Illegal mining; ತ್ವರಿತಗತಿ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ


Team Udayavani, Nov 18, 2023, 5:24 AM IST

court

ಅಕ್ರಮ ಗಣಿಗಾರಿಕೆಗೆ ಸಂಬಂಧಪಟ್ಟ ಎಲ್ಲ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅವಧಿಯನ್ನು ಮುಂದಿನ ಜೂನ್‌ 30ರವರೆಗೆ ವಿಸ್ತರಿಸಲು ರಾಜ್ಯ ಸರಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ. ಆದರೆ ಗಣಿಗಾರಿಕೆಯಲ್ಲಿ ನಡೆದ ಅಕ್ರಮಗಳ ತನಿಖೆಗಾಗಿ ಲೋಕಾಯುಕ್ತ­ದಲ್ಲಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡದಿಂದ ಕಳೆದ 5 ವರ್ಷಗಳ ಅವಧಿಯಲ್ಲಿ ತನಿಖೆ ಏನೇನೂ ಪ್ರಗತಿ ಕಂಡಿಲ್ಲ ಎಂಬುದು ಗಮ­ನಾರ್ಹ ಸಂಗತಿ. ಒಟ್ಟು 172 ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆಯೂ ಆಗಿಲ್ಲ. 10 ಕ್ರಿಮಿನಲ್‌ ಪ್ರಕರಣಗಳು ಬಾಕಿ ಉಳಿದಿವೆ. 8 ವರ್ಷಗಳಾದರೂ ತನಿಖಾ ಪ್ರಗತಿ ಶೂನ್ಯ. ಅದಿರು ಮೌಲ್ಯಮಾಪನ ವರದಿಯನ್ನೂ ಕೂಡ ಸಲ್ಲಿಸಿಲ್ಲ ಹಾಗೂ ದೋಷರೋಪ ಪಟ್ಟಿ ಹಾಕಿಲ್ಲ ಎಂಬುದರ ಬಗ್ಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ‌ ಚರ್ಚೆ ನಡೆದು ಎಸ್‌ಐಟಿ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತ ಪಡಿಸಲಾಗಿದೆ. ಇಷ್ಟು ವರ್ಷಗಳ ಸಮಯ ನೀಡಿದ್ದರೂ ತನಿಖೆಯಲ್ಲಿ ಏನೇನೂ ಪ್ರಗತಿ ಸಾಧಿಸದ ಎಸ್‌ಐಟಿ ಇನ್ನು 8 ತಿಂಗಳಲ್ಲಿ ಸಾವಿರಾರು ಕೋಟಿ ರೂ.ಗಳ ಗಣಿಗಾರಿಕೆ ಅಕ್ರಮವನ್ನು ಬಯಲಿಗೆ ಎಳೆಯುವುದೇ ಎಂಬ ಅನುಮಾನ ಕೂಡ ಮೂಡುತ್ತದೆ.

ತನಿಖೆ ಮಂದಗತಿ ಸಾಗಲು ಹಿಂದಿನ 5 ವರ್ಷದಲ್ಲಿ ಆಡಳಿತಾತ್ಮಕ ಇಚ್ಛಾಶಕ್ತಿ ಇರಲಿಲ್ಲ ಎಂದು ಹೇಳುವ ಮೂಲಕ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಬೆಟ್ಟು ಮಾಡಿ ತೋರಿಸುವ ಮೂಲಕ ರಾಜಕೀಯ ಬಣ್ಣದ ಲೇಪನ ಮಾಡಿದೆ. ರಾಜ್ಯದ ಬೊಕ್ಕಸಕ್ಕೆ ಅಂದಾಜು 50 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ ಗಣಿ ಅಕ್ರಮದ ಬಗ್ಗೆ ತನಿಖೆ ಕೈಗೆತ್ತಿಕೊಂಡ ಎಸ್‌ಐಟಿ ಹಗರಣದ ಮಹತ್ವ ಅರಿಯದೆ ಕಾಲದೂಡುವ ಕೆಲಸ ಮಾಡಿರುವುದು ಸರಿಯಲ್ಲ. ತನಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಸ್‌ಐಟಿ ವಿಫ‌ಲವಾಗಿದೆಯೆಂದೇ ಹೇಳಬಹುದು. ತನಿಖೆ ತ್ವರಿತಗತಿಯಲ್ಲಿ ಸಾಗದೇ ಇರಲು ಇರುವ ಕಾರಣಗಳನ್ನು ಸರಕಾರದ ಗಮನಕ್ಕೆ ತಂದು ಅದಕ್ಕೆ ಬೇಕಾದ ಪರಿಹಾರ ಪಡೆಯುವಲ್ಲಿ ಎಸ್‌ಐಟಿ ನಿರ್ಲಕ್ಷ್ಯ ಮಾಡಿದೆ ಎಂದು ನೇರವಾಗಿ ಹೇಳಬಹುದು. ತನಿಖೆ ವಿಳಂಬಕ್ಕೆ ಸರಕಾರದ ಮಟ್ಟದಲ್ಲಿ ಒತ್ತಡವಿತ್ತೇ, ಅಧಿಕಾರಿಗಳ ವಲಯದಲ್ಲೂ ಅಡ್ಡಿ ಇತ್ತೇ ಎಂಬುದು ಗೊತ್ತಾಗಬೇಕಿದೆ.

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು 2007 ರಲ್ಲಿ ಅಧಿಕಾರದಲ್ಲಿದ್ದಾಗ ನಿಯಮಗಳನ್ನು ಉಲ್ಲಂ ಸಿ ಖಾಸಗಿ ಕಂಪೆನಿಯೊಂದಕ್ಕೆ ಗಣಿಗಾರಿಕೆ ಗುತ್ತಿಗೆ ನೀಡಿದ್ದರೆನ್ನಲಾದ ಪ್ರಕರಣವೂ ಸೇರಿದಂತೆ ಹಳೆ ಪ್ರಕರಣಗಳ ತನಿಖೆಗೆ ಮರು ಜೀವ ಕೊಡಲು ರಾಜ್ಯ ಸರಕಾರ ಮುಂದಾಗಿದೆ. ಆದರೆ, ಇದರ ಹಿಂದೆ ಯಾವುದೇ ರೀತಿಯ ರಾಜಕೀಯ ದ್ವೇಷ ಅಥವಾ ಒತ್ತಡಗಳು ಇರಬಾರದು. ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕಿದೆ. ರಾಜ್ಯದ ಬೊಕ್ಕಸಕ್ಕೆ ಆಗಿರುವ ನಷ್ಟವನ್ನು ಅವರಿಂದ ವಸೂಲಿ ಮಾಡುವ ಕೆಲಸ ಆಗಬೇಕಾದರೆ ಎಸ್‌ಐಟಿ ಕೂಡ ಯಾವುದೇ ರೀತಿಯ ಒತ್ತಡಗಳಿಗೆ ಮಣಿಯದೇ ಕಾಲಮಿತಿಯಲ್ಲಿ ತನಿಖೆ ನಡೆಸಬೇಕಿದೆ.

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.