ್ಷೆಯಾಗಬೇಕು. ಯಾರೊಬ್ಬರೂ ಡೀಪ್‌ಫೇಕ್‌ನಂಥ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಳ್ಳದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಾಮೂಹಿಕವಾಗಿ ಚಿಂತನೆ ನಡೆಸಬೇಕಾದದ್ದು ಇಂದಿನ ದಿನದಲ್ಲಿ ಅತ್ಯಗತ್ಯವಾಗಿದೆ.

ಟಾಪ್ ನ್ಯೂಸ್

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Supreme Court: ವರದಕ್ಷಿಣೆ ತಡೆ ಕಾಯ್ದೆ ದುರ್ಬಳಕೆ ಸುಪ್ರೀಂ ಸಲಹೆಗಳು ಸಮುಚಿತ

Supreme Court: ವರದಕ್ಷಿಣೆ ತಡೆ ಕಾಯ್ದೆ ದುರ್ಬಳಕೆ ಸುಪ್ರೀಂ ಸಲಹೆಗಳು ಸಮುಚಿತ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.