Mpox case; ಭಾರತದಲ್ಲಿ ಎಂಪಾಕ್ಸ್‌: ಸರಕಾರ ಮುನ್ನೆಚ್ಚರಿಕೆ ವಹಿಸಲಿ


Team Udayavani, Sep 10, 2024, 6:00 AM IST

Mpox case; ಭಾರತದಲ್ಲಿ ಎಂಪಾಕ್ಸ್‌: ಸರಕಾರ ಮುನ್ನೆಚ್ಚರಿಕೆ ವಹಿಸಲಿ

ಆಫ್ರಿಕಾ ಖಂಡದ ದೇಶಗಳಲ್ಲಿ ಆತಂಕ ಸೃಷ್ಟಿಸಿರುವ ಮಂಗನ ಸಿಡುಬು (ಎಂಪಾಕ್ಸ್‌) ಭಾರತಕ್ಕೂ ಕಾಲಿಟ್ಟಿರುವ ಹಾಗಿದೆ. ವಿದೇಶದಿಂದ ಭಾರತಕ್ಕೆ ಆಗಮಿಸಿದ ವ್ಯಕ್ತಿಯೊಬ್ಬರಿಗೆ ಎಂಪಾಕ್ಸ್‌ ಸೋಂಕಿರಬಹುದೆಂದು ಕೇಂದ್ರ ಆರೋಗ್ಯ ಇಲಾಖೆಯು ಶಂಕಿಸಿದ್ದು, ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕವಾಗಿ ಇರಿಸಿ, ತೀವ್ರ ನಿಗಾ ವಹಿಸಲಾಗಿದೆ. ಸದ್ಯಕ್ಕೆ ಭಾರತದ ಮಟ್ಟಿಗೆ ತೀರಾ ಆತಂಕ ಪಡುವ ಅಗತ್ಯವಿಲ್ಲವಾದರೂ, ಮುಂಜಾಗ್ರತೆಯನ್ನು ಕೈಗೊಳ್ಳುವುದು ಅತ್ಯಗತ್ಯ.

ಮಂಗನ ಸಿಡುಬು ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಯು 12 ಆಫ್ರಿಕನ್‌ ದೇಶಗಳಲ್ಲಿ “ತುರ್ತು ಪರಿಸ್ಥಿತಿ’ ಘೋಷಣೆ ಮಾಡಿದ 3 ವಾರಗಳ ಬಳಿಕ ಭಾರತದಲ್ಲಿ ಶಂಕಿತ ಎಂಪಾಕ್ಸ್‌ ಪ್ರಕರಣದ ವರದಿಯಾಗಿದೆ. ಆಥೋìಪಾಕ್ಸ್‌ ವೈರಸ್‌ ಕುಲಕ್ಕೆ ಸೇರಿದ ಈ ಸೋಂಕು ಸಿಡುಬು ರೋಗದ ಸಾಮ್ಯತೆ ಹೊಂದಿದೆ. ಇದನ್ನು 2 ಕ್ಲೇಡ್‌ಗಳಲ್ಲಿ ವಿಂಗಡಿಸಲಾಗಿದ್ದು, ಕಾಂಗೊ ಬೇಸಿನ್‌ ಒಂದು ಕ್ಲೇಡ್‌ ಆದರೆ ಮತ್ತೂಂದು ಪಶ್ಚಿಮ ಆಫ್ರಿಕಾ ಕ್ಲೇಡ್‌. ಕಾಂಗೊ ಬೇಸಿನ್‌ ಕ್ಲೇಡ್‌ ಹಲವು ಗಂಭೀರ ಆರೋಗ್ಯ ಸಮಸ್ಯೆಗಳಾದ ನ್ಯುಮೋನಿಯಾ, ಬ್ಯಾಕ್ಟೀರಿಯಾ ಸೋಂಕು ಹಾಗೂ ಉಸಿರಾಟದ ತೊಂದರೆ ಉಂಟು ಮಾಡುತ್ತದೆ. ಪಶ್ಚಿಮ ಆಫ್ರಿಕಾ ಕ್ಲೇಡ್‌ ಕೊಂಚ ಕಡಿಮೆ ಅಪಾಯಕಾರಿಯಾಗಿದ್ದು, ದೇಹದಲ್ಲಿ ಗುಳ್ಳೆಗಳು ಹಾಗೂ ಜ್ವರದಂತಹ ಲಕ್ಷಣಗಳಿರುತ್ತವೆ. ಭಾರತದಲ್ಲಿ ಯಾವ ಮಾದರಿಯ ಎಂಪಾಕ್ಸ್‌ ಸೋಂಕು ಪತ್ತೆಯಾಗಿದೆ ಎಂಬುದು ಇನ್ನೂ ಗೊತ್ತಾಗಿಲ್ಲ.

