ಭೇಟಿ ರದ್ದು, ನಿರ್ಧಾರ ಸರಿ: ಪಾಕ್‌ಗೆ ಪಾಠ ಕಲಿಸಿ

Team Udayavani, Sep 22, 2018, 6:00 AM IST

c-3.jpg

ದ್ವಿಪಕ್ಷೀಯ ಮಾತುಕತೆ ಪುನಾರಂಭಿಸಬೇಕು ಎಂಬ ಪ್ರಧಾನ ಅಂಶದ ಜತೆಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಪತ್ರಕ್ಕೆ ಒಪ್ಪಿಗೆ ಸೂಚಿಸಿ ದಿನ ಕಳೆದಿಲ್ಲ. ಆಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಪೊಲೀಸರನ್ನು ಉಗ್ರರು ಅಪಹರಿಸಿ ಹತ್ಯೆ ಮಾಡಿದ್ದಾರೆ. ಈ ಘಟನೆಯ ನಂತರ ಭಾರತವು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌-ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್‌ ಖುರೇಷಿ ನಡುವೆ ನಿಗದಿಯಾಗಿದ್ದ ಭೇಟಿಯನ್ನು ರದ್ದುಪಡಿಸಿದೆ. 

ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ನಮ್ಮ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ ಎಂಬ ಅಂಶ ಬಹಿರಂಗವಾಗಿ ಮೆಚ್ಚುಗೆ ಗಳಿಸಿದ್ದ ವೇಳೆಯಲ್ಲೇ ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿಯಲ್ಲಿ ಬಿಎಸ್‌ಎಫ್ ಯೋಧರೊಬ್ಬರನ್ನು ಪಾಕ್‌ ಸೇನೆ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿತು! ಈಗ ಪಾಕ್‌ ಬೆಂಬಲಿತ ಉಗ್ರರು ಕಾಶ್ಮೀರಿ ಪೊಲೀಸರನ್ನು ಅಪಹರಿಸಿ ಹತ್ಯೆಗೈದಿದ್ದಾರೆ. ಪಾಕಿಸ್ತಾನಕ್ಕೆ ಹಿಂಸೆಯೇ 
ಆದ್ಯತೆ ಎಂದಾದರೆ ಜಮ್ಮು ಮತ್ತು ಕಾಶ್ಮೀರ ವಿಚಾರ, ಉಗ್ರವಾದ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಕುಳಿತು ಮಾತಾಡೋಣ ಎಂಬ ಸಿಹಿ ಲೇಪನದ ಪತ್ರವನ್ನು ಬರೆಯ ಬೇಕಾದ ಅಗತ್ಯವೇನಿತ್ತು ಎಂಬ ಪ್ರಶ್ನೆ ಮೂಡುತ್ತದೆ. 

ಇಂಥ ಬೆಳವಣಿಗೆ ಹೊಸತೇನೂ ಅಲ್ಲ. ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿ ಯಾಗಿದ್ದ ವೇಳೆ ಲಾಹೋರ್‌ಗೆ ಐತಿಹಾಸಿಕ ಬಸ್‌ ಯಾತ್ರೆ ನಡೆಸಿ ನವದಹೆಲಿಗೆ ಹಿಂತಿರುಗಿದ ಕೆಲವೇ ದಿನಗಳಲ್ಲಿ ಪಾಕಿಸ್ತಾನ ಸೇನೆ ಕಾರ್ಗಿಲ್‌ ದಾಳಿ ನಡೆಸಿತ್ತು. ಮಿತ್ರತ್ವದ ಕೈಚಾಚುತ್ತಾ ಬೆನ್ನಿಗೆ 
ಇರಿಯುವ ಇರಾದೆಯುಳ್ಳ ರಾಷ್ಟ್ರವನ್ನು ನಂಬುವುದಾದರೂ ಹೇಗೆ? ರಾಜತಾಂತ್ರಿಕವಾಗಿ ಒಂದು ರಾಷ್ಟ್ರದ ಮುಖ್ಯಸ್ಥರು ಮತ್ತೂಂದು ರಾಷ್ಟ್ರದ ಮುಖ್ಯಸ್ಥರಿಗೆ  “ಬನ್ನಿ, ಬಿಕ್ಕಟ್ಟು ಪರಿಹರಿಸಲು ಸಮಾಲೋಚನೆ ನಡೆಸೋಣ’ ಎಂದು ಪತ್ರ ಬರೆದು ಆಹ್ವಾನಿಸಿದಾಗ, ಪೂರಕ ಸ್ಪಂದನೆ ನೀಡದೇ ಇದ್ದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿಂದನೆಗೆ ಗುರಿಯಾಗ ಬೇಕಾಗುತ್ತದೆ. ಇಂಥ ದೂರದೃಷ್ಟಿಯನ್ನಿರಿಸಿಕೊಂಡೇ ವಿದೇಶಾಂಗ ಇಲಾಖೆ  “ಪಾಕಿಸ್ತಾನದ ಕೋರಿಕೆ ಮೇರೆಗೆ ನ್ಯೂಯಾರ್ಕ್‌ನಲ್ಲಿ ಕೇಂದ್ರ ವಿದೇಶಾಂಗ ಸಚಿವರು, ಅಲ್ಲಿನ ಸಚಿವರನ್ನು ಭೇಟಿಯಾಗುತ್ತಿದ್ದಾರೆ. ಇದು ದ್ವಿಪಕ್ಷೀಯ ಮಾತುಕತೆಗೆ ವೇದಿಕೆ ಅಲ್ಲ’ ಎಂದು ಸ್ಪಷ್ಟವಾಗಿ ಹೇಳಿತ್ತು. ಆದರೆ ಈಗ ಈ ಭೇಟಿಯನ್ನು ರದ್ದುಗೊಳಿಸಿ ಭಾರತ ಸರಿಯಾದ ಹೆಜ್ಜೆಯಿಟ್ಟಿದೆ.

