ರಾಜಕಾರಣಿ-ಅಧಿಕಾರಿಗಳ ಅಪವಿತ್ರ ನಂಟಿಗೆ ಕೊನೆ ಎಂದು?


Team Udayavani, Mar 22, 2021, 6:55 AM IST

Untitled-1

ಉದ್ಯಮಿ ಮುಕೇಶ್‌ ಅಂಬಾನಿ ನಿವಾಸದ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾದ ಪ್ರಕರಣ ಪಕ್ಕಾ ಬಾಲಿವುಡ್‌ ಸಿನೆಮಾ ಶೈಲಿಯಲ್ಲಿ ದಿನಕ್ಕೊಂದು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಪ್ರಕರಣದ ತನಿಖೆ ಯನ್ನು ಕೇಂದ್ರ ಸರಕಾರವು ಎನ್‌ ಐಎಗೆ ವಹಿಸಿದ ಬಳಿಕ  ಸಹಾಯಕ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಚಿನ್‌ ವಾಜೆ ಅವರು ಪ್ರಕರಣದಲ್ಲಿ ಶಾಮೀ ಲಾಗಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ವಾಜೆ ಅವರನ್ನು ಬಂಧಿಸಿದ ಬಳಿಕ ಇಡೀ ಪ್ರಕರಣ ರಾಜಕಾರಣಿಗಳು ಮತ್ತು ಅಧಿಕಾರಿಗಳ ನಡುವಿನ ಅಪವಿತ್ರ ನಂಟಿನ ಒಂದೊಂದೇ ಎಳೆಯನ್ನು ಬಿಚ್ಚಿಡುತ್ತಿದೆ.

ಸಚಿನ್‌ ವಾಜೆ ಅವರ ಬಂಧನವಾಗುತ್ತಿದ್ದಂತೆಯೇ ಮುಂಬಯಿ ಪೊಲೀಸ್‌ ಆಯುಕ್ತರಾಗಿದ್ದ ಪರಂಬೀರ್‌ ಸಿಂಗ್‌ ಅವರನ್ನು ಅಲ್ಲಿನ ಸರಕಾರ ಎತ್ತಂಗಡಿ ಮಾಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಪರಂ ಬೀರ್‌ ಸಿಂಗ್‌ ಅವರು ಸಿಎಂ ಉದ್ಧವ್‌ ಠಾಕ್ರೆ ಅವರಿಗೆ ಬಹಿ ರಂಗ ಪತ್ರ ಬರೆದು ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅವರು ಪ್ರತೀ ತಿಂಗಳೂ 100 ಕೋ. ರೂ. ಸಂಗ್ರಹಿಸಿ ನೀಡುವಂತೆ ಸಚಿನ್‌ ವಾಜೆಗೆ ಸೂಚಿಸಿದ್ದರು ಎಂಬ ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪ ಶಿವಸೇನೆ ನೇತೃತ್ವದ ಮೈತ್ರಿ ಸರಕಾರಕ್ಕೆ ತೀವ್ರ ಮುಜು ಗರ ವನ್ನುಂಟು ಮಾಡಿದೆ. ಈ ಆರೋಪ ವನ್ನು ಅನಿಲ್‌ ದೇಶ್‌ಮುಖ್‌ ಅವರು ತಳ್ಳಿಹಾಕಿರುವರಾದರೂ ಇದು ಪೊಲೀಸ್‌ ಅಧಿಕಾರಿಗಳು ಮತ್ತು ರಾಜಕಾರಣಿಗಳ ನಡುವಿನ ಅಪವಿತ್ರ ನಂಟಿನ ಕುರಿತಾದ ಚರ್ಚೆಯನ್ನು ಮತ್ತೂಮ್ಮೆ ಮುನ್ನೆಲೆಗೆ ತಂದಿದೆ.