ಸೋಂಕಿತ ಪ್ರಾಣಿಗಳ ನೇರ ಸಂಪರ್ಕದಿಂದ ಮನುಷ್ಯರಿಗೆ ಎಂಪಾಕ್ಸ್‌ ಹರಡುತ್ತದೆ. ಸೋಂಕಿತ ಮನುಷ್ಯನ ಉಸಿರಾಟದಿಂದ ಹೊರಬರುವ ಸೋಂಕಿನ ಕಣಗಳು ಬೇರೆಯವರಿಗೆ ತಗುಲಿ ಹರಡಬಹುದು. ಗರ್ಭಿಣಿಗೆ ಸೋಂಕು ತಗುಲಿದರೆ ಆಕೆಯಿಂದ ಭ್ರೂಣಕ್ಕೂ ತಗುಲುವ ಸಾಧ್ಯತೆ ಇರುವ ಎಂಪಾಕ್ಸ್‌ ಸೋಂಕಿಗೆ ಸದ್ಯಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಆದರೆ ಸೂಕ್ತ ಆರೈಕೆ ಹಾಗೂ ಔಷಧಗಳಿಂದ ರೋಗದ ಲಕ್ಷಣಗಳನ್ನು ಕ್ಷೀಣಗೊಳಿಸಬಹುದು. ಸಂಭಾವ್ಯ ಸೋಂಕು ಪರಿಸ್ಥಿತಿಯನ್ನು ಎದುರಿಸಲು ಎಲ್ಲ ಆಸ್ಪತ್ರೆಗಳನ್ನು ಸಿದ್ಧಪಡಿಸುವುದು ಅಗತ್ಯವಾಗಿದೆ.

ಭಾರತ ಮಾತ್ರವಲ್ಲದೇ ಇಡೀ ಜಗತ್ತೇ ನರಳುವಂತೆ ಮಾಡಿದ್ದ ಕೋವಿಡ್‌-19 ಸೋಂಕಿನಷ್ಟು ಎಂಪಾಕ್ಸ್‌ ಮಾರಣಾಂತಿಕವಲ್ಲ. ತಜ್ಞರ ಪ್ರಕಾರ ಕೋವಿಡ್‌ನ‌ಷ್ಟು ದೊಡ್ಡ ಮಟ್ಟದಲ್ಲಿ ಸಾಂಕ್ರಾಮಿಕ ಪರಿಸ್ಥಿತಿ ಉದ್ಭವಿಸುವ ಅವಕಾಶವೂ ಇಲ್ಲ. ಹಾಗೆಂದು ಮಂಗನ ಸಿಡುಬು ವಿಷಯದಲ್ಲಿ ನಿರ್ಲಕ್ಷÂ ವಹಿಸುವಂತೆಯೂ ಇಲ್ಲ. ಸಂಭಾವ್ಯ ಸೋಂಕು ಪ್ರಸರಣ ಹಾಗೂ ಆರೈಕೆಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಸಜ್ಜುಗೊಳಿಸುವುದು ಸರಕಾರದ ಮೊದಲ ಕರ್ತವ್ಯವಾಗಬೇಕು. ಈ ವಿಷಯದಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳ ಸಮನ್ವಯದ ಮೂಲಕ ಕೆಲಸ ಮಾಡುವುದು ಅತ್ಯಗತ್ಯವಾಗಿದೆ.

ಕೆಲವು ದಿನಗಳ ಹಿಂದೆ ನಮ್ಮ ನೆರೆಯ ಪಾಕಿಸ್ಥಾನದಲ್ಲಿ ಎಂಪಾಕ್ಸ್‌ ಸೋಂಕಿನ ಮೊದಲ ಪ್ರಕರಣ ಪತ್ತೆಯಾದಾಗಲೇ ಭಾರತವು ಮುನ್ನೆಚ್ಚರಿಕೆ ಕ್ರಮಗಳನ್ನು ಘೋಷಿಸಿತ್ತು. ಇದೀಗ ಮಂಕಿಪಾಕ್ಸ್‌ ಶಂಕಿತರನ್ನು ತಪಾಸಣೆಗೆ ಒಳಪಡಿಸಿ, ಶಂಕಿತರು ಹಾಗೂ ಕಾಯಿಲೆ ದೃಢಪಟ್ಟವರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾಗಿರಿಸುವುದು, ತರಬೇತಿ ಪಡೆದಿರುವ ವೈದ್ಯರು ಹಾಗೂ ಚಿಕಿತ್ಸೆಗೆ ಸಕಲ ಸೌಲಭ್ಯಗಳನ್ನು ಇರುವಂತೆ ನೋಡಿಕೊಳ್ಳುವುದು ಸೇರಿದಂತೆ ಹಲವು ಮಾರ್ಗದರ್ಶಿಗಳನ್ನು ಕೇಂದ್ರ ಇಲಾಖೆ ನೀಡಿದ್ದು, ಸ್ವಾಗತಾರ್ಹ ನಡೆಯಾಗಿದೆ. ಇದರ ಜತೆಗೆ, ಬಹಳ ಮುಖ್ಯವಾದ ಕೆಲಸ ಎಂದರೆ ಈಗಾಗಲೇ ಮಂಗನ ಸಿಡುಬು ಬಗ್ಗೆ ಜನರಲ್ಲಿ ಶುರುವಾಗಿರುವ ಭೀತಿಯನ್ನು ಹೋಗಲಾಡಿಸುವುದು. ಇದು ಮಹತ್ವದ ಹೆಜ್ಜೆಯಾಗಲಿದೆ. ಹಾಗಾಗಿ ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳೆರಡೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.