ಉದ್ಯೋಗ ಹುಡುಕಲು ಸರ್ಕಾರದ ನೆರವು; ಶ್ಲಾಘನೀಯ ಹೆಜ್ಜೆ

Team Udayavani, Nov 16, 2020, 6:01 AM IST

Editorial

ಸಾಂದರ್ಭಿಕ ಚಿತ್ರ

ಕೋವಿಡ್‌ ಹಾವಳಿ ಉದ್ಯೋಗ ಮಾರುಕಟ್ಟೆಯ ಮೇಲೆ ಮಾಡಿರುವ ಪ್ರಹಾರದ ತೀವ್ರತೆ ಅಷ್ಟಿಷ್ಟಲ್ಲ. ನೋಡನೋಡುತ್ತಿದ್ದಂತೆಯೇ ಕೆಲವೇ ತಿಂಗಳ ಅಂತರದಲ್ಲಿ ದೇಶದಲ್ಲಿನ ಸಾವಿರಾರು ಕಂಪೆನಿಗಳು ಆರ್ಥಿಕ ಸಂಕಷ್ಟಕ್ಕೆ ಈಡಾಗಿ ಉದ್ಯೋಗ ಕಡಿತಕ್ಕೆ ಮುಂದಾದವು, ಈಗಷ್ಟೇ ನೆಲೆಕಂಡುಕೊಳ್ಳುತ್ತಿದ್ದ ಅನೇಕ ಸ್ಟಾರ್ಟ್‌ಅಪ್‌ಗಳು ಬಾಗಿಲುಹಾಕಿದವು. ಬೆರಳೆಣಿಕೆಯ ಬೃಹತ್‌ ಕಂಪೆನಿಗಳನ್ನು ಬಿಟ್ಟರೆ, ಬಹುತೇಕ ಕಡೆ ಹೊಸ ಉದ್ಯೋಗಗಳ ನೇಮಕಾತಿಗಳಾಗುತ್ತಿಲ್ಲ. ಈ ಅನಿರೀಕ್ಷಿತ ಬಿಕ್ಕಟ್ಟು ನೌಕರಸ್ಥರಿಗಷ್ಟೇ ಅಲ್ಲದೇ, ಓದು ಮುಗಿಸಿ ಉತ್ತಮ ನೌಕರಿ ಪಡೆಯಬೇಕೆಂದು ಕನಸು ಕಾಣುತ್ತಿದ್ದ ವಿದ್ಯಾರ್ಥಿಗಳಿಗೂ ಬಹುದೊಡ್ಡ ಆತಂಕ ಎದುರಿಟ್ಟಿದೆ. ಬಹುಶಃ ಉದ್ಯೋಗದ ವಿಚಾರದಲ್ಲಿ ಈ ಪ್ರಮಾಣದ ಬೇಗುದಿ ಹಿಂದೆಂದೂ ಸೃಷ್ಟಿಯಾಗಿರಲಿಲ್ಲ ಎನಿಸುತ್ತದೆ.

ನೇಮಕಾತಿ ಪ್ರಕ್ರಿಯೆಗಳಿಗೆ ಕೋವಿಡ್‌ ಪೂರ್ವದಲ್ಲಿದ್ದಂಥ ವೇಗ ಬರುವುದಕ್ಕೆ ಇನ್ನೂ ಸಮಯ ಹಿಡಿಯಲಿದೆ ಎನ್ನುವುದು ಸತ್ಯ. ಆದರೂ ಸುದೈವವಶಾತ್‌, ಲಾಕ್‌ಡೌನ್‌ ತೆರವಿನ ನಂತರ ನಿಧಾನಕ್ಕಾಗಿಯಾದರೂ ಉದ್ಯೋಗ ಮಾರುಕಟ್ಟೆ ಚೇತರಿಸಿಕೊಳ್ಳಲಾರಂಭಿಸಿದೆ. ಹಲವು ಕಂಪನಿಗಳು ಮತ್ತೆ ನೇಮಕಾತಿಯ ದ್ವಾರಗಳನ್ನು ತೆರೆಯಲು ಮುಂದಾಗುತ್ತಿವೆ. ಆದರೆ, ಎಲ್ಲಿ ಕೆಲಸ ಲಭ್ಯವಿದೆ ಎಂಬ ಮಾಹಿತಿ ಅರ್ಹರನ್ನು ಸಕಾಲದಲ್ಲಿ ತಲುಪುವುದು, ಮಾರ್ಗದರ್ಶನ ದೊರೆಯುವುದೂ ಬಹಳ ಮುಖ್ಯ.

ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ಪಾಲಿಟೆಕ್ನಿಕ್‌ ವ್ಯಾಸಂಗ ಮಾಡಿ, ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗ ಹಾಗೂ ಉದ್ಯೋಗಾವಕಾಶದ ಮಾಹಿತಿ ಕಲ್ಪಿಸುವುದಕ್ಕಾಗಿಯೇ ಉದ್ಯೋಗ ಮಾಹಿತಿ ವಿನಿಮಯ ಯೋಜನೆ ಸಿದ್ಧಪಡಿಸಿದೆ. ಇಂಥ ಕ್ಲಿಷ್ಟ ಸಮಯದಲ್ಲಿ ಸರಕಾರದ ಈ ನಡೆ ಅತ್ಯಂತ ಶ್ಲಾಘನೀಯವಾದದ್ದು. ಎಲ್ಲಾ ರಾಜ್ಯಗಳಿಗೂ ಮಾದರಿಯಾಗುವಂಥದ್ದು. ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಮತ್ತು 2017ರ ಅನಂತರ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಮತ್ತು ಉದ್ಯೋಗದ ಮಾಹಿತಿ ನೀಡಲು ವಿದ್ಯಾರ್ಥಿ ಮಾರ್ಗದರ್ಶಕರನ್ನು ನೇಮಕ ಮಾಡಲು ಸರಕಾರ ಮುಂದಾಗಿದೆ. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ವ್ಯಾಪ್ತಿಯಲ್ಲಿ ರಚನೆಯಾಗಿರುವ ಕಾರ್ಯಪಡೆಯು ಕಾರ್ಪೋರೇಟ್‌ ಸಂಸ್ಥೆಗಳಲ್ಲಿನ ವಿವಿಧ ಉದ್ಯೋಗಾವಕಾಶಗಳನ್ನು ಪಚ್ಚೆಹಚ್ಚಿ ವಿದ್ಯಾರ್ಥಿಗಳಿಗೆ ತಲಿಪಿಸುವಂಥ ಮಹತ್ವದ ಹೆಜ್ಜೆಯನ್ನೂ ಈ ಯೋಜನೆ ಒಳಗೊಂಡಿದೆ. ಈ ಯೋಜನೆಯಲ್ಲಿನ ಬಹುಮುಖ್ಯ ಅಂಶವೆಂದರೆ, ತೇರ್ಗಡೆಯಾಗಿ ಮೂರ್ನಾಲ್ಕು ವರ್ಷ ಕಳೆದರೂ ಕಾಲೇಜಿನಿಂದಲೇ ಉದ್ಯೋಗಾವಕಾಶದ ಮಾಹಿತಿ ಅಭ್ಯರ್ಥಿಗಳಿಗೆ ತಲುಪಲಿರುವುದು.

ಮುಂದಿನ ದಿನಗಳಲ್ಲಿ ಈ ಯೋಜನೆಯ ವ್ಯಾಪ್ತಿಯನ್ನು ಪಾಲಿಟೆಕ್ನಿಕ್‌ ಕಾಲೇಜ್‌ಗಳನ್ನೂ ದಾಟಿಸಿ ಅನ್ಯ ಕೋರ್ಸುಗಳಿಗೂ ವಿಸ್ತರಿಸಬೇಕಾದ ಅಗತ್ಯವಿದೆ. ಏಕೆಂದರೆ, ಕೋವಿಡ್‌ನ‌ ಪರಿಣಾಮ ಕೇವಲ ತಂತ್ರಜ್ಞಾನ ವಲಯಕ್ಕಷ್ಟೇ ಪೆಟ್ಟು ಕೊಟ್ಟಿಲ್ಲ, ಎಲ್ಲಾ ವಲಯದ ಉದ್ಯೋಗಗಳ ಮೇಲೂ, ವಿದ್ಯಾರ್ಥಿ ವೃಂದದ ಮೇಲೂ ಅದು ಪರಿಣಾಮ ಬೀರಿದೆ. ಈ ಕಾರಣಕ್ಕಾಗಿಯೇ, ಕಾರ್ಪೋರೇಟ್‌-ಸರಕಾರಿ ಸಹಭಾಗಿತ್ವ ಮತ್ತಷ್ಟು ಹೆಚ್ಚಾಗುವಂತಾಗಲಿ. ಇನ್ನು ಖಾಸಗಿ ಶಿಕ್ಷಣ ಸಂಸ್ಥೆಗಳೂ ಸಹ, ಕಾರ್ಪೋರೇಟ್‌ ಕ್ಷೇತ್ರದೊಂದಿಗೆ ಹೆಚ್ಚಿನ ಸಂಪರ್ಕ ಸಾಧಿಸಿ, ತಮ್ಮ ವಿದ್ಯಾರ್ಥಿಗಳಿಗೆ ಅಥವಾ ತೇರ್ಗಡೆಯಾದರೂ ಉದ್ಯೋಗ ಹುಡುಕುವಲ್ಲಿ ತೊಂದರೆ ಅನುಭವಿಸುತ್ತಿರುವ ಮಾಜಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವಂಥ ನಡೆಗೆ ಮುಂದಾಗಲಿ. ಉದ್ಯೋಗ ಮಾಹಿತಿ ವಿನಿಮಯ ಯೋಜನೆ, ಶಿಕ್ಷಣದ ಎಲ್ಲ ಕ್ಷೇತ್ರಕ್ಕೂ ವಿಸ್ತರಣೆಯಾಗುವಂತಾಗಲಿ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Supreme Court: ವರದಕ್ಷಿಣೆ ತಡೆ ಕಾಯ್ದೆ ದುರ್ಬಳಕೆ ಸುಪ್ರೀಂ ಸಲಹೆಗಳು ಸಮುಚಿತ

Supreme Court: ವರದಕ್ಷಿಣೆ ತಡೆ ಕಾಯ್ದೆ ದುರ್ಬಳಕೆ ಸುಪ್ರೀಂ ಸಲಹೆಗಳು ಸಮುಚಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.