ವಿಶ್ವ ಆರೋಗ್ಯ ಸಂಸ್ಥೆಯ ಮೇಲೆ ಅಮೆರಿಕ ಚಾಟಿ

Team Udayavani, Apr 18, 2020, 2:06 AM IST

ವಿಶ್ವ ಆರೋಗ್ಯ ಸಂಸ್ಥೆಯ ಮೇಲೆ ಅಮೆರಿಕ ಚಾಟಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚೀನ ಹಾಗೂ ಅದರ ಕುಮ್ಮಕ್ಕಿನಿಂದ ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್ 19 ವೈರಸ್ ಮಹಾಮಾರಿಯ ಅಪಾಯವನ್ನು ಮುಚ್ಚಿಟ್ಟಿದ್ದರಿಂದಲೇ ಇಂದು ಪ್ರಪಂಚ ಆಪತ್ತಿಗೆ ಸಿಲುಕಿದೆ ಎಂದು ಆರಂಭದಿಂದಲೂ ಅಮೆರಿಕ ಸೇರಿದಂತೆ ಅನೇಕ ರಾಷ್ಟ್ರಗಳು ಆರೋಪಿಸುತ್ತಲೇ ಬಂದಿದ್ದವು.

ಈ ವಿಚಾರವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್‌ ಆರೋಗ್ಯ ಸಂಸ್ಥೆಯ ಮೇಲೆ ಕೆಲ ದಿನಗಳಿಂದ ಆರೋಪ ಮಾಡುತ್ತಾ ಬಂದಿದ್ದರು. ಈಗ ಟ್ರಂಪ್‌, ಕೊರೊನಾ ಸಾಂಕ್ರಾಮಿಕ ಹರಡುವಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಪಾತ್ರದ ಬಗ್ಗೆ ತನಿಖೆಯಾಗುವವರೆಗೂ ಅಮೆರಿಕ ಈ ಸಂಸ್ಥೆಗೆ ಹಣ ಸಹಾಯ ಮಾಡುವುದಿಲ್ಲ(ತಡೆಹಿಡಿದಿದ್ದಾರೆ) ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಗಮನಿಸಬೇಕಾದ ಸಂಗತಿಯೆಂದರೆ, ಆರಂಭದಿಂದಲೂ ಅಮೆರಿಕವೇ ವಿಶ್ವ ಆರೋಗ್ಯ ಸಂಸ್ಥೆಗೆ ಅತ್ಯಧಿಕ ಧನಸಹಾಯ ಮಾಡುತ್ತಾ ಬಂದಿತ್ತು. ಆದರೂ ವಿಶ್ವ ಆರೋಗ್ಯ ಸಂಸ್ಥೆ ಕಡಿಮೆ ದೇಣಿಗೆ ನೀಡುತ್ತಿದ್ದ ಚೀನ ಪರ ಇದೆ, ಅದರ ತಪ್ಪುಗಳನ್ನು ಮುಚ್ಚಿಡುತ್ತಿದೆ ಎಂಬುದು ಟ್ರಂಪ್‌ ಅವರ ಆರೋಪ.

ಆದರೆ ಈ ವೇಳೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಗೆ ಹಣ ಸಹಾಯವನ್ನು ನಿಲ್ಲಿಸುವುದು ಅಪಾಯಕಾರಿಯಾಗಿ ಪರಿಣಮಿಸಬಹುದು ಎಂದೂ ಎಚ್ಚರಿಸಲಾಗುತ್ತಿದೆ. ಮೈಕ್ರೊಸಾಫ್ಟ್ ಸ್ಥಾಪಕ ಬಿಲ್‌ಗೇಟ್ಸ್‌ ಕೂಡ ಹೀಗೆಯೇ ಎಚ್ಚರಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಅಗತ್ಯ ಹಿಂದೆಂದಿಗಿಂತಲೂ ಈಗ ಅಧಿಕವಿದೆ, ಡಬ್ಲೂಎಚ್‌ಓ ಪ್ರಯತ್ನದಿಂದಾಗಿ ಕೋವಿಡ್‌-19 ಹರಡುವಿಕೆ ತಗ್ಗುತ್ತಿದೆ ಎಂದು ಗೇಟ್ಸ್‌ ಹೇಳುತ್ತಾರೆ.

ಗಮನಿಸಬೇಕಾದ ಸಂಗತಿಯೆಂದರೆ, ಆಫ್ರಿಕನ್‌ ರಾಷ್ಟ್ರಗಳಲ್ಲಿ ಮಹಾರೋಗಗಳ ವಿರುದ್ಧ ಹೋರಾಟ ನಡೆಸಿರುವ ಗೇಟ್ಸ್‌ ಫೌಂಡೇಷನ್‌ ಕೂಡ ಪ್ರತಿವರ್ಷ ವಿಶ್ವ ಆರೋಗ್ಯ ಸಂಸ್ಥೆಗೆ ಭಾರೀ ಪ್ರಮಾಣದಲ್ಲಿ ಹಣ ಸಹಾಯ ಮಾಡುತ್ತಾ ಬಂದಿದೆ. ಒಂದಂತೂ ನಿಜ.

ಅಮೆರಿಕದಿಂದ ಹಣ ಸಹಾಯ ನಿಂತಿತು ಎಂದರೆ ನಿಸ್ಸಂಶಯವಾಗಿಯೇ ಕೋವಿಡ್ 19 ವೈರಸ್ ವಿರುದ್ಧದ ಹೋರಾಟಕ್ಕೆ ದೊಡ್ಡ ಅಡಚಣೆ ಎದುರಾಗಲಿದೆ. ಆದರೆ ಇದೇ ವೇಳೆಯಲ್ಲೇ, ವಿಶ್ವ ಆರೋಗ್ಯ ಸಂಸ್ಥೆಯಷ್ಟೇ ಅಲ್ಲದೇ, ವಿಶ್ವಸಂಸ್ಥೆಯ ವಿವಿಧ ಅಂಗಗಳಲ್ಲಿಯೂ ಚೀನದ ಅಧಿಪತ್ಯ ಅಧಿಕವಾಗುತ್ತಿದ್ದು, ಈಗಲಾದರೂ ವಿಶ್ವಸಮುದಾಯ ಒಕ್ಕೊರಲಲ್ಲಿ ಈ ಸಂಸ್ಥೆಗಳಿಗೆ ಎಚ್ಚರಿಸಲೇಬೇಕಿದೆ. ಇನ್ನು ವಿಶ್ವ ಆರೋಗ್ಯ ಸಂಸ್ಥೆ ತಿಳಿದೂ ತಿಳಿದೂ ಚೀನದ ಎಡವಟ್ಟುಗಳಿಗೆ ಪರದೆ ಎಳೆಯುವ ಕೆಲಸ ಮಾಡಿದೆಯೇ ಎನ್ನುವ ಬಗ್ಗೆಯೂ ತನಿಖೆಯಾಗಬೇಕಿದೆ.

ಇಂದು ಪ್ರಪಂಚದಾದ್ಯಂತ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ 20ಲಕ್ಷಕ್ಕೂ ಅಧಿಕವಾಗಿದೆ. 1 ಲಕ್ಷಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಈ ಸಾಂಕ್ರಾಮಿಕವನ್ನು ಸೋಲಿಸುವಂಥ ಪರಿಣಾಮಕಾರಿ ದಾರಿ ಈಗಲೂ ಗೋಚರಿಸುತ್ತಿಲ್ಲ. ಅದರಲ್ಲೂ ದೊಡ್ಡಣ್ಣ ಅಮೆರಿಕದ ಪರಿಸ್ಥಿತಿಯಂತೂ ಹೀನಾಯವಾಗಿದೆ. ಅಲ್ಲಿನ ಆರ್ಥಿಕತೆ ನೆಲಕಚ್ಚುವ ಹಂತದಲ್ಲಿದೆ. ಅಲ್ಲದೇ, ಈ ವರ್ಷದಲ್ಲಿ ಅಲ್ಲಿ ಅಧ್ಯಕ್ಷೀಯ ಚುನಾವಣೆಗಳೂ ನಡೆಯಬೇಕಿದೆ.

‘ಹೀಗಾಗಿ, ಟ್ರಂಪ್‌ ತಮ್ಮ ವೈಫ‌ಲ್ಯವನ್ನು ಮುಚ್ಚಿಕೊಳ್ಳಲು ಎಲ್ಲರತ್ತಲೂ ಬೆರಳು ತೋರಿಸುತ್ತಾ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ, ವಿಶ್ವ ಆರೋಗ್ಯ ಸಂಸ್ಥೆ-ಚೀನವನ್ನು ಕಟಕಟೆಯಲ್ಲಿ ನಿಲ್ಲಿಸುತ್ತಿದ್ದಾರೆ’ ಎನ್ನುವ ಆರೋಪವೂ ಇದೆ.

ಆದರೆ, ಈ ಜಾಗತಿಕ ಸಂಸ್ಥೆಯೇನಾದರೂ ಆರಂಭದಲ್ಲೇ ಚೀನದಲ್ಲಿನ ನಿಜ ಸ್ಥಿತಿಯನ್ನು ಅವಲೋಕಿಸಿ ಜಗತ್ತಿಗೆ ಎಚ್ಚರಿಸಿದ್ದರೆ, ಇಂದು ರೋಗ ಇಷ್ಟು ತೀವ್ರತೆ ಪಡೆಯುತ್ತಿರಲಿಲ್ಲವೇನೋ. ಸತ್ಯವೇನೆಂದರೆ, ಆರಂಭಿಕ ಕೆಲವು ತಪ್ಪುಗಳ ನಂತರ ವಿಶ್ವ ಆರೋಗ್ಯ ಸಂಸ್ಥೆ ಎಚ್ಚೆತ್ತು ಈಗ ರೋಗ ನಿಯಂತ್ರಣಕ್ಕೆ ಬಹಳ ಯತ್ನಿಸುತ್ತಿದೆ.

ಹೀಗಾಗಿ, ವಿಶ್ವ ಆರೋಗ್ಯ ಸಂಸ್ಥೆಗೆ ದೇಣಿಗೆಯನ್ನು ನಿಲ್ಲಿಸುವುದರಿಂದ ಅಮೆರಿಕಕ್ಕೆ ತಾತ್ಕಾಲಿಕವಾಗಿ ಸಿಟ್ಟು ಕಡಿಮೆಯಾಗಬಹುದೇನೋ, ಆದರೆ, ಇದರಿಂದಾಗಿ ಪ್ರಪಂಚದ ಮೇಲಂತೂ ಭಾರೀ ಒತ್ತಡ ಬೀಳಲಿದೆ. ಸದ್ಯಕ್ಕೆ ಅಮೆರಿಕ ಈ ವಿಚಾರದಲ್ಲಿ ತನ್ನ ಮನಸ್ಸು ಬದಲಿಸಿಕೊಳ್ಳುವುದು ಒಳಿತು.

ಟಾಪ್ ನ್ಯೂಸ್

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.