ಭಾರತಕ್ಕೆ ಮತ್ತೆ ವಿಶ್ವಕಪ್‌ ಗೆಲ್ಲುವ ಭರವಸೆ

Team Udayavani, Jan 26, 2023, 6:03 AM IST

ಭಾರತಕ್ಕೆ ಮತ್ತೆ ವಿಶ್ವಕಪ್‌ ಗೆಲ್ಲುವ ಭರವಸೆ

ಭಾರತ ತಂಡ ಈಗ ಟಿ20, ಏಕದಿನದಲ್ಲಿ ವಿಶ್ವದ ನಂ.1 ತಂಡ, ಟೆಸ್ಟ್‌ನಲ್ಲಿ ವಿಶ್ವ ನಂ.2 ತಂಡ. ಕೆಲವು ತಿಂಗಳ ಹಿಂದೆ ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿತ್ತು. 2019ರಲ್ಲಿ ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ಸೋಲು, 2021ರ ಟಿ20 ವಿಶ್ವಕಪ್‌ನಲ್ಲಿ ಲೀಗ್‌ನಲ್ಲೇ ಸೋಲು, 2022ರ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ಸೋಲು, ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಸೋಲು, ದ್ವಿಪಕ್ಷೀಯ ಸರಣಿಗಳಲ್ಲಿ ಅತ್ಯುತ್ತಮವಾಗಿ ಆಡುವ ಭಾರತ ತಂಡ ವಿಶ್ವಕೂಟಗಳಲ್ಲಿ ಹೀಗೇಕೆ ಸಾಲುಸಾಲು ಸೋಲುಗಳನ್ನು ಕಾಣುತ್ತಿದೆ ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಬಹುಶಃ ಕೊಹ್ಲಿ ನಾಯಕತ್ವದಲ್ಲಿ ದೋಷವಿರಬಹುದೆಂದು ರೋಹಿತ್‌ ಶರ್ಮರನ್ನು ಆ ಸ್ಥಾನಕ್ಕೆ ತರಲಾಯಿತು. ಅದರಿಂದಲೂ ಯಾವುದೇ ಪ್ರಯೋಜನವಾಗಲಿಲ್ಲ.

ಇಂತಹ ಹೊತ್ತಿನಲ್ಲಿ ಬಿಸಿಸಿಐ ಟಿ20 ನಾಯಕತ್ವವನ್ನು ಹಾರ್ದಿಕ್‌ ಪಾಂಡ್ಯಗೆ ಪೂರ್ಣಾವಧಿ ಬಿಟ್ಟುಕೊಟ್ಟು, ಹಳೆಮುಖಗಳನ್ನು ತಂಡದಿಂದ ಹೊರಹಾಕುವ ಪರೋಕ್ಷ ಸುಳಿವು ನೀಡಿದೆ. ಈ ದಿಕ್ಕಿನಲ್ಲಿ ಹಾರ್ದಿಕ್‌ ಪಾಂಡ್ಯ ಬಳಗ ಯಶಸ್ಸನ್ನೂ ಕಂಡಿದೆ. ಈ ವರ್ಷಾಂತ್ಯದಲ್ಲಿ ಭಾರತದಲ್ಲೇ ನಡೆಯುವ ಏಕದಿನ ವಿಶ್ವಕಪ್‌, ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್‌ಗೆ ತಂಡವನ್ನು ಸಿದ್ಧಪಡಿಸುವುದು ಬಿಸಿಸಿಐನ ಸದ್ಯದ ಗುರಿ.

ಈಗ ಸಂತೋಷದ ಸುದ್ದಿಯೆಂದರೆ ತಂಡದಲ್ಲಿ ಕಾಣಿಸಿಕೊಂಡಿರುವ ಹೊಸಮುಖ ಗಳು ಪೂರ್ಣ ಭರವಸೆಯನ್ನುಂಟು ಮಾಡಿರುವುದು. ಟಿ20ಯಲ್ಲಿ ಸೂರ್ಯಕುಮಾರ್‌ ಯಾದವ್‌ ಅಬ್ಬರಿಸಿ ವಿಶ್ವದ ಶ್ರೇಷ್ಠ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಏಕದಿನದಲ್ಲಿ ಶುಭಮನ್‌ ಗಿಲ್‌, ಇಶಾನ್‌ ಕಿಶನ್‌, ಶ್ರೇಯಸ್‌ ಐಯ್ಯರ್‌ ಬ್ಯಾಟಿಂಗ್‌ನಲ್ಲಿ, ಬೌಲಿಂಗ್‌ನಲ್ಲಿ ಮೊಹಮ್ಮದ್‌ ಸಿರಾಜ್‌ ಸಂಚಲನ ಮೂಡಿಸಿದ್ದಾರೆ. ಗಮನಾರ್ಹ ಸಂಗತಿಯೆಂದರೆ ಮಾಜಿ ನಾಯಕ ವಿರಾಟ್‌ ಕೊಹ್ಲಿ ಮತ್ತೆ ತಮ್ಮ ಶ್ರೇಷ್ಠ ಬ್ಯಾಟಿಂಗ್‌ ಲಯಕ್ಕೆ ಮರಳಿದ್ದಾರೆ. ಅವರು ಸದ್ಯದಲ್ಲೇ ಏಕದಿನದಲ್ಲಿ 50ನೇ ಶತಕ ಬಾರಿಸುವ ದಿನಗಳಿಗೆ ಸನಿಹವಾಗಿದ್ದಾರೆ. ರೋಹಿತ್‌ ಶರ್ಮ ಕೂಡ ನ್ಯೂಜಿಲೆಂಡ್‌ ವಿರುದ್ಧದ ಕೊನೆಯ ಪಂದ್ಯದಲ್ಲಿ ಶತಕ ಬಾರಿಸಿ ಮೂರು ವರ್ಷಗಳ ತಮ್ಮ ರನ್‌ ಬರಗಾಲಕ್ಕೆ ಮುಕ್ತಾಯ ಹಾಡಿದ್ದಾರೆ.