ಇನ್ನು ಮೂವರು ಪೊಲೀಸರ ಹತ್ಯೆ ಸಹಜವಾಗಿಯೇ ಕಣಿವೆ ರಾಜ್ಯದ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿಯಲ್ಲಿ ಸಂಚಲನ ಸೃಷ್ಟಿಸಿದೆ. ಹಲವು ಮಾಧ್ಯಮ ವರದಿಗಳ ಪ್ರಕಾರ ಕೆಲವರು ಹುದ್ದೆ ತ್ಯಾಗ ಮಾಡುವ ಘೋಷಣೆ ಮಾಡಿದ್ದಾರೆ. ಇದು ಹೌದೋ ಅಲ್ಲವೋ ಬೇರೆ ವಿಚಾರ. ಜನರ ರಕ್ಷಣೆ ಮಾಡುವ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗದಂತೆ ಮಾಡುವುದು ಜಮ್ಮು ಮತ್ತು ಕಾಶ್ಮೀರ ಮತ್ತು ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಬೇಕು. 

ಜಮ್ಮು ಕಾಶ್ಮೀರದ ಯುವಕರು ಜೀವನಾಧಾರಕ್ಕಾಗಿ ಸರ್ಕಾರಿ ಸೇವೆಗಳಿಗೆ ಸೇರುವುದು ಉಗ್ರರಿಗೆ ಹಿಡಿಸುತ್ತಿಲ್ಲ. ಅವರಿಗೆ ನೆಮ್ಮದಿಯಿಂದಿರುವ ಯುವಕರು ಬೇಕಿಲ್ಲ. ದಶಕಗಳ ಹಿಂದೆ ಪಂಜಾಬ್‌ನಲ್ಲಿ ಭಯೋತ್ಪಾದನೆ ಪರಾಕಾಷ್ಠತೆ ತಲುಪಿದ್ದ ವೇಳೆ ಸಿಖ್‌ ಭಯೋತ್ಪಾದಕರು ಪೊಲೀಸರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದ್ದರು. ನಮ್ಮನ್ನು ರಕ್ಷಿಸುವ ಪೊಲೀಸರ ಮೇಲೆಯೇ ಉಗ್ರರು ದಾಳಿ ನಡೆಸುತ್ತಿದ್ದಾರೆ ಎಂದು ಜನರು ಸ್ವಯಂ ಪ್ರೇರಿತರಾಗಿ ಅರಿತುಕೊಂಡು ರಕ್ತ ಪಿಪಾಸುಗಳ ಷಡ್ಯಂತ್ರವನ್ನು ಹಿಮ್ಮೆಟ್ಟಿಸಿದ್ದರು. ಅದೇ ಮಾದರಿಯ ನಿಲುವನ್ನು ಕಾಶ್ಮೀರದ ಜನರೂ ತೆಗೆದುಕೊಳ್ಳಬೇಕಾಗಿದೆ. ಭಾರತ ಕೂಡ ಭಯೋತ್ಪಾದನೆ ನಿಲ್ಲುವವರೆಗೂ ಶಾಂತಿ ಮಾತುಕತೆ ಸಾಧ್ಯವಿಲ್ಲ ಎನ್ನುವುದನ್ನು ಪಾಕಿಸ್ತಾನಕ್ಕೆ ಇನ್ನೊಮ್ಮೆ ಬಲವಾಗಿಯೇ ಹೇಳಬೇಕಾಗಿದೆ.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

school

Karnataka; ಶಾಲಾ ಆಸ್ತಿ ಸಂರಕ್ಷಣೆ ಅಭಿಯಾನ ಎಲ್ಲ ಇಲಾಖೆಗಳಿಗೂ ಮಾದರಿ

Forest

Forest: ಅರಣ್ಯದಲ್ಲಿ ನಿರಂತರ ಗಣಿಗಾರಿಕೆ: ಸರಕಾರ ಚರ್ಚಿಸಿ ನಿರ್ಧರಿಸಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.