ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ದಾಳಿ ಖಂಡನೀಯ


Team Udayavani, Jul 21, 2022, 6:00 AM IST

ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ದಾಳಿ ಖಂಡನೀಯ

ಅಕ್ರಮ ಗಣಿಗಾರಿಕೆ, ಜಾನುವಾರುಗಳ ಅಕ್ರಮ ಸಾಗಾಟ ಮತ್ತು ತಪಾಸಣೆ ವೇಳೆ ಪೊಲೀಸರ ಮೇಲೆ ಟ್ರಕ್‌ ಹತ್ತಿಸಿ ಹತ್ಯೆ ಮಾಡಿದ ಘಟನೆಗಳು ದೇಶವನ್ನೇ ಬೆಚ್ಚುವಂತೆ ಮಾಡಿವೆ. 24 ಗಂಟೆಗಳಲ್ಲಿ ಒಟ್ಟು 3 ಘಟನೆಗಳು ನಡೆದಿವೆ. ದುಷ್ಕರ್ಮಿಗಳು ಕರ್ತವ್ಯ ನಿರತ ಪೊಲೀಸರನ್ನು ಹತ್ಯೆ ಮಾಡಿರುವುದು ಎಲ್ಲೆಡೆ ಆಕ್ರೋಶಕ್ಕೂ ಕಾರಣವಾಗಿದೆ.

ಮಂಗಳವಾರವಷ್ಟೇ ಹರಿಯಾಣದ ಗುರುಗ್ರಾಮದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಹೋಗಿದ್ದ ಡಿವೈಎಸ್‌ಪಿ ಮೇಲೆ ವಾಹನವೊಂದನ್ನು ಹರಿಸಿ ಹತ್ಯೆ ಮಾಡಲಾಗಿತ್ತು. ಈ ಘಟನೆ ದೇಶದಲ್ಲಿ ಭಾರೀ ಚರ್ಚೆಗೂ ಕಾರಣವಾಗಿದ್ದು, ಅಕ್ರಮ ಗಣಿಗಾರಿಕೆಯಲ್ಲಿ ತೊಡ ಗಿರುವವರ ಕ್ರೌರ್ಯವನ್ನು ಬಿಚ್ಚಿಟ್ಟಿದೆ. ನುಹ್‌ ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂಬ ಮಾಹಿತಿ ಅರಿತು ಡಿವೈಎಸ್‌ಪಿ ಸುರೇಂದ್ರ ಸಿಂಗ್‌ ಬಿಷ್ಣೋಯ್‌ ಅವರು ದಾಳಿ ಮಾಡಿದ್ದರು. ಈ ಸಂದರ್ಭದಲ್ಲಿ ಕಲ್ಲು ತುಂಬಿಕೊಂಡಿದ್ದ ಲಾರಿಯನ್ನು ಈ ಅಧಿಕಾರಿ ಮೇಲೆಯೇ ಚಾಲಕ ಹರಿಸಿದ್ದ. ಹೀಗಾಗಿ ತೀವ್ರವಾಗಿ ಗಾಯಗೊಂಡಿದ್ದ ಪೊಲೀಸ್‌ ಅಧಿಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

ಇದೇ ಮಾದರಿಯ ಘಟನೆ, ಝಾರ್ಖಂಡ್‌ನ‌ಲ್ಲಿಯೂ ನಡೆದಿದೆ. ಚೆಕ್‌ಪಾಯಿಂಟ್‌ವೊಂದರಲ್ಲಿ ಪೊಲೀಸ್‌ ಅಧಿಕಾರಿ ಸಂಧ್ಯಾ ಟಪ್ನೊà ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಅಕ್ರಮವಾಗಿ ಜಾನು ವಾರುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವೊಂದು ಇವರ ಮೇಲೆಯೇ ಹರಿದಿದೆ. ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಲಾಗುತ್ತಿದೆ ಎಂಬ ಸುಳಿವಿನ ಮೇರೆಗೆ ಚೆಕ್‌ಪೋಸ್ಟ್‌ ನಲ್ಲಿ ತಪಾಸಣೆ ನಡೆಸಲಾಗುತ್ತಿತ್ತು. ಆದರೆ ಜಾನುವಾರು ಹೊತ್ತು ತಂದಿದ್ದ ದುಷ್ಕರ್ಮಿ, ವಾಹನವನ್ನು ನಿಲ್ಲಿಸದೇ ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ ಮೇಲೆಯೇ ಹರಿಸಿದ್ದಾನೆ. ಇದು ಮಂಗಳವಾರ ತಡರಾತ್ರಿ ನಡೆದಿರುವ ಘಟನೆಯಾಗಿದೆ.

ಅತ್ತ ಗುಜರಾತ್‌ ಕೂಡ ಇಂಥದ್ದೇ ಘಟನೆಗೆ ಸಾಕ್ಷಿಯಾಗಿದ್ದು, ಆನಂದ್‌ ಜಿಲ್ಲೆಯ ಬೋರ್ಸಾದ್‌ ಪೊಲೀಸ್‌ ಠಾಣೆಯ ಕಾನ್‌ಸ್ಟೆàಬಲ್‌ ಮೇಲೆ ದುಷ್ಕರ್ಮಿಯೊಬ್ಬ ವಾಹನ ಹತ್ತಿಸಿ ಹತ್ಯೆ ಮಾಡಿದ್ದಾನೆ. ಇದೂ ಮಂಗಳವಾರ ತಡರಾತ್ರಿ ನಡೆದಿದ್ದು, ಇಲ್ಲಿಯೂ ವಾಹನ ತಪಾಸಣೆಗಾಗಿ ನಿಲ್ಲಿಸಲು ಹೋದಾಗ ಈ ಘಟನೆ ನಡೆದಿದೆ. ಕೇವಲ 24 ಗಂಟೆಗಳ ಅವಧಿಯಲ್ಲಿ ನಡೆದಿರುವ ಈ ಮೂರು ಪ್ರಕರಣಗಳಿಂದಾಗಿ ಕರ್ತವ್ಯ ದಲ್ಲಿರುವ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ರಕ್ಷಣೆ ಇಲ್ಲವೇ ಎಂಬ ಪ್ರಶ್ನೆಯೂ ಮೂಡುವಂತೆ ಮಾಡಿದೆ. ಏಕೆಂದರೆ, ಈಗ ಹತ್ಯೆಯಾಗಿರುವ ಮೂವರೂ ಪೊಲೀಸರೇ ಆಗಿದ್ದಾರೆ. ರಕ್ಷಣೆ ನೀಡುವ ಪೊಲೀಸರನ್ನೇ ಹತ್ಯೆ ಮಾಡಿರುವ ದುಷ್ಕರ್ಮಿಗಳು ತಾವು ಕಾನೂನಿಗಿಂತ ಅತೀತ ಎಂಬ ದಾಷ್ಟತನಕ್ಕೆ ಬಂದಿದ್ದಾರೆ ಎಂದೇ ಹೇಳಬೇಕಾಗುತ್ತದೆ.

ಹರಿಯಾಣ, ಝಾರ್ಖಂಡ್‌ ಮತ್ತು ಗುಜರಾತ್‌ ಸರಕಾರಗಳು ಯಾವುದೇ ಕಾರಣಕ್ಕೂ ದುಷ್ಕರ್ಮಿಗಳನ್ನು ಬಿಡಬಾರದು. ಇವರೆ ಲ್ಲರನ್ನೂ ಬಂಧಿಸಿ, ಇವರಿಗೆ ಕಠಿನ ಶಿಕ್ಷೆಯಾಗುವಂತೆ ಮಾಡಲೇಬೇಕು. ಅಲ್ಲದೆ, ಪೊಲೀಸರ ಮೇಲೆಯೇ ಈ ರೀತಿಯ ಘಟನೆಗಳಾಗುತ್ತವೆ ಎಂದಾದರೆ, ಇತರ ಅಧಿಕಾರಿಗಳು ಮತ್ತು ಜನತೆ ಏನು ಮಾಡ ಬೇಕಾದೀತು ಎಂಬ ಪ್ರಶ್ನೆ ಎದುರಾಗುತ್ತದೆ. ಹಾಗೆಯೇ ಪೊಲೀಸೇತರ ಅಧಿಕಾರಿಗಳ ನೈತಿಕ ಸ್ಥೈರ್ಯವೂ ಕುಗ್ಗಿದಂತಾಗುತ್ತದೆ ಎಂಬುದರಲ್ಲಿ ಎರಡು ಮಾತೇ ಇಲ್ಲ.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.