ಕೋವಿಡ್ ನ ಕಠಿನ ಸವಾಲು ಸರಕಾರಗಳ ಶ್ರಮ ಫ‌ಲಕೊಡಲಿ

Team Udayavani, May 30, 2020, 8:47 AM IST

Narendra-Modi-5

ಇಡೀ ದೇಶ ಹಿಂದೆಂದೂ ಕಂಡರಿಯದಂಥ ಸಂಕಷ್ಟದಲ್ಲಿ ಹೆಜ್ಜೆ ಹಾಕುತ್ತಿರುವ ಹೊತ್ತಲ್ಲೇ ಮೋದಿ 2.0 ಸರಕಾರ ಒಂದು ವರ್ಷ ಪೂರೈಸಿದೆ. ನಿಸ್ಸಂಶಯವಾಗಿಯೂ ಇದು ಮೋದಿ ಸರಕಾರ ಎದುರಿಸುತ್ತಿರುವ ಅತಿ ಕ್ಲಿಷ್ಟ ಗಳಿಗೆಯೇ ಸರಿ.

ಈಗಾಗಲೇ ದೇಶದಲ್ಲಿ ಸೋಂಕಿತರ ಸಂಖ್ಯೆ 1.68 ಲಕ್ಷ ದಾಟಿದೆ. ಮುಂದಿನ ತಿಂಗಳುಗಳಲ್ಲಿ ರೋಗ ಉತ್ತುಂಗಕ್ಕೇರಲಿದೆ ಎಂದು ಭಯಾನಕ ಭವಿಷ್ಯ ನುಡಿಯಲಾಗುತ್ತಿದೆ. ಈ ಸಂಗತಿಯು  ಆತಂಕ ಹೆಚ್ಚಲು ಕಾರಣವಾಗಿದೆ.

ಏಕೆಂದರೆ ಕೋವಿಡ್ ದೇಶವಾಸಿಗಳ ದೈಹಿಕ ಸ್ವಾಸ್ಥ್ಯವಷ್ಟೇ ಅಲ್ಲದೇ, ದೇಶದ ಆರ್ಥಿಕ ಸ್ವಾಸ್ಥ್ಯಕ್ಕೂ ಹಾನಿಮಾಡುತ್ತಿದೆ. ಈಗಾಗಲೇ ಲಾಕ್‌ಡೌನ್‌ ಪರಿಣಾಮದಿಂದಾಗಿ, ದೇಶದ ಆರ್ಥಿಕತೆಗೆ 30.3 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎನ್ನಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಏನಾಗಲಿದೆಯೊ ಎಂಬ ಆತಂಕವೂ ಜನಸಾಮಾನ್ಯರಲ್ಲಿ ಮಡುಗಟ್ಟಿದೆ.

ದೇಶವೊಂದರ ನೈಜ ಶಕ್ತಿ – ಸಾಮರ್ಥ್ಯದ ಅನಾವರಣವಾಗುವುದು ಅದು ಇನ್ನೊಂದು ದೇಶದ ವಿರುದ್ಧ ಗೆಲ್ಲುವ ಯುದ್ಧಗಳಲ್ಲಲ್ಲ, ಬದಲಾಗಿ ಅದು ಮಹಾಮಾರಿಗಳನ್ನು ಎದುರಿಸುವ ರೀತಿಯಲ್ಲಿ ಎನ್ನುವ ಮಾತಿದೆ, ಈ ಮಾತು ಅಕ್ಷರಶಃ ಸತ್ಯ.

ಕೋವಿಡ್ ಎಂಬ ಪುಟ್ಟ ವೈರಸ್‌ ಇಂದು ದೇಶ ಗಳನ್ನು ನಾನಾ ಆಯಾಮಗಳಿಂದ ಪರೀಕ್ಷಿಸುತ್ತಿದೆ. ತನ್ನ ಸೇನೆ ಹಾಗೂ ಆರ್ಥಿಕ ಶಕ್ತಿಯಿಂದ ದೊಡ್ಡಣ್ಣ ಎಂದು ಕರೆಸಿಕೊಳ್ಳುವ ಅಮೆರಿಕ, ಬ್ರಿಟನ್‌ನ ದಡ್ಡತನವನ್ನು ಕೋವಿಡ್ ಅನಾವರಣಗೊಳಿಸಿದೆ.

ಹಾಗೆಂದು, ಸಂತ್ರಸ್ತ ರಾಷ್ಟ್ರಗಳ್ಯಾವುವು ಕೈಕಟ್ಟಿ ಕುಳಿತಿಲ್ಲ ಎನ್ನುವುದನ್ನು ಒಪ್ಪಿಕೊಳ್ಳಲೇಬೇಕು. ಇಂದು ಬಹುತೇಕ ರಾಷ್ಟ್ರಗಳು ಕೋವಿಡ್ ವಿರುದ್ಧ ಲಸಿಕೆ ಸಂಶೋಧನೆಯಲ್ಲಿ ತೊಡಗಿವೆ. ಒಂದಕ್ಕೊಂದು ತಮಗಾದ ಮಟ್ಟಿಗೆ ಸಹಾಯ ಮಾಡುತ್ತಿವೆ.

ಗಮನಾರ್ಹ ಸಂಗತಿಯೆಂದರೆ ಭಾರತ ಕೋವಿಡ್ ವಿರುದ್ಧದ ಹೋರಾಟದಲ್ಲಿ ಶ್ಲಾಘನೀಯ ಹೆಜ್ಜೆಯನ್ನೇ ಇಡುತ್ತಿದೆ. ಕಡಿಮೆ ಜನಸಂಖ್ಯೆಯಿರುವ ಸಿರಿವಂತ ದೇಶಗಳು ನಿಷ್ಕಾಳಜಿ ಮಾಡಿದ ವೇಳೆಯಲ್ಲೇ ಭಾರತದಂಥ 137 ಕೋಟಿ ಜನಸಂಖ್ಯೆಯ ರಾಷ್ಟ್ರದಲ್ಲಿ ಸರಕಾರ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿಮಾಡಿತು.

ನಮ್ಮಲ್ಲಿನ ಅಪಾರ ಜನಸಂಖ್ಯೆ, ದುರ್ಬಲ ಆರೋಗ್ಯ ವ್ಯವಸ್ಥೆಯನ್ನು ಪರಿಗಣಿಸಿದರೆ, ಲಾಕ್‌ಡೌನ್‌ ಜಾರಿಗೊಳಿಸದೇ ಅನ್ಯ ದಾರಿ ಇರಲಿಲ್ಲ. ಇದರಿಂದಾಗಿ ದೇಶವಾಸಿಗಳು, ಅದರಲ್ಲೂ ಅನ್ಯ ರಾಜ್ಯಗಳಲ್ಲಿ, ಊರುಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು, ಬಡವರು ಪಟ್ಟ ಪಡಿಪಾಟಲು ಕಡಿಮೆಯೇನಿಲ್ಲ. ಆದರೂ ಮೇ ತಿಂಗಳ ಆರಂಭದಿಂದ ಅನ್ಯ ರಾಜ್ಯಗಳಲ್ಲಿ ಸಿಲುಕಿದವರನ್ನು ಅವರವರ ಊರುಗಳಿಗೆ ತಲುಪಿಸಲಾಗುತ್ತಿರುವುದು ಒಳ್ಳೆಯ ನಡೆ.

ಆದರೆ ಸವಾಲು ಇನ್ನೂ ಇದೆ. ಕೋವಿಡ್ ನಿಂದಾಗಿ ದುರ್ಬಲವಾಗಿರುವ ಆರ್ಥಿಕತೆಗೆ ವೇಗ ಕೊಡುವುದು ಈಗ ಅನಿವಾರ್ಯವಾಗಿದ್ದು, ಜನರ ಆರೋಗ್ಯವನ್ನು ಕಾಪಾಡುತ್ತಲೇ, ದೇಶದ ಆರ್ಥಿಕ ಸ್ವಾಸ್ಥ್ಯವನ್ನು ಸುಧಾರಿಸುವ ಸವಾಲು ರಾಜ್ಯಗಳು ಹಾಗೂ ಕೇಂದ್ರ ಸರಕಾರದ ಎದುರಿದೆ.

ಈಗಾಗಲೇ ಈ ನಿಟ್ಟಿನಲ್ಲಿ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜನ್ನು ಕೇಂದ್ರ ಸರಕಾರ ಪ್ರಕಟಿಸಿದೆ. ದೇಶವನ್ನು ಸ್ವಾಭಿಮಾನ ರಾಷ್ಟ್ರವಾಗಿ ಕಟ್ಟಲು ದೇಶವಾಸಿಗಳಲ್ಲಿ ಪ್ರಧಾನಿ ಮೋದಿಯವರು ಮನವಿ ಮಾಡಿದ್ದಾರೆ. ಈ ‘ಆತ್ಮನಿರ್ಭರ’ ಹೋರಾಟದಲ್ಲಿ ಶೀಘ್ರವೇ ಗೆಲುವು ಸಿಗಲಿ.

ಟಾಪ್ ನ್ಯೂಸ್

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.