ಕೈಗೆ ಮುಳುವಾಗುತ್ತಿರುವ ನಾಯಕರ ಅಪ್ರಬುದ್ಧ ಹೇಳಿಕೆ


Team Udayavani, Jan 25, 2023, 6:00 AM IST

ಕೈಗೆ ಮುಳುವಾಗುತ್ತಿರುವ ನಾಯಕರ ಅಪ್ರಬುದ್ಧ ಹೇಳಿಕೆ

2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ಥಾನದಲ್ಲಿನ ಉಗ್ರರ ಅಡಗುದಾಣಗಳನ್ನು ಗುರಿಯಾಗಿಸಿ ನಡೆಸಿದ ಸರ್ಜಿಕಲ್‌ ದಾಳಿಗೆ ಯಾವುದೇ ಸಾಕ್ಷಿ ಅಥವಾ ಪುರಾವೆಯಾಗಲಿ ಇಲ್ಲ ಎಂಬ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ನೀಡಿರುವ ಹೇಳಿಕೆ ದೇಶಾದ್ಯಂತ ಸಾರ್ವತ್ರಿಕ ಟೀಕೆಗೆ ಗುರಿಯಾಗಿದೆ.

ಈ ಹಿಂದೆಯೂ ಕಾಂಗ್ರೆಸ್‌, ಸರ್ಜಿಕಲ್‌ ದಾಳಿಯ ಕುರಿತಂತೆ ಇದೇ ತೆರನಾದ ಹೇಳಿಕೆಯನ್ನು ನೀಡುವ ಮೂಲಕ ದೇಶವಾಸಿಗಳ ವ್ಯಾಪಕ ಆಕ್ರೋಶವನ್ನು ಎದುರಿಸುವಂತಾಗಿತ್ತು. ಕೈ ನಾಯಕರ ಈ ಅಪ್ರಬುದ್ಧ ಹೇಳಿಕೆಗಳನ್ನು ಆಡಳಿತಾರೂಢ ಬಿಜೆಪಿ ಚುನಾವಣೆ ವೇಳೆ ಅಸ್ತ್ರವನ್ನಾಗಿ ಪರಿಗಣಿಸಿ ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ನಡೆಸಿತ್ತು. ಸಹಜವಾಗಿಯೇ ಇದು ಕಾಂಗ್ರೆಸ್‌ನ ಘೋರ ವೈಫ‌ಲ್ಯಕ್ಕೆ ಕಾರಣವಾಗಿತ್ತು. ಇವೆಲ್ಲದರ ಹೊರತಾಗಿಯೂ ಪಾಠ ಕಲಿಯದ ಕಾಂಗ್ರೆಸ್‌ ನಾಯಕರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ದೇಶದ ಭದ್ರತಾ ಪಡೆಗಳು ಮತ್ತವುಗಳ ಕಾರ್ಯಾಚರಣೆಗಳ ಕುರಿತಾಗಿ ನೀಡುತ್ತಿರುವ ಹೇಳಿಕೆಗಳೇ ಕಾಂಗ್ರೆಸ್‌ ಪಾಲಿಗೆ ಮುಳುವಾಗಿ ಪರಿಣಮಿಸುತ್ತಿವೆ.

ಏತನ್ಮಧ್ಯೆ ದಿಗ್ವಿಜಯ್‌ ಸಿಂಗ್‌ ಅವರ ಈ ಬೇಜವಾಬ್ದಾರಿಯುತ ಹೇಳಿಕೆಗೆ ದೇಶಾದ್ಯಂತ ತೀವ್ರ ಪ್ರತಿರೋಧ ಎದುರಾಗುತ್ತಿರುವಂತೆಯೇ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಂಗಳವಾರ ಸ್ಪಷ್ಟನೆ ನೀಡಿ, ದಿಗ್ವಿಜಯ್‌ ಸಿಂಗ್‌ ಅವರ ಈ ಹೇಳಿಕೆ ಹಾಸ್ಯಾಸ್ಪದವಾಗಿದ್ದು ಇದು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯವಲ್ಲ. ದೇಶದ ಸಶಸ್ತ್ರ ಪಡೆಗಳ ಬಗೆಗೆ ಪಕ್ಷಕ್ಕೆ ಅಪಾರ ಗೌರವವಿದ್ದು ತಮ್ಮ ಕೆಲಸವನ್ನು ಅತ್ಯಂತ ಪ್ರಾಮಾಣಿಕವಾಗಿ ಮತ್ತು ಅಮೋಘವಾಗಿ ನಿರ್ವಹಿಸಿವೆ ಎನ್ನುವ ಮೂಲಕ ವಿವಾದದಿಂದ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಅಷ್ಟು ಮಾತ್ರವಲ್ಲದೆ ಸಶಸ್ತ್ರ ಪಡೆಗಳು ನಡೆಸಿರುವ ಕಾರ್ಯಾಚರಣೆಗಳ ಬಗೆಗೆ ಯಾವುದೇ ಸಾಕ್ಷ್ಯ ಅಥವಾ ಪುರಾವೆ ನೀಡುವ ಅಗತ್ಯವಿಲ್ಲ ಎನ್ನುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನವನ್ನೂ ಮಾಡಿದ್ದಾರೆ ರಾಹುಲ್‌.

ಆದರೆ ಇಂಥ ಸ್ಪಷ್ಟನೆಯಿಂದ ಪಕ್ಷಕ್ಕಾದ ಹಾನಿಯನ್ನು ಸರಿಪಡಿಸುವುದು ಕಷ್ಟಸಾಧ್ಯ. ಕೈ ನಾಯಕರ ಇಂತಹ ಹೇಳಿಕೆಗಳು ಮತ್ತು ಬಾಲಿಶ ವರ್ತನೆಗಳೇ ಪಕ್ಷವನ್ನು ದೇಶದ ರಾಜಕೀಯ ಇತಿಹಾಸದ ಪುಟಗಳನ್ನು ಸೇರುವಂತೆ ಮಾಡುತ್ತಿವೆ ಎಂಬುದನ್ನು ಪಕ್ಷದ ವರಿಷ್ಠರು ಮೊದಲು ಮನಗಾಣಬೇಕಿದೆ. ಬೇಕಾಬಿಟ್ಟಿಯಾಗಿ ನಾಲಗೆ ಹರಿಯ ಬಿಡುವ ನಾಯಕರಿಗೆ ಕಠಿನ ಎಚ್ಚರಿಕೆಯನ್ನು ನೀಡುವ ಮೂಲಕ ಸ್ಪಷ್ಟ ಸಂದೇಶವೊಂದನ್ನು ರವಾನಿಸುವ ಕೆಲಸ ಪಕ್ಷದಿಂದಾಗಬೇಕಿದೆ. ದೇಶದ ಜನತೆ ಎದುರಿಸುತ್ತಿರುವ ಹತ್ತು ಹಲವು ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳಲ್ಲಿನ ಲೋಪದೋಷಗಳು, ಸರಕಾರದ ನಡೆಗಳ ಬಗೆಗೆ ವಿಪಕ್ಷವಾಗಿ ಜನರ ಧ್ವನಿಯಾಗಬೇಕಿರುವ ಕಾಂಗ್ರೆಸ್‌ ನಾಯಕರು ಇಂತಹ ಅಸಂಬದ್ಧ, ಅಸಮಂಜಸ ಹೇಳಿಕೆಗಳ ಮೂಲಕ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಹಿರಿಯ ನಾಯಕರೆನಿಸಿಕೊಂಡವರು ಪದೇ ಪದೆ ಹಳೆಯ ವಿಷಯಗಳನ್ನು ಕೆದಕಲು ಹೋಗಿ ನಗೆಪಾಟಲಿಗೀಡಾಗುತ್ತಿರುವುದು ವಿಪರ್ಯಾಸವೇ ಸರಿ.

ಪ್ರಸಕ್ತ ವರ್ಷ ದೇಶದ 9 ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಯುತ್ತಿದ್ದು ಇಂಥ ಸಂದರ್ಭದಲ್ಲಿ ಕೈ ನಾಯಕರು ಒಂದಿಷ್ಟು ಎಚ್ಚರಿಕೆ ಯಿಂದ ಪಕ್ಷ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವ ಬದಲು ಅನಾವಶ್ಯಕವಾಗಿ ಮುಜುಗರಕ್ಕೀಡಾ ಗುತ್ತಿರುವುದು ದುರಂತವೇ ಸರಿ. ಕಾಂಗ್ರೆಸ್‌ನ ಅಧ್ಯಕ್ಷರು ಮತ್ತು ಹಿರಿಯರು ಈ ನಾಯಕರ ನಾಲಗೆಗೆ ಕಡಿವಾಣ ಹಾಕಬೇಕಿರುವುದು ಈಗಿನ ತುರ್ತು.

ಟಾಪ್ ನ್ಯೂಸ್

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.