Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ


Team Udayavani, Jan 2, 2025, 9:44 AM IST

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

ರಾಜ್ಯದ ನಾಲ್ಕು ಸರಕಾರಿ ಸಾರಿಗೆ ಸಂಸ್ಥೆಗಳು ಸದ್ಯ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಈ ನಿಗಮಗಳ ಭವಿಷ್ಯ ಈಗ ಸರಕಾರದ ನಿರ್ಧಾರವನ್ನು ಅವಲಂ ಬಿಸಿದೆ. ಹೆಚ್ಚುತ್ತಿರುವ ಆರ್ಥಿಕ ಹೊರೆಯಿಂದ ಪಾರಾಗಲು ಸಾರಿಗೆ ಸಂಸ್ಥೆಗಳು ಈಗಾಗಲೇ ಸರಕಾರದ‌ ಮೊರೆ ಹೋಗಿವೆಯಾದರೂ ಸಾಲ ಖಾತರಿ ಹೊರತು ಪಡಿಸಿದಂತೆ ನಿಗಮದ ಇತರ ಬೇಡಿಕೆಗಳ ಕುರಿತಂತೆ ಸರಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಲು ಹಿಂದೇಟು ಹಾಕಿರುವುದರಿಂದಾಗಿ ನಿಗಮಗಳ ಸಂಕಷ್ಟ ಮುಂದುವರಿದಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು ಸಾಲದ ಸುಳಿಯಲ್ಲಿ ಸಿಲುಕಿದ್ದರೆ, ಅತ್ತ ಸಾರಿಗೆ ನೌಕರರು ವೇತನ ಪರಿಷ್ಕರಣೆ, ಸರಕಾರಿ ನೌಕರರಿಗೆ ನೀಡಲಾಗುತ್ತಿರುವ ವೇತನದ ಮಾದರಿಯಲ್ಲಿ ಸಮಾನ ವೇತನದ ಬೇಡಿಕೆಯನ್ನು ಮುಂದಿಟ್ಟು ಈ ನಿಗಮಗಳ ಮೇಲೆ ಒತ್ತಡ ಹೇರುತ್ತಿದ್ದಾರೆ.

ಸಾಲ, ತುಟ್ಟಿಭತ್ತೆ, ಭವಿಷ್ಯ ನಿಧಿ ಮತ್ತು ಡೀಸೆಲ್‌ ಬಾಕಿ ಸಹಿತ ನಾಲ್ಕೂ ನಿಗಮಗಳು ಒಟ್ಟು 6,330 ಕೋ. ರೂ. ಬಾಕಿ ಉಳಿಸಿಕೊಂಡಿವೆ. ಹೀಗಾಗಿ ಸರಕಾರ ಈ ನಿಗಮಗಳಿಗೆ 2,000 ಕೋ. ರೂ. ವರೆಗೆ ಸಾಲ ಪಡೆಯಲು ಖಾತರಿ ನೀಡಲು ಸಮ್ಮತಿ ಸೂಚಿಸಿದೆ. ಆದರೆ ಸಾರಿಗೆ ನೌಕರರು ಸರಕಾರಿ ನೌಕರರ ಮಾದರಿಯಲ್ಲಿ ಸಮಾನ ವೇತನ ನೀಡುವಂತೆ ಪಟ್ಟು ಹಿಡಿದಿದ್ದು, ನೌಕರರ ಸಂಘಟನೆಗಳ ಒಕ್ಕೂಟ ಪದೇಪದೆ ಮುಷ್ಕರದ ಮಾರ್ಗ ಹಿಡಿಯುವುದಾಗಿ ಎಚ್ಚರಿಕೆ ನೀಡುತ್ತಲೇ ಬಂದಿವೆ. ಈ ಹಿನ್ನೆಲೆಯಲ್ಲಿ ನಿಗಮಗಳು ಕೂಡ ಸರಕಾರದಿಂದ ಹೆಚ್ಚಿನ ನೆರವಿನ ನಿರೀಕ್ಷೆಯಲ್ಲಿವೆ.

ಸದ್ಯ ರಾಜ್ಯದಲ್ಲಿ ಸರಕಾರಿ ಸಾರಿಗೆ ಸಂಸ್ಥೆಯ ಬಸ್‌ಗಳೇ ಪ್ರಮುಖ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವುದರಿಂದ ಈ ನಿಗಮಗಳನ್ನು ಸಂಕಷ್ಟದಿಂದ ಪಾರು ಮಾಡಲು ಸರಕಾರ ತುರ್ತು ಕ್ರಮ ಕೈಗೊಳ್ಳಬೇಕಿದೆ. ಸದ್ಯದ ಸ್ಥಿತಿಯಲ್ಲಿ ಕಾರ್ಯಸಾಧ್ಯವಾಗಬಲ್ಲಂತಹ ಸಾರಿಗೆ ನೌಕರರ ಬೇಡಿಕೆ ಗಳನ್ನು ಈಡೇರಿಸುವ ಜತೆಯಲ್ಲಿ ನಿಗಮಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಸರಕಾರ ಅಗತ್ಯ ಕ್ರಮ ವಹಿಸಬೇಕು.