ವೇಗಿ ಬುಮ್ರಾ ತಂಡಕ್ಕೆ ಮರಳಿದರೆ, ಗಾಯದಿಂದ ಚೇತರಿಸಿಕೊಂಡಿರುವ ರವೀಂದ್ರ ಜಡೇಜಾ ಹಳೆಯ ಲಯವನ್ನು ಕಂಡುಕೊಂಡರೆ ಸದ್ಯದ ಮಟ್ಟಿಗೆ ಭಾರತ ತಂಡದ ಚಿಂತೆ ಮುಗಿಯಿತು. ಈಗಿನ ಲೆಕ್ಕಾಚಾರದಲ್ಲಿ 23 ವರ್ಷದ ಶುಭಮನ್‌ ಗಿಲ್‌, 24 ವರ್ಷದ ಇಶಾನ್‌ ಕಿಶನ್‌ ಭಾರತ ತಂಡಕ್ಕೆ ಭಾರೀ ಭರವಸೆ ಮೂಡಿಸಿದ್ದಾರೆ. ಇಬ್ಬರೂ ಏಕದಿನದಲ್ಲಿ ದ್ವಿಶತಕ ಬಾರಿಸಿ, ದ್ವಿಶತಕವನ್ನೂ ಶತಕದಂತೆ ನಿತ್ಯದ ವಿದ್ಯಮಾನವನ್ನಾಗಿ ಪರಿವರ್ತಿಸಿದ್ದಾರೆ!
ಈಗಿನ ಪ್ರಶ್ನೆ ಒಂದೇ. ದ್ವಿಪಕ್ಷೀಯ ಸರಣಿಗಳಲ್ಲಿ ಅಷ್ಟು ಅದ್ಭುತವಾಗಿ ಆಡಿ ಎಂತೆಂತಹ ತಂಡಗಳನ್ನು ಮಣಿಸುವ ಭಾರತ ವಿಶ್ವಕೂಟಗಳಲ್ಲಿ ಎಡವುದೇಕೆ? ಇದು ಇವತ್ತಿನ ಸಮಸ್ಯೆಯಲ್ಲ, ಸೌರವ್‌ ಗಂಗೂಲಿ ನಾಯಕರಾಗಿದ್ದಾಗ ಫೈನಲ್‌ನಲ್ಲಿ ಸೋಲುವ ಚಾಳಿಯಿತ್ತು. ಧೋನಿ ಬಂದಾಗ ಅದು ಬಗೆಹರಿಯಿತು. ಕೊಹ್ಲಿ ನಾಯಕರಾಗಿದ್ದಾಗಂತೂ ಸೆಮಿಫೈನಲ್‌, ಫೈನಲ್‌ನಲ್ಲಿ ಸೋತಿದ್ದೇ. ಹೊಸ ಹುಡುಗರು ತಮ್ಮ ಆಟದ ಮೂಲಕ ಈ ಸಮಸ್ಯೆಗೆ ಪರಿಹಾರ ನೀಡಬೇಕಿದೆ. ಆಗ 2011ರ ಅನಂತರ ವಿಶ್ವಕಪ್‌ ಗೆದ್ದಿಲ್ಲವೆಂಬ ಕೊರಗು ಇಲ್ಲವಾಗುತ್ತದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Supreme Court: ವರದಕ್ಷಿಣೆ ತಡೆ ಕಾಯ್ದೆ ದುರ್ಬಳಕೆ ಸುಪ್ರೀಂ ಸಲಹೆಗಳು ಸಮುಚಿತ

Supreme Court: ವರದಕ್ಷಿಣೆ ತಡೆ ಕಾಯ್ದೆ ದುರ್ಬಳಕೆ ಸುಪ್ರೀಂ ಸಲಹೆಗಳು ಸಮುಚಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.