ಚುರುಕುಗೊಂಡ ಕುಲಪತಿ ನೇಮಕ ಅರ್ಹರಿಗೆ ಮನ್ನಣೆ ಸಿಗಲಿ

Team Udayavani, Jun 26, 2018, 9:11 AM IST

mangalore-vv.png

ಕೆಲ ವರ್ಷಗಳಿಂದ ಕರ್ನಾಟಕದ ಹಲವು ವಿವಿಗಳು ಕುಲಪತಿಗಳಿಲ್ಲದೇ ಕಳೆಗುಂದಿರುವುದು ಗಮನಿಸಿದಾಗ ಜನರಿಗೆ ನಮ್ಮ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಭ್ರಮನಿರಸನ ಉಂಟಾಗಿರಬಹುದು.  ಭಾರತದ ವಿಶ್ವ ವಿದ್ಯಾಲಯಗಳು ಜಾಗತಿಕ ವಿ.ವಿ.ಗಳ ಓಟಕ್ಕೆ ಸರಿಗೂಡಲು  ಹೆಣಗುತ್ತಿರುವುದನ್ನು ಗಮನಿಸಿದ್ದೇವೆ. ಪ್ರತಿ ವರ್ಷ ಬಿಡುಗಡೆಯಾಗುವ ವಿಶ್ವದ “ಟಾಪ್‌ 10′ ಅಥವಾ “ಟಾಪ್‌ 100′ ವಿವಿಗಳಲ್ಲಿ ಭಾರತದ  ಯಾವುದೇ ವಿಶ್ವವಿದ್ಯಾಲಯವೂ ಸ್ಥಾನಪಡೆಯುತ್ತಿಲ್ಲ. ನಮ್ಮ ರಾಜ್ಯದ ಸರ್ಕಾರಿ, “ಡೀಮ್ಡ್ ಟು ಬಿ’ ಮತ್ತು ಖಾಸಗಿ ವಿವಿಗಳೂ ಉದ್ದೇಶಿತ ಫ‌ಲಿತ ತಂದುಕೊಡುವಲ್ಲಿ ವಿಫ‌ಲವಾಗಿವೆ. ಹೀಗಾಗಲು ಕಾರಣವೇನು ಎನ್ನುವ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಹೊರಟಾಗ ಸಮಸ್ಯೆಗೆ ವಿದ್ಯಾರ್ಥಿಗಳತ್ತಲೇ ಬೆರಳು ತೋರಿಸುವುದು ತಪ್ಪು ಎಂದು ಅರಿವಾಗುತ್ತದೆ. 

ಕುಲಪತಿ ನೇಮಕಾತಿಯಲ್ಲಿ ವಿಚಾರವನ್ನೇ ನೋಡಿ. ಈ ವಿಳಂಬವು ರಾಜ್ಯದ ಶೈಕ್ಷಣಿಕ ಪ್ರಗತಿಗೆ ಅಡ್ಡಗಾಲಾಗಿದೆ. ಆದರೂ ನೂತನ ಸರ್ಕಾರ ಈ ನಿಟ್ಟಿನಲ್ಲಿ ಆಶಾದಾಯಕ ಹೆಜ್ಜೆಯಿಟ್ಟಿದೆ. ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಕುಲಪತಿ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಸಮ್ಮಿಶ್ರ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಚುರುಕುಗೊಂಡಿದೆ. ಒಂದೂವರೆ ವರ್ಷದಿಂದ ಖಾಲಿ ಇದ್ದ ಬೆಂಗಳೂರು ವಿ.ವಿ., ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಮತ್ತು ಹುಬ್ಬಳ್ಳಿಯಲ್ಲಿರುವ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಗಳ ನೇಮಕ ಪೂರ್ಣಗೊಂಡಿದೆ.

ಮೈಸೂರು ವಿ.ವಿ., ಮಂಗಳೂರು ವಿ.ವಿ.ಸೇರಿದಂತೆ ರಾಜ್ಯದ ಮೂರು ವಿಶ್ವವಿದ್ಯಾಲಯದಲ್ಲಿ ಕುಲಪತಿ ಹುದ್ದೆ ಖಾಲಿ ಇದೆ.  ಬೆಂಗಳೂರು, ಮೈಸೂರು ಮತ್ತು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಕುಲಪತಿ ನೇಮಕ ಸಂಬಂಧ ಕಾಂಗ್ರೆಸ್‌ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಸತತ ಒಂದು ವರ್ಷಗಳ ಕಾಲ ಶೀತಲ ಸಮರ ನಡೆದೇ ಇತ್ತು. ಸರ್ಕಾರದ ಅವಧಿ ಪೂರ್ಣಗೊಂಡು ಹೊಸ ಸರ್ಕಾರ ರಚನೆಯಾಗುತ್ತಿದ್ದಂತೆ ಎರಡು ವಿಶ್ವವಿದ್ಯಾಲಯಕ್ಕೆ ರಾಜ್ಯಪಾಲರು ಕುಲಪತಿಗಳ ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಆದರೆ, 2017ರ ಜನವರಿಯಲ್ಲಿ ಖಾಲಿಯಾಗಿದ್ದ ಮೈಸೂರು ವಿ.ವಿ. ಕುಲಪತಿ ಹುದ್ದೆ ಇಂದಿಗೂ ಭರ್ತಿಯಾಗಿಯೇ ಇಲ್ಲ.

ಮೈಸೂರು ವಿವಿ ಕುಲಪತಿ ಆಯ್ಕೆ ಸಂಬಂಧ ಶೋಧನಾ ಸಮಿತಿ ಹಿಂದಿನ ಸರ್ಕಾರಕ್ಕೆ ಎರಡು ಪಟ್ಟಿಯನ್ನು ಸಲ್ಲಿಸಿತ್ತು. ಆದರೆ, ಆ ಎರಡೂ ಪಟ್ಟಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದರು. ನಂತರ ಹೊಸದಾಗಿ ಶೋಧನಾ ಸಮಿತಿ ರಚಿಸುವಂತೆ ನೇರವಾಗಿ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ಪತ್ರ ಬರೆದಿದ್ದರು. ಅದರಂತೆ ಹೊಸ ಶೋಧನಾ ಸಮಿತಿ ಈಗ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಕಾಂಗ್ರೆಸ್‌ ಸರ್ಕಾರವು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯದ ವಿಧೇಯಕ-2017ಅನ್ನು ಸಿದ್ಧಪಡಿಸಿ, ಎರಡು ಸದನದಲ್ಲೂ ಒಪ್ಪಿಗೆ ಪಡೆದು, ರಾಜ್ಯಪಾಲರಿಗೆ ಸಲ್ಲಿಸಿತ್ತು. ರಾಜ್ಯಪಾಲರು ಅದಕ್ಕೆ ಇನ್ನೂ ಸಹಿ ಹಾಕಿಲ್ಲ. ಕಾರಣ, ಕುಲಪತಿ ಆಯ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಇದ್ದ ಪರಮಾಧಿಕಾರವನ್ನು ಈ ವಿಧೇಯಕದಲ್ಲಿ ಮೊಟಕುಗೊಳಿಸಲಾಗಿದೆ. ಈ ವಿಧೇಯಕದ ಚರ್ಚೆಯಿಂದಾಗಿ ಕೆಲವು ವಿವಿಯ ಕುಲಪತಿ ಆಯ್ಕೆಯು ವಿಳಂಬವಾಗಿತ್ತು.  

ಕುಲಪತಿ ನೇಮಕಾತಿಯಲ್ಲಿ ಆಗುವ ವಿಳಂಬವು ಬೋಧನೆ ಮತ್ತು ಸಂಶೋಧನೆಯಂಥ ಪ್ರಮುಖ ಸಂಗತಿಗಳ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ. ಹಿಂದೆಲ್ಲ ಕುಲಪತಿ ನೇಮಕ ವಿಚಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳಲಾಗುತ್ತಿತ್ತು. ಆದರೀಗ ಸೂಕ್ತ ಸಮಯದಲ್ಲಿ ಭರ್ತಿ ಮಾಡದೆ “ಇನ್‌-ಚಾರ್ಜ್‌’ನಂಥ ಹಂಗಾಮಿ ವ್ಯವಸ್ಥೆಯಲ್ಲೇ ಮುಂದುವರಿಸುವ ಪರಿಪಾಠವನ್ನು ಶಿಕ್ಷಣ ತಜ್ಞರು, ಮಾಜಿ ಕುಲಪತಿಗಳು ವಿರೋಧಿಸುತ್ತಲೇ ಇದ್ದಾರೆ. ನೇಮಕಾತಿಯಲ್ಲಿ ಯಾರಿಗೆ ಮೇಲುಗೈಯಾಗುತ್ತಿದೆ ಎನ್ನುವುದು ಪ್ರಶ್ನೆಯೇ ಆಗಬಾರದು. ಇಂದಿನ ಬದಲಾವಣೆಯ ಜಗತ್ತಿಗೆ ಸರಿಹೊಂದುವಂಥ ದಿಕ್ಕನ್ನು ವಿ.ವಿ.ಗಳಿಗೆ ದಯಪಾಲಿಸಬಲ್ಲ ಕುಲಪತಿಗಳ ಅಗತ್ಯವಿದೆ. ಆದ್ದರಿಂದ ಅರ್ಹರಿಗೆ ಮನ್ನಣೆ ಸಿಗಲಿ.

ಟಾಪ್ ನ್ಯೂಸ್

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-national-emblem

National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.