ಸದ್ಯಕ್ಕಂತೂ ಸಾರಿಗೆ ನಿಗಮಗಳ ಆರ್ಥಿಕ ಒಳಹರಿವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಕೆಲವು ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಬೇಕಿದೆ. ಸಾರಿಗೆ ಸಂಸ್ಥೆಗಳನ್ನು ಸಂಕಷ್ಟದಿಂದ ಪಾರು ಮಾಡಲು ಸರಕಾರ, ಪ್ರಯಾಣ ದರ ಹೆಚ್ಚಳದ ಬಗೆಗೆ ಗಂಭೀರ ಚಿಂತನೆ ನಡೆಸಿದೆ. ಆದರೆ ಪ್ರಯಾಣ ದರ ಹೆಚ್ಚಳದ ವೇಳೆ ಪ್ರಯಾಣಿಕರ ಮೇಲೆ ಹೆಚ್ಚಿನ ಹೊರೆ ಬೀಳದಂತೆ ಸರಕಾರ‌ ಎಚ್ಚರ ವಹಿಸಲೇಬೇಕು. ಇಲ್ಲವಾದಲ್ಲಿ ಸಮಸ್ಯೆ ಇನ್ನೊಂದು ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.
ಸರಕಾರಿ ಸಾರಿಗೆ ಸಂಸ್ಥೆಗಳನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸರಕಾರ ಹೆಚ್ಚಿನ ಆಸ್ಥೆ ವಹಿಸಬೇಕು. ಸಾರಿಗೆ ಸಂಸ್ಥೆಗಳು, ಸಾರಿಗೆ ನೌಕರರು ಮತ್ತು ಪ್ರಯಾಣಿಕರ ಹಿತವನ್ನು ಗಮನದಲ್ಲಿರಿಸಿಕೊಂಡು ಒಂದು ಸಮತೋಲಿತ ನಿರ್ಧಾರವನ್ನು ಸರಕಾರ ಕೈಗೊಳ್ಳಬೇಕು. ಪ್ರತೀ ಬಾರಿ ಸಂಕಷ್ಟ ಎದುರಾದಾಗಲೆಲ್ಲ ತಾತ್ಕಾಲಿಕ ಪರಿಹಾರ ಕ್ರಮಕ್ಕೇ ಸರಕಾರ ಮತ್ತು ಸಾರಿಗೆ ಸಂಸ್ಥೆಗಳು ಜೋತು ಬೀಳುತ್ತಿರುವುದರಿಂದಾಗಿ ಇಂದು ಈ ಎಲ್ಲ ಸಂಕಷ್ಟಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಈ ಬಾರಿ ಸರಕಾರ, ಸಾರಿಗೆ ಸಂಸ್ಥೆಗಳು ಮತ್ತು ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ, ಒಣಪ್ರತಿಷ್ಠೆ, ಹಠಮಾರಿ ಧೋರಣೆಯೆಲ್ಲವನ್ನು ಬದಿಗಿರಿಸಿ, ಸರಕಾರಿ ಸಾರಿಗೆ ಸಂಸ್ಥೆಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ದೂರದೃಷ್ಟಿಯಿಂದ ಕೂಡಿದ ಸುಧಾರಣಾತ್ಮಕ ನಿರ್ಧಾರವನ್ನು ಕೈಗೊಳ್ಳಬೇಕು.

ಟಾಪ್ ನ್ಯೂಸ್

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-editorial

Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ

8

Editorial: ನೈಜ ಕ್ರೀಡಾ ಸಾಧಕರಿಗೆ ಸಂದ ದೇಶದ ಅತ್ಯುನ್ನತ ಕ್ರೀಡಾ ಗೌರವ

2025; May the mantra of peace and coexistence resonate throughout the world

Editorial; ಜಗತ್ತಿನೆಲ್ಲೆಡೆ ಅನುರಣಿಸಲಿ ಶಾಂತಿ, ಸಹಬಾಳ್ವೆಯ ಮಂತ್ರ

Exam

ಕೆಪಿಎಸ್‌ಸಿ ಲೋಪಗಳಿಲ್ಲದಂತೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿ

JAmmu

Jammu-Kashmir: ಉಗ್ರರನ್ನು ಮಟ್ಟ ಹಾಕಿದ‌ ಭದ್ರತಾ ಪಡೆಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್‌

Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್‌

Devajit Saikia : ಬಿಸಿಸಿಐ ಕಾಯದರ್ಶಿ; ಸೈಕಿಯಾ ಅರ್ಜಿ

Devajit Saikia : ಬಿಸಿಸಿಐ ಕಾಯದರ್ಶಿ; ಸೈಕಿಯಾ ಅರ್ಜಿ

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.