ಮಹಾರಾಷ್ಟ್ರದಲ್ಲಿ ಅದರಲ್ಲೂ ಮುಂಬಯಿಯಲ್ಲಿ ರಾಜಕಾರಣಿಗಳು, ಪೊಲೀಸ್‌ ಅಧಿಕಾರಿಗಳು ಮತ್ತು ಭೂಗತ ಪಾತಕಿಗಳ ನಡುವಣ ಸಂಬಂಧ ಹೊಸದೇನಲ್ಲ. ಮೂರು ದಶಕಗಳಷ್ಟು ಹಿಂದೆ ಮಹಾರಾಷ್ಟ್ರದಲ್ಲಿ ಸಕ್ರಿಯವಾಗಿದ್ದ ಭೂಗತ ಪಾತಕಿಗಳ ಕೊಲೆ, ಸುಲಿಗೆ, ದರೋಡೆಯಂಥ ಕೃತ್ಯಗಳಿಗೆ “ಎನ್‌ಕೌಂಟರ್‌’ ಅಸ್ತ್ರ ಬಳಸಿ ಅವರ ಹುಟ್ಟಡಗಿಸಿದ್ದ ಹಿರಿಯ ಪೊಲೀಸ್‌ ಅಧಿಕಾರಿಗಳ ಕೆಚ್ಚೆದೆ, ಶೌರ್ಯ, ಸಾಹಸಗಳ ಬಗೆಗೆ ಅಪಾರ ಪ್ರಶಂಸೆ ವ್ಯಕ್ತವಾಗಿತ್ತು. ಆದರೆ ಕಾಲಕ್ರಮೇಣ ಕೆಲವರ ಕಾರ್ಯವೈಖರಿ ಮತ್ತು ನಡೆಗಳ ಬಗೆಗೆ ಅನುಮಾನಗಳು ಹುಟ್ಟಿಕೊಂಡಿದ್ದವಲ್ಲದೆ ಇದಕ್ಕಾಗಿ ಅವರು ತನಿಖೆ ಎದುರಿಸಬೇಕಾಗಿ ಬಂದಿತ್ತು. ಇಂಥ ಬಹುತೇಕ ಪ್ರಕರಣಗಳಲ್ಲಿ ಈ ಪೊಲೀಸ್‌ ಅಧಿಕಾರಿಗಳಿಗೆ ಒಂದಲ್ಲ ಒಂದು ರಾಜಕೀಯ ಪಕ್ಷದ ನಾಯಕರ ಕೃಪಾಶೀರ್ವಾದ ಇತ್ತು ಎಂಬುದು ರಹಸ್ಯವೇನಲ್ಲ. ಈ ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳದೂ “ಎಲ್ಲರ ಮನೆಯ ದೋಸೆ, ಅಲ್ಲ ಕಾವಲಿಯೇ ತೂತು’ ಎಂಬುದಂತೂ ದಿಟ.

ಈಗಾಗಲೇ ಮಹಾರಾಷ್ಟ್ರದಲ್ಲಿ ಈ ಪ್ರಕರಣ ರಾಜಕೀಯವಾಗಿ ಭಾರೀ ಆರೋಪ -ಪ್ರತ್ಯಾರೋಪಗಳ ವಿನಿಮಯಕ್ಕೆ ಕಾರಣವಾಗಿದ್ದು ಎಲ್ಲ ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ಕೆಸರೆರಚಾಟ ಆರಂಭಿಸಿದ್ದಾರೆ. ಆದರೆ ಇಲ್ಲಿ ನಿಜವಾಗಿ ಚರ್ಚೆ ಅಥವಾ ಚಿಂತನೆ ನಡೆಯಬೇಕಿರುವುದು ರಾಜಕಾರಣಿಗಳು ಮತ್ತು ಅಧಿಕಾರಿಗಳ ನಡುವಿನ ನಂಟಿನ ವಿಚಾರದ ಬಗೆಗೆ. ಈ ವಿಷಯವನ್ನು ರಾಜಕೀಯ ನೆಲೆಯಿಂದ ಹೊರತಾಗಿ ಗಂಭೀರವಾಗಿ ಪರಿಗಣಿಸುವುದು ಅನಿವಾರ್ಯ. ಪ್ರಕರಣವನ್ನು ಯಾವುದೋ ತನಿಖಾ ಸಂಸ್ಥೆಗಳ ಬದಲಾಗಿ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂ ರ್ತಿ ಗ ಳ‌ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವುದು ಹೆಚ್ಚು ಸೂಕ್ತ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಇಂಥ ಕೃತ್ಯಗಳಿಗೆ ಪ್ರಚೋದನೆ ನೀಡುವ ರಾಜಕೀಯ ನಾಯಕರು, ಅಧಿಕಾರಿಗಳಿಗೆ ಕಡಿವಾಣ ಹಾಕಲು ಇದು ಸುಸಮಯ.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

school

Karnataka; ಶಾಲಾ ಆಸ್ತಿ ಸಂರಕ್ಷಣೆ ಅಭಿಯಾನ ಎಲ್ಲ ಇಲಾಖೆಗಳಿಗೂ ಮಾದರಿ

Forest

Forest: ಅರಣ್ಯದಲ್ಲಿ ನಿರಂತರ ಗಣಿಗಾರಿಕೆ: ಸರಕಾರ ಚರ್ಚಿಸಿ ನಿರ್ಧರಿಸಲಿ

School-Chikki

PM Poshan: ಶಾಲಾ ಮಕ್ಕಳ ಮೊಟ್ಟೆಗೂ ಕನ್ನ ತಪ್ಪಿತಸ್ಥರ ವಿರುದ್ಧ ಕ್ರಮ ಅಗತ್ಯ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.