Editorial: ಸಿಇಟಿ ಅಕ್ರಮ ಸೀಟ್‌ ಬ್ಲಾಕಿಂಗ್‌ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಲಿ


Team Udayavani, Dec 4, 2024, 12:56 PM IST

1

ಕರ್ನಾಟಕಕ್ಕೆ ವಿಶಿಷ್ಟವಾಗಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ಸೀಟ್‌ ಬ್ಲಾಕಿಂಗ್‌ ಹಗರಣವನ್ನು ಪೊಲೀಸರು ಬಯಲಿಗೆಳೆದಿದ್ದು, ಇದು ವರೆಗೆ ಹತ್ತು ಮಂದಿಯನ್ನು ಬಂಧಿಸಿದ್ದಾರೆ. ಸಾಮಾನ್ಯ ಪ್ರವೇಶ ಪರೀಕ್ಷೆಯ ಬಳಿಕ ಕೌನ್ಸೆಲಿಂಗ್‌ ವೇಳೆ ವಿವಿಧ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಸೀಟ್‌ಗಳನ್ನು ಪಡೆದುಕೊಂಡ ಹಲವಾರು ಮಂದಿ ಕಾಲೇಜುಗಳಿಗೆ ಹಾಜರಾ ಗುತ್ತಿಲ್ಲವೇಕೆ ಎಂಬುದರ ಜಾಡು ಹಿಡಿದು ಹೊರಟಾಗ ಈ ದಂಧೆ ಪತ್ತೆಯಾಗಿದೆ. ಅರ್ಹ ವಿದ್ಯಾರ್ಥಿಗಳಿಗೆ ಸೀಟುಗಳು ಸಿಗದಂತೆ ಮಾಡುವ ಮತ್ತು ಖಾಸಗಿ ಕಾಲೇಜುಗಳಿಗೆ ಅಕ್ರಮವಾಗಿ ಲಾಭ ಮಾಡಿಕೊಳ್ಳಲು ಮಾರ್ಗ ವಾಗಿರುವ ಈ ದಂಧೆ ಮಟ್ಟಹಾಕಿ, ಅಪರಾಧಿಗಳಿಗೆ ಕಠಿನ ಶಿಕ್ಷೆ ವಿಧಿಸಬೇಕು. ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯ ಉಂಟು ಮಾಡುವ ಇಂತಹ ದಂಧೆಗಳು ಇಲ್ಲಿಗೇ ಕೊನೆಯಾಗಬೇಕು.

ಸಿಇಟಿಯಲ್ಲಿ ಸೀಟ್‌ ಬ್ಲಾಕಿಂಗ್‌ ಹಗರಣದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕಾರಿಗಳು ಮತ್ತು ಸಿಬಂದಿಯೇ ಭಾಗಿಯಾಗಿರು­ವುದು ಆಘಾತಕಾರಿ. ಖಾಸಗಿ ಕಾಲೇಜುಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ಈ ಹಗರಣ ನಡೆದಿರುವುದು ಮೇಲ್ನೋಟಕ್ಕೆ ತಿಳಿದುಬ­ರುತ್ತದೆ. ಬಂಧಿತರ ಪೈಕಿ ಕೆಲವರು ಹಲವಾರು ವರ್ಷಗಳಿಂದ ಕೆಇಎಯಲ್ಲಿ­ಯೇ ಕೆಲಸ ಮಾಡುತ್ತಿದ್ದಾರೆ ಎಂಬುದು ತಿಳಿದುಬಂದಿದ್ದು, ಈ ಹಿಂದಿನ ವರ್ಷ ಗಳಲ್ಲಿ ಕೂಡ ಇಂತಹುದೇ ದಂಧೆ ನಡೆದಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಬಂಧಿತರನ್ನು ಕೂಲಂಕಷ ವಿಚಾರಣೆಗೆ ಒಳಪಡಿಸಿ ಎಷ್ಟು ವರ್ಷಗಳಿಂದ ಇದು ನಡೆಯುತ್ತಿದೆ ಎಂಬುದರ ಆಮೂಲಾಗ್ರ ಪರಿಶೀಲನೆಯಾ­ಗಬೇಕಾಗಿದೆ. ಈ ಹಗರಣದಲ್ಲಿ ಭಾಗಿಯಾಗಿರುವ ಖಾಸಗಿ ಕಾಲೇಜು ಗಳನ್ನು ಅಥವಾ ಭಾಗಿಯಾಗಿರುವವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡುವಂತಹ ಕಠಿನ ಕ್ರಮವನ್ನೂ ಸರಕಾರ ಮತ್ತು ಉನ್ನತ ಶಿಕ್ಷಣ ಇಲಾಖೆ ಪರಿಶೀಲಿಸಬಹುದಾಗಿದೆ.

ಕೆಲವು ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಮಂದಿ ಸೀಟು ಅಗತ್ಯ ವಿಲ್ಲದ ಅಭ್ಯರ್ಥಿಗಳೊಂದಿಗೆ ಸೇರಿಕೊಂಡು ಕೊನೆಯ ಸುತ್ತಿನಲ್ಲಿ ಸೀಟು ಹಂಚಿಕೆ ಪಡೆಯುತ್ತಾರೆ. ಬಳಿಕ ಕಾಲೇಜಿಗೆ ಸೇರ್ಪಡೆಯಾಗದಂತೆ ನೋಡಿ ಕೊಳ್ಳುತ್ತಾರೆ. ಒಂದೇ ಐಪಿ ವಿಳಾಸ ಬಳಸಿ ಸೀಟ್‌ ಬ್ಲಾಕಿಂಗ್‌ ಮಾಡಲಾ­ಗುತ್ತದೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಮುಖ್ಯವಾಗಿ ಅಭ್ಯರ್ಥಿಗಳ ಲಾಗಿನ್‌ ಪಾಸ್‌ವರ್ಡ್‌, ಸೀಕ್ರೆಟ್‌ ಕೀಯನ್ನು ದುರುಳರು ಅನಧಿಕೃತವಾಗಿ ಪಡೆದುಕೊಂಡು ಅವರ ಪರವಾಗಿ ಆಪ್ಶನ್‌ ಎಂಟ್ರಿ ನಡೆಸುತ್ತಾರೆ. ಈ ಮೂಲಕ ಕಾಲೇಜುಗಳಿಗೆ ಲಾಭ ಮಾಡಿಕೊಡುತ್ತಿದ್ದಾರೆ. ಈ ಒಟ್ಟೂ ದಂಧೆಯಲ್ಲಿ ಖಾಸಗಿ ಕಾಲೇಜುಗಳಿಗೆ ಲಾಭವಾಗುವುದು ಒಂದೆಡೆಯಾದರೆ ಅರ್ಹ ಅಭ್ಯರ್ಥಿಗಳು ಎಂಜಿನಿಯರಿಂಗ್‌ ಸೀಟ್‌ಗಳಿಂದ ವಂಚಿತರಾಗುತ್ತಿದ್ದಾರೆ.

ಸಿಇಟಿಯಲ್ಲಿ ಸೀಟು ಹಂಚಿಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಯುವಂಥದ್ದು. ಇದಕ್ಕೆ ಲಾಗಿನ್‌ ಪಾಸ್‌ವರ್ಡ್‌, ಸೀಕ್ರೆಟ್‌ ಕೀ ಇತ್ಯಾದಿ ಭದ್ರತಾ ಕ್ರಮಗಳು ಇದ್ದೇ ಇವೆ. ಪರೀಕ್ಷಾ ಪ್ರಾಧಿಕಾರದ ಒಳಗಿ ನವರು ಭಾಗಿ ಯಾಗದೆ ಇದರಲ್ಲಿ ಅಕ್ರಮ ವ್ಯವಹಾರ ನಡೆಸುವುದು ಅಸಾಧ್ಯ. ಹೀಗಾಗಿ ಈ ಅಕ್ರಮ ದಂಧೆಯ ಬಾಹುಗಳು ಎಷ್ಟು ಆಳಕ್ಕೆ ಚಾಚಿವೆ ಎಂಬುದನ್ನು ಪೊಲೀಸರು ಆಮೂಲಾಗ್ರ ತನಿಖೆಗೆ ಒಳಪಡಿಸಬೇಕು. ಶಿಕ್ಷಣವು ಕೂಡ ಒಂದು ವ್ಯವಹಾರವಾಗಿ ಮಾರ್ಪಾಟಾದಾಗ ಇಂತಹ ದಂಧೆಗಳು ಹುಟ್ಟಿಕೊಳ್ಳುತ್ತವೆ. ಅಂತಿಮವಾಗಿ ಇದರಿಂದ ಅನ್ಯಾಯಕ್ಕೆ ಒಳಗಾಗುವವರು ವಿದ್ಯಾರ್ಥಿಗಳು ಎಂಬುದನ್ನು ಮರೆಯಬಾರದು. ಇದು ಆಗಬಾರದು ಎಂದಾದರೆ ಸರಕಾರ, ಶಿಕ್ಷಣ ಇಲಾಖೆ ಮತ್ತು ಪೊಲೀಸರು ಇಂಥವುಗಳ ನಿಗ್ರಹಕ್ಕಾಗಿ ಕಠಿನ ಕ್ರಮಗಳನ್ನು, ನಿಲುವುಗಳನ್ನು ತೆಗೆದುಕೊಳ್ಳಬೇಕು.

ಟಾಪ್ ನ್ಯೂಸ್

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

14

Editorial: ಕಾಮಗಾರಿಯ ವಿಳಂಬ ಸಲ್ಲದು

8

Editorial: ಕುಂದಾಪುರದ ಹೆದ್ದಾರಿ ಸಮಸ್ಯೆ ಸರಿಪಡಿಸಿ

6

Editorial: ಸಂಚಾರ, ಪಾರ್ಕಿಂಗ್‌; ಸಮನ್ವಯದ ಕ್ರಮ ಆಗಬೇಕು

1

Editorial: ಕಾಳ್ಗಿಚ್ಚು ಸಂಭವಿಸುವ ಮುನ್ನವೇ ಇರಲಿ